MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಮಹಾದುರಂತ; ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಮಹಾದುರಂತ; ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ವಿಮಾನವು ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲು ವಿಫಲವಾಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ವಿಮಾನ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು.

1 Min read
Author : Mahmad Rafik
Published : Apr 20 2026, 09:33 AM IST
Share this Photo Gallery
  • FB
  • TW
  • Linkdin
  • Whatsapp
15
ಹುಬ್ಬಳ್ಳಿ ವಿಮಾನ ನಿಲ್ದಾಣದ
Image Credit : Social Media @aaihbxairport

ಹುಬ್ಬಳ್ಳಿ ವಿಮಾನ ನಿಲ್ದಾಣದ

ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಹಾದುರಂತವೊಂದು ತಪ್ಪಿದ್ದು, ನೂರಾರು ಪ್ರಯಾಣಿಕರು ಬದುಕುಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಸುಮಾರು ನಾಲ್ಕು ಗಂಟೆಗಳ ಆಕಾಶದಲ್ಲಿ ಸುತ್ತಿದೆ. ಕೊನೆಗೆ ವಿಮಾನ ಬೆಂಗಳೂರಿನ ಏರ್ಪೋಟ್‌ನಲ್ಲಿ ಸಂಜೆ 7.30ಕ್ಕೆ ಲ್ಯಾಂಡ್ ಆಗಿದೆ.

25
Fly91 ಏರ್ ಲೈನ್ಸ್
Image Credit : Social Media @aaihbxairport

Fly91 ಏರ್ ಲೈನ್ಸ್

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್ IC3401 (ATRTURBOPROP AT7) ನಿಗದಿಯಂತೆ ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ವಿಮಾನದಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡ ಹಿನ್ನೆಲೆ ಮುಂಡಗೋಡ, ದಾವಣಗೆರೆ , ಶಿವಮೊಗ್ಗ ಆಗಸದಲ್ಲಿಯೇ ಸುತ್ತಾಡಿದೆ. ಇದೇ ವೇಳೆ ವಿಮಾನ ಪೈಲಟ್‌ನ ನಿಯಂತ್ರಣ ಕಳೆದುಕೊಂಡಿತ್ತು ಎಂಬ ಮಾತುಗಳು ಸಹ ಕೇಳಿ ಬಂದಿವೆ.

Related Articles

Related image1
Hubballi KMCRI : ರಾಜ್ಯದ ಮೊದಲ ಜೀವಾಮೃತ ಬ್ಯಾಂಕ್‌ಗೆ 7147 ಮಾತೆಯರ ಎದೆಹಾಲು ದಾನ!
Related image2
Hubballi: ನೈಋತ್ಯ ರೈಲ್ವೆಯಿಂದ ದಾಖಲೆಗಳ ಮೇಲೆ ದಾಖಲೆ; ಆದಾಯ ಕೇಳಿದ್ರೆ ಶಾಕ್ ಆಗ್ತೀರಿ!
35
ಪ್ರಯಾಣಿಕರು ಕಣ್ಣೀರು
Image Credit : Social Media @aaihbxairport

ಪ್ರಯಾಣಿಕರು ಕಣ್ಣೀರು

ಸುಮಾರು ಸಮಯ ವಿಮಾನ ಸುತ್ತಾಟದಿಂದ ಆತಂಕಗೊಂಡ ಪ್ರಯಾಣಿಕರು ಕಣ್ಣೀರು ಹಾಕುತ್ತಾ ತಮ್ಮ ಕುಟುಂಬಸ್ಥರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ. ಕೆಲ ಪ್ರಯಾಣಿಕರು ಭಯದಿಂದ ಕಣ್ಣೀರು ಹಾಕಿರುವ ವಿಡಿಯೋ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ. ಪೈಲಟ್ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಆರೋಪ ಕೇಳಿ ಬಂದಿದೆ.

45
ವಿಡಿಯೋ
Image Credit : Social Media @aaihbxairport

ವಿಡಿಯೋ

ಕೆಲ ಪ್ರಯಾಣಿಕರು ನಮ್ಮನ್ನು ವಾಪಸ್‌ ಹೈದಾರಾಬಾದ್‌ಗೆ ಕರೆದುಕೊಂಡು ಹೋಗಿ, ಇಲ್ಲವಾದ್ರೆ ಸಮೀಪದ ಬೆಳಗಾವಿ ಅಥವಾ ಬೆಂಗಳೂರಿನ ನಿಲ್ದಾಣದಲ್ಲಾದ್ರೂ ವಿಮಾನ ಲ್ಯಾಂಡ್ ಮಾಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಏನಾಗ್ತಿದೆ ಎಂಬುದರ ಬಗ್ಗೆ ನಮಗೆಲ್ಲರಿಗೂ ಮಾಹಿತಿ ನೀಡಬೇಕು ಎಂದು ಪ್ರಯಾಣಿಕರೊಬ್ಬರು ಸಿಬ್ಬಂದಿ ಬಳಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬೊಲಿವಿಯಾದಲ್ಲಿ ಸರಕು ಸಾಗಣೆ ವಿಮಾನ ಪತನ : 15 ಮಂದಿ ಸಾವು

55
ಹವಾಮಾನ ವೈಪರೀತ್ಯ
Image Credit : Social Media @aaihbxairport

ಹವಾಮಾನ ವೈಪರೀತ್ಯ

ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮೆಲ್ಲರ ಸುರಕ್ಷತೆಯೇ ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಯಾರೂ ಆತಂಕಕ್ಕೊಳಗಾಗಬೇಡಿ. ಸೂಚಿಸಲಾಗುತ್ತಿರುವ ನಿಯಮಗಳನ್ನು ಪಾಲನೆ ಮಾಡಿಕೊಳ್ಳಿ ಎಂದು ಸಿಬ್ಬಂದಿ ಪ್ರಯಾಣಿಕರಿಗೆ ಹೇಳುತ್ತಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಅಂತಿಮವಾಗಿ ವಿಮಾನ ಸುರಕ್ಷಿತವಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. Fly91 ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: 121 ಜನರಿದ್ದ ಸೇನಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪತನ! 60ಕ್ಕೂ ಅಧಿಕ ಸಾವು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಹುಬ್ಬಳ್ಳಿ
ವಿಮಾನ ನಿಲ್ದಾಣ

Latest Videos
Recommended Stories
Recommended image1
ಹೆಣ್ಣು ಕರು ಜನನಕ್ಕೆ ವೀರ್ಯ ಬಳಕೆ ಪ್ರಯೋಗ ಯಶಸ್ವಿ
Recommended image2
ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವ ಅಳಿಯ ಇಬ್ಬರೂ ನೀರುಪಾಲು
Recommended image3
Bengaluru ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ
Related Stories
Recommended image1
Hubballi KMCRI : ರಾಜ್ಯದ ಮೊದಲ ಜೀವಾಮೃತ ಬ್ಯಾಂಕ್‌ಗೆ 7147 ಮಾತೆಯರ ಎದೆಹಾಲು ದಾನ!
Recommended image2
Hubballi: ನೈಋತ್ಯ ರೈಲ್ವೆಯಿಂದ ದಾಖಲೆಗಳ ಮೇಲೆ ದಾಖಲೆ; ಆದಾಯ ಕೇಳಿದ್ರೆ ಶಾಕ್ ಆಗ್ತೀರಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved