Exclusive Breaking: ಜಿಲೆಟಿನ್ ಕಡ್ಡಿ ಮಾತ್ರವಲ್ಲ, ಮೋದಿ ಮಾರ್ಗದಲ್ಲಿ ಸಿಕ್ಕಿದ್ದು ಸ್ಪೋಟಕ!
ಪ್ರಧಾನಿ ಮೋದಿ ಸಾಗುವ ಕಗ್ಲಿಪುರ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಮತ್ತು ಬ್ಲಾಸ್ಟ್ ಸರ್ಕ್ಯೂಟ್ ಪತ್ತೆಯಾಗಿದ್ದು, ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ಸಂಬಂಧ ಎನ್‌ಐಎ ತನಿಖೆ ನಡೆಸುತ್ತಿದ್ದು, ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸ್ಪೋಟಕ ವಸ್ತು
ಪ್ರಧಾನಿ ನರೇಂದ್ರ ಮೋದಿ ಸಾಗಿಸುವ ಮಾರ್ಗ ಕಗ್ಲಿಪುರದಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಜಿಲೆಟಿನ್ ಕಡ್ಡಿ ಎಂದು ಮಾತ್ರ ಹೇಳಲಾಗಿತ್ತು. ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪೋಟಕ ವಸ್ತುಗಳ ವಸ್ತುವಿನ ಫೋಟೋ ಲಭ್ಯವಾಗಿದೆ.

ಸರ್ಕ್ಯೂಟ್ ಪತ್ತೆ
ದುಷ್ಕರ್ಮಿಗಳು ಸ್ಫೋಟಕ್ಕೆ ಬೇಕಾದ ಎಲ್ಲಾ ಸಿದ್ದತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಬ್ಲಾಸ್ಟ್ ಗೆ ಬೇಕಾದ ಸರ್ಕ್ಯೂಟ್ ಪತ್ತೆಯಾಗಿದೆ. ಸರ್ಕ್ಯೂಟ್ ನಲ್ಲಿ ಟೈಮರ್ ಅಂಡ್ ಡೇಟ್ ಫಿಕ್ಸ್ ಮಾಡಲು ಸಿದ್ದತೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಡೆಟೊನೇಟರ್ ಇಟ್ಟು ಟೈಮ್ ಫಿಕ್ಸ್ ಮಾಡಿದ್ರೆ ಸ್ಪೋಟವಾಗುವ ಸಾಧ್ಯತೆಗಳಿತ್ತು. ಈವರೆಗೆ ಕೇವಲ ಎರಡು ಜಿಲೆಟಿನ್ ಕಡ್ಡಿ ಎಂದು ಹೇಳಲಾಗುತ್ತಿತ್ತು.
ನಾಲ್ಕು ವಿಶೇಷ ತಂಡ
ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆಯ ಮೇರೆಗೆ ಪೊಲೀಸರ ತಂಡವೊಂದು ತಮಿಳುನಾಡಿಗೆ ತೆರಳಿದೆ ಎಂದು ತಿಳಿದು ಬಂದಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣದ ತನಿಖೆಗೆ ಒಟ್ಟು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಲೋಹಿತ್
ಪ್ರಧಾನಿ ಕಾರ್ಯಕ್ರಮಕ್ಕೂ ಮುನ್ನ ಬೆದರಿಕೆ ಕರೆ ಮಾಡಿದ್ದ ಲೋಹಿತ್ ಎಂಬಾತನನ್ನು ವಶಕ್ಕೆ ಪಡೆದಿರುವ ಕೋರಮಂಗಲ ಠಾಣೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಹಲವು ಆಯಾಮಗಳಲ್ಲಿ ಪೊಲೀಸರು ಲೋಹಿತ್‌ನನ್ನು ವಿಚಾರಣೆ ಮಾಡುತ್ತಿದ್ದಾರೆ. ಆತನ ಸಿಡಿಆರ್ ಮಾಹಿತಿ ಕಲೆ ಹಾಕಿ ಆತನ ಪಾಲಕರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಲೋಹಿತ್ ಈ ಹಿಂದೆಯೂ ಸ್ಥಳೀಯ ಪೊಲೀಸ್ ಠಾಣೆಗೆ ಈ ರೀತಿ ಬೆದರಿಕೆಯ ಕರೆಗಳು ಮಾಡಿದ್ದಾನೆ. ತಂದೆ ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದಾನೆ.
ಎನ್‌ಐಎ ಅಧಿಕಾರಿಗಳು
ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಸ್ಥಳಕ್ಕೆ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಮ್ಮಿಂದ ಮಾಹಿತಿ ಪಡೆದಿದ್ದಾರೆ. ಜತೆಗೆ ವಿಶೇಷ ತಂಡದಿಂದಲೂ ವಿವಿಧ ಆಯಾಮಾಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಎಸ್‌ಪಿ ಆರ್.ಶ್ರೀನಿವಾಸ್ ಗೌಡ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

