MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರಾಜ್ಯದ ಜನತೆಗೆ ಸಿಹಿಸುದ್ದಿ: ಗಣರಾಜ್ಯೋತ್ಸವದಲ್ಲಿ ಪ್ರದರ್ಶನಕ್ಕೆ ಸಿದ್ಧಗೊಂಡ ಕನ್ನಡಿಗರ ಟ್ಯಾಬ್ಲೋ

ರಾಜ್ಯದ ಜನತೆಗೆ ಸಿಹಿಸುದ್ದಿ: ಗಣರಾಜ್ಯೋತ್ಸವದಲ್ಲಿ ಪ್ರದರ್ಶನಕ್ಕೆ ಸಿದ್ಧಗೊಂಡ ಕನ್ನಡಿಗರ ಟ್ಯಾಬ್ಲೋ

ದೆಹಲಿ (ಜ.22): ಗಣರಾಜ್ಯೋತ್ಸವದ ವೇಳೆ ದೆಹಲಿಯ ಕರ್ತವ್ಯ ಪಥ್ ನಲ್ಲಿ ಪ್ರದರ್ಶನಗೊಳ್ಳಿದೆ ಕರ್ನಾಟಕ ಟ್ಯಾಬ್ಲೋ. ತ್ಯಾಗ, ನಿಸ್ವಾರ್ಥ ಸೇವೆಯ ಪ್ರತಿರೂಪ ನಾರಿ ಶಕ್ತಿ ಈ ಬಾರಿಯ ಟ್ಯಾಬ್ಲೋ ಸಿದ್ಧಗೊಂಡಿದೆ.ದೇಶದ ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ದಚಿತರ ಪ್ರದರ್ಶನಕ್ಕೆ ಅನುಮತಿ ನೀಡುವ ಕುರಿತಾಗಿ ವಿವಾದ ಆರಂಭವಾಗಿತ್ತು. ನಂತರ ರಾಜ್ಯದ ಕೇಂದ್ರ ಸಚುವರು, ಸಂಸದರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರಂತರ ಒತ್ತಡದ ಫಲದಿಂದ ಸ್ತಬ್ದಚಿತ್ರ ಪ್ರದರ್ಶನಕ್ಕೆ ಒಪ್ಪಿಗೆ ದೊರೆತಿತ್ತು. ಈಗ ಸ್ತಬ್ದಚಿತ್ರವೂ ಸಿದ್ಧಗೊಂಡಿದ್ದು, ಅದರ ಅಪರೂಪದ ದೃಶ್ಯಗಳನ್ನು ನಾವು ಇಲ್ಲಿ ಕಣ್ತುಂಬಿಕೊಳ್ಳಬಹುದು.ಗಣರಾಜ್ಯೋತ್ಸವದ ವೇಳೆ ದೆಹಲಿಯ ಕರ್ತವ್ಯ ಪಥ್ ನಲ್ಲಿ ಪ್ರದರ್ಶನಗೊಳ್ಳಿದೆ ಕರ್ನಾಟಕ ಟ್ಯಾಬ್ಲೋ. ತ್ಯಾಗ, ನಿಸ್ವಾರ್ಥ ಸೇವೆಯ ಪ್ರತಿರೂಪ ನಾರಿ ಶಕ್ತಿ ಈ ಬಾರಿಯ ಟ್ಯಾಬ್ಲೋ ಸಿದ್ಧಗೊಂಡಿದೆ. ಪದ್ಮ ಪ್ರಶಸ್ತಿ ಪುರಸ್ಕೃತ ವೃಕ್ಷ ಮಾತೆಯರಾದ ಸಾಲುಮರದ ತಿಮ್ಮಕ್ಕ. ತುಳಸೀಗೌಡ ಹಾಲಕ್ಕಿ ಹಾಗೂ ಸೂಲಗಿತ್ತಿ ನರಸಮ್ಮ ಅವರ ಸ್ತಬ್ಧಚಿತ್ರ ಪ್ರದರ್ಶನ ಆಗುತ್ತಿದೆ. ಈ ಹಿರಿಯ ಮಹಿಳೆಯರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವೂ ಆಗಿದ್ದು, ಅವರು ನಾಡಿಗಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಿಸುವ ಅಭೂತಪೂರ್ವ ಕ್ಷಣವಾಗಲಿದೆ. Republic Day parade Tableau: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಅನುಮತಿಕೊನೆ ಕ್ಷಣದಲ್ಲಿ ಕರ್ನಾಟಕಕ್ಕೆ ದೊರೆತ ಅವಕಾಶ : ರಾಜ್ಯದ ಸ್ತಬ್ದ ಚಿತ್ರ ಪ್ರದರ್ಶನ ಮಾಡುವುದಕ್ಕೆ ಕೇಂದ್ರದ ಸಮಿತಿಯು ಒಪ್ಪಿಗೆ ನೀಡಿರಲಿಲ್ಲ. ಆದರೆ, ಸಮಿತಿ ನಿರೀಕ್ಷೆ ಮಾಡಿದ್ದ ಎಲ್ಲ ಮಾನದಂಡಗಳನ್ನು ಪೂರೈಸಿದ ಕರ್ನಾಟಕ ರಾಜ್ಯದ ಸ್ತಬ್ದಚಿತ್ರಕ್ಕೆ ಕೊನೇ ಕ್ಷಣದಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅನುಮತಿ ದೊರೆತಿತ್ತು. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆ ಕನ್ನಡಿಗರ ಆಕ್ರೋಶ ಕ್ಕೆ ಮಣಿದು ಟ್ಯಾಬ್ಲೋ ಗೆ ಅವಕಾಶ ನೀಡಿತ್ತು.ಏಳು ದಿನದಲ್ಲಿ ಟ್ಯಾಬ್ಲೋ ಸಿದ್ಧ: ಕರ್ನಾಟಕದ ಪ್ರಸಿದ್ಧ ಈ ಟ್ಯಾಬ್ಲೋವನ್ನು ಕನ್ನಡದ ಪ್ರಸಿದ್ಧ ಕಲಾವಿದರು ಕೇವಲ ಏಳೇ ದಿನಗಳಲ್ಲಿ ಸಿದ್ದಪಡಿಸಿದ್ದಾರೆ. ಕಲಾವಿದ ಶಶಿಧರ್ ಅಡಪ ಅವರ ನೇತೃತ್ವದ ತಂಡದಲ್ಲಿ ವಿನ್ಯಾಸ ಮಾಡಲಾಗಿದೆ. ವಾರ್ತಾ ಇಲಾಖೆಯ ಆಯುಕ್ತ ಡಾ.ಹರ್ಷ ನೇತೃತ್ವದಲ್ಲಿ ಮೇಲುಸ್ತುವಾರಿ ವಹಿಸಿಕೊಂಡಿದ್ದರು. ಒಟ್ಟಾರೆ ರಾಜ್ಯದ ಟ್ಯಾಬ್ಲೋ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪ್ರದರ್ಶನ ಮಾಡುತ್ತಿರುವುದಕ್ಕೆ ಭಾರಿ ಸಂತಸ ವ್ಯಕ್ತವಾಗಿದೆ.

1 Min read
Author : Sathish Kumar KH
| Updated : Jan 22 2023, 10:38 PM IST
Share this Photo Gallery
  • FB
  • TW
  • Linkdin
  • Whatsapp
14

ತ್ಯಾಗ, ನಿಸ್ವಾರ್ಥ ಸೇವೆಯ ಪ್ರತಿರೂಪ ನಾರಿ ಶಕ್ತಿ ಈ ಬಾರಿಯ ಟ್ಯಾಬ್ಲೋ ಸಿದ್ಧಗೊಂಡಿದೆ. ಪದ್ಮ ಪ್ರಶಸ್ತಿ ಪುರಸ್ಕೃತ ವೃಕ್ಷ ಮಾತೆಯರಾದ ಸಾಲುಮರದ ತಿಮ್ಮಕ್ಕ. ತುಳಸೀಗೌಡ ಹಾಲಕ್ಕಿ ಹಾಗೂ ಸೂಲಗಿತ್ತಿ ನರಸಮ್ಮ ಅವರ ಸ್ತಬ್ಧಚಿತ್ರ ಪ್ರದರ್ಶನ ಆಗುತ್ತಿದೆ. 

24

ಕರ್ನಾಟಕದ ಪ್ರಸಿದ್ಧ ಈ ಟ್ಯಾಬ್ಲೋವನ್ನು ಕನ್ನಡದ ಪ್ರಸಿದ್ಧ ಕಲಾವಿದರು ಕೇವಲ ಏಳೇ ದಿನಗಳಲ್ಲಿ ಸಿದ್ದಪಡಿಸಿದ್ದಾರೆ. ಕಲಾವಿದ ಶಶಿಧರ್ ಅಡಪ ಅವರ ನೇತೃತ್ವದ ತಂಡದಲ್ಲಿ ವಿನ್ಯಾಸ ಮಾಡಲಾಗಿದೆ. 

34

ವಾರ್ತಾ ಇಲಾಖೆಯ ಆಯುಕ್ತ ಡಾ.ಹರ್ಷ ನೇತೃತ್ವದಲ್ಲಿ ಮೇಲುಸ್ತುವಾರಿ ವಹಿಸಿಕೊಂಡಿದ್ದರು. ಒಟ್ಟಾರೆ ರಾಜ್ಯದ ಟ್ಯಾಬ್ಲೋ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪ್ರದರ್ಶನ ಮಾಡುತ್ತಿರುವುದಕ್ಕೆ ಭಾರಿ ಸಂತಸ ವ್ಯಕ್ತವಾಗಿದೆ.

44

ರಾಜ್ಯದ ಸ್ತಬ್ದ ಚಿತ್ರ ಪ್ರದರ್ಶನ ಮಾಡುವುದಕ್ಕೆ ಕೇಂದ್ರದ ಸಮಿತಿಯು ಒಪ್ಪಿಗೆ ನೀಡಿರಲಿಲ್ಲ. ಆದರೆ, ಸಮಿತಿ ನಿರೀಕ್ಷೆ ಮಾಡಿದ್ದ ಎಲ್ಲ ಮಾನದಂಡಗಳನ್ನು ಪೂರೈಸಿದ ಕರ್ನಾಟಕ ರಾಜ್ಯದ ಸ್ತಬ್ದಚಿತ್ರಕ್ಕೆ ಕೊನೇ ಕ್ಷಣದಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅನುಮತಿ ದೊರೆತಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗಣರಾಜ್ಯೋತ್ಸವ

Latest Videos
Recommended Stories
Recommended image1
ಬೆಂಗಳೂರಲ್ಲಿ ಕಲರ್ಸ್ ಮೊಬೈಲ್ ಅಂಗಡಿ ಮಾಲೀಕನಿಗೆ ಕಲರ್ ಕಲರ್ ಕಾಗೆ ಹಾರಿಸಿದ ಖತರ್ನಾಕ್ ಖದೀಮ!
Recommended image2
ದಾಖಲೆ ಮಾಡಿದ ಉತ್ತರ ಕನ್ನಡದ ಅಪರೂಪದ ರಾಜಕಾರಣಿ, ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್‌ ಹೆಗಡೆ!
Recommended image3
ವಿದ್ಯಾರ್ಥಿಗಳ ಬೇಸಿಗೆ ರಜಾ ಮಜಾ ಕಟ್‌ ಮಾಡದಂತೆ ಕರ್ನಾಟಕದ ಶಾಲೆಗಳಿಗೆ CBSE ಖಡಕ್‌ ಸೂಚನೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved