ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ
ರಾಷ್ಟ್ರೀಯ ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಬೆನ್ನಲ್ಲೇ ಆದಿ ಚುಂಚನಗಿರಿ ಮಠಾಧೀಶರನ್ನು ಭೇಟಿಯಾಗಿದ್ದಾರೆ. ಅತ್ತ ಸಿದ್ದರಾಮಯ್ಯ ಶೃಂಗೇರಿ ಮತ್ತು ರಂಭಾಪುರ ಮಠ ರನ್ ಶುರುವಿತ್ತು ಕೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿ ಹೈಕಮಾಂಡ್ ಬಿಎಸ್‌ವೈ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿತ್ತು.
ರಾಷ್ಟ್ರೀಯ ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು ನಿರ್ಮಲಾನಂದ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನ್ ಯಾಕೆ ಅವರ ಬಗ್ಗೆ ಟೀಕೆ ಮಾಡಲಿ ಎಂದು ಹೇಳಿದ ಬಿಎಸ್‌ವೈ
ಅಪ್ಪಚ್ಚು ರಂಜನ್ ಬೆಂಬಲಿಗ ಮೊಟ್ಟೆ ಎಸೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಅದರ ಬಗ್ಗೆ ನನಗೆ ಗೊತ್ತಿಲ್ಲ. ಮೊಟ್ಟೆ ಎಸೆದವರು ಯಾರೇ ಇದ್ರೂ ಕ್ರಮ ಕೈಗೊಳ್ತೀವಿ ಅಂತ ಯಡಿಯೂರಪ್ಪ ಹೇಳಿಕೆ