- Home
- News
- State
- ಸರ್ಕಾರದ ಫ್ರೀ ಯೋಜನೆ, ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್: ನಾಲ್ಕು ಲವ್ ಬರ್ಡ್ಸ್ಗೆ ಬರೋಬ್ಬರಿ 444ರೂ. ಟಿಕೆಟ್!
ಸರ್ಕಾರದ ಫ್ರೀ ಯೋಜನೆ, ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್: ನಾಲ್ಕು ಲವ್ ಬರ್ಡ್ಸ್ಗೆ ಬರೋಬ್ಬರಿ 444ರೂ. ಟಿಕೆಟ್!
ಇಂದು ಬೆಳಗ್ಗೆ 08.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್ಆರ್ಟಿಸಿ ಬಸ್ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದಿದ್ದರು.

ಬೆಂಗಳೂರು (ಮಾ.27): ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಲ್ಕು ಲವ್ ಬರ್ಡ್ಸ್ಗಳಿಗೆ ಕಂಡಕ್ಟರ್ ಬರೋಬ್ಬರಿ 444 ರೂ. ಟಿಕೆಟ್ ನೀಡಿದ್ದಾರೆ.
ಇಂದು ಬೆಳಗ್ಗೆ 08.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್ಆರ್ಟಿಸಿ ಬಸ್ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದಿದ್ದರು.
ಆದರೆ ಅಜ್ಜಿ-ಮೊಮ್ಮಗಳ ಕೈಯಲ್ಲಿದ್ದ ಪಂಜರದೊಳಗಿದ್ದ ನಾಲ್ಕು ಲವ್ ಬರ್ಡ್ ಗಮನಿಸಿದ ಕಂಡಕ್ಟರ್ ಬರೋಬ್ಬರಿ 444 ರೂಪಾಯಿ ಟಿಕೆಟ್ ಹರಿದಿದ್ದಾನೆ.
ಸರ್ಕಾರದ ಉಚಿತ ಯೋಜನೆಯಿಂದಾಗಿ ಅಜ್ಜಿ ಮೊಮ್ಮಗಳಿಗೆ ಫ್ರೀ ಟಿಕೆಟ್ ಸಿಕ್ಕರೆ, ನಾಲ್ಕು ಲವ್ ಬರ್ಡ್ಸ್ ಪಕ್ಷಿಗಳಿಗೆ ಟಿಕೆಟ್ ಹಣ ಕೊಡುವಂತಾಗಿದೆ.
ಒಂದು ಪಕ್ಷಿಗೆ 111ರೂ. ನಂತೆ ನಾಲ್ಕು ಪಕ್ಷಿಗಳಿಗೆ 444ರೂ. ನೀಡಿ ಅಜ್ಜಿ-ಮೊಮ್ಮಗಳು ಮೈಸೂರಿಗೆ ಪ್ರಯಾಣಿಸಿದ್ದಾರೆ. ನಾಲ್ಕು ಮಕ್ಕಳು ಎಂದು ಟಿಕೆಟ್ನಲ್ಲಿ ನಮೂದಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ