MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • News
  • State
  • ಗೃಹಲಕ್ಷ್ಮಿ ಯಾವ ಮಹಿಳೆಯರಿಗೆ ಸ್ಥಗಿತವಾಗುತ್ತೆ? ಕ್ಲಾರಿಟಿ ಕೊಟ್ಟ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ದಿನೇಶ್ ಗೂಳಿಗೌಡ!

ಗೃಹಲಕ್ಷ್ಮಿ ಯಾವ ಮಹಿಳೆಯರಿಗೆ ಸ್ಥಗಿತವಾಗುತ್ತೆ? ಕ್ಲಾರಿಟಿ ಕೊಟ್ಟ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ದಿನೇಶ್ ಗೂಳಿಗೌಡ!

ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ವದಂತಿಗಳನ್ನು ಸರ್ಕಾರ ತಳ್ಳಿಹಾಕಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು, 'ಜೀವಿತ ಪ್ರಮಾಣ ಪತ್ರ' ಕಡ್ಡಾಯಗೊಳಿಸುವ ಚಿಂತನೆ ನಡೆದಿದ್ದು, ಅರ್ಹರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

2 Min read
Author : Sathish Kumar KH
Published : Jun 11 2026, 06:38 PM IST
Share this Photo Gallery
  • FB
  • TW
  • Linkdin
  • Whatsapp
16
ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲ್ಲ
Image Credit : stockPhoto

ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲ್ಲ

ಬೆಂಗಳೂರು (ಜೂ.11): ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ 'ಗ್ಯಾರಂಟಿ' ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಗಾಳಿ ಸುದ್ದಿಗೆ ಈಗ ತೆರೆ ಬಿದ್ದಿದೆ. 'ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಬದಲಿಗೆ ಮೃತಪಟ್ಟವರು ಮತ್ತು ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ ಯೋಜನೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲಾಗುತ್ತಿದೆ' ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಮೃತಪಟ್ಟವರ ಖಾತೆಗೆ ಹೋಗುತ್ತಿದೆ ಹಣ!
Image Credit : our own

ಮೃತಪಟ್ಟವರ ಖಾತೆಗೆ ಹೋಗುತ್ತಿದೆ ಹಣ!

ರಾಜ್ಯದಲ್ಲಿ ಸುಮಾರು 1.24 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ, ಇತ್ತೀಚಿನ ಸಮೀಕ್ಷೆಯ ಪ್ರಕಾರ ಒಂದು ಆಘಾತಕಾರಿ ಸತ್ಯ ಹೊರಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಮಹಿಳೆಯರು ಮರಣ ಹೊಂದಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 2,000 ರೂಪಾಯಿ ಜಮೆಯಾಗುತ್ತಲೇ ಇದೆ. ಈ ರೀತಿ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಸರ್ಕಾರ ಈಗ 'ಆಡಿಟಿಂಗ್' ಮೊರೆ ಹೋಗಿದೆ.

Related Articles

Related image1
Gruhalakshmi Scheme Shock: ಮೊದಲು ಅರ್ಜಿ ಹಾಕಿದ್ರೆ ಸಾಕು ಅಂದ್ರು ಈಗ 17 ಜಿಲ್ಲೇಲಿ 1.1 ಲಕ್ಷ ಜನ ಗೃಹಲಕ್ಷ್ಮಿ ಸ್ಕೀಂನಿಂದ ಔಟ್‌!
Related image2
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!
36
ಜಿಲ್ಲಾವಾರು ಮರಣ ಪ್ರಕರಣಗಳ ಅಂಕಿ-ಅಂಶ:
Image Credit : Social Media

ಜಿಲ್ಲಾವಾರು ಮರಣ ಪ್ರಕರಣಗಳ ಅಂಕಿ-ಅಂಶ:

ಸರ್ಕಾರ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 15,850 ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 14,038, ತುಮಕೂರಿನಲ್ಲಿ 12,139 ಮತ್ತು ಮೈಸೂರಿನಲ್ಲಿ 11,541 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಮೃತಪಟ್ಟವರ ಹೆಸರಿನಲ್ಲಿ ಹಣ ದುರುಪಯೋಗವಾಗುವುದನ್ನು ತಡೆಯುವುದು ಸರ್ಕಾರದ ಈಗಿನ ಆದ್ಯತೆಯಾಗಿದೆ.

46
ಜೀವಿತ ಪ್ರಮಾಣ ಪತ್ರ (Life Certificate) ಕಡ್ಡಾಯ?
Image Credit : Asianet News

ಜೀವಿತ ಪ್ರಮಾಣ ಪತ್ರ (Life Certificate) ಕಡ್ಡಾಯ?

ಈ ಲೋಪದೋಷಗಳನ್ನು ಸರಿಪಡಿಸಲು ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ. 'ಅರ್ಹರಿಗೆ ಮಾತ್ರ ಹಣ ತಲುಪಲು ಫಲಾನುಭವಿಗಳಿಗೆ 'ಜೀವಿತ ಪ್ರಮಾಣ ಪತ್ರ' (Life Certificate) ಸಲ್ಲಿಕೆಯನ್ನು ಕಡ್ಡಾಯಗೊಳಿಸಬೇಕು. ಇದರಿಂದ ಮೃತಪಟ್ಟವರು ಹಾಗೂ ಅನರ್ಹರನ್ನು ಪತ್ತೆ ಹಚ್ಚುವುದು ಸುಲಭವಾಗುತ್ತದೆ' ಎಂದು ಅವರು ಮನವಿ ಮಾಡಿದ್ದಾರೆ.

56
ಅರ್ಹ ಫಲಾನುಭವಿಗಳಿಗೆ ಆತಂಕ ಬೇಡ:
Image Credit : Asianet News

ಅರ್ಹ ಫಲಾನುಭವಿಗಳಿಗೆ ಆತಂಕ ಬೇಡ:

ಯೋಜನೆಯ ಪರಿಷ್ಕರಣೆ ಎಂದರೆ ಯೋಜನೆ ನಿಲ್ಲಿಸುವುದಲ್ಲ. ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಮಹಿಳೆಗೆ ಇದರಿಂದ ತೊಂದರೆಯಾಗುವುದಿಲ್ಲ. ಸರ್ಕಾರದ ಹಣವು ದುರುಪಯೋಗವಾಗುವುದನ್ನು ತಡೆದು, ನಿಜವಾದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವುದೇ ಈ ಪರಿಷ್ಕರಣೆಯ ಮೂಲ ಉದ್ದೇಶವಾಗಿದೆ.

66
ವಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ:
Image Credit : our own

ವಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ:

'ಗೃಹಲಕ್ಷ್ಮಿ ಯೋಜನೆ ನಿಲ್ಲುತ್ತದೆ ಎಂದು ವಿರೋಧ ಪಕ್ಷದವರು ರಾಜಕೀಯ ಪ್ರೇರಿತ ಟೀಕೆಗಳನ್ನು ಮಾಡುತ್ತಿದ್ದಾರೆ. ಇದು ಕೇವಲ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಪ್ರಯತ್ನ. ಜನರು ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು' ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಯೋಜನೆಗೆ ಬೇಕಾದ ಅನುದಾನವನ್ನು ಸರ್ಕಾರ ಮೀಸಲಿಟ್ಟಿದ್ದು, ಯಾವುದೇ ಕಾರಣಕ್ಕೂ ಇದು ಸ್ಥಗಿತಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಅವರು ನೀಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಗೃಹಲಕ್ಷ್ಮಿ ಯೋಜನೆ
ಡಿ.ಕೆ. ಶಿವಕುಮಾರ್
ಸರ್ಕಾರಿ ಯೋಜನೆಗಳು

Latest Videos
Recommended Stories
Recommended image1
ಆದಾಯದಲ್ಲಿ ನೈಋತ್ಯ ರೈಲ್ವೆಗೆ ಗೋಲ್ಡನ್ ಆಗಸ್ಟ್: ₹805.70 ಕೋಟಿ ಮಾಸಿಕ ಆದಾಯ ಗಳಿಸಿ ಹೊಸ ದಾಖಲೆ!
Recommended image2
ಕನ್ನಡದಲ್ಲಿ ನಟಿಸಿದ್ದ ಈ ವ್ಯಕ್ತಿ, ಇಂದು ಹೈಕೋರ್ಟ್ ಜಡ್ಜ್! ಒಂದೇ ದಿನ 555 ಕೇಸ್ ವಿಚಾರಣೆ, ನ್ಯಾ.ನಾಗಪ್ರಸನ್ನ ದಾಖಲೆ
Recommended image3
ದಕ್ಷಿಣ ಭಾರತದಾದ್ಯಾಂತ ಇಡಿ ಬೃಹತ್ ಬೇಟೆ: ಕರ್ನಾಟಕ ಸೇರಿ 4 ರಾಜ್ಯಗಳ 30 ಕಡೆ ಏಕಕಾಲಕ್ಕೆ ದಾಳಿ, ಬೆಂಗಳೂರಲ್ಲೂ ರೇಡ್!
Related Stories
Recommended image1
Gruhalakshmi Scheme Shock: ಮೊದಲು ಅರ್ಜಿ ಹಾಕಿದ್ರೆ ಸಾಕು ಅಂದ್ರು ಈಗ 17 ಜಿಲ್ಲೇಲಿ 1.1 ಲಕ್ಷ ಜನ ಗೃಹಲಕ್ಷ್ಮಿ ಸ್ಕೀಂನಿಂದ ಔಟ್‌!
Recommended image2
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved