MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆಯ ಮುನ್ಸೂಚನೆ

ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆಯ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆಯು ಮಾ.24ರವರೆಗೆ ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಆದರೆ, ದಕ್ಷಿಣ ಭಾರತದ ಕರ್ನಾಟಕ, ಗೋವಾ ಮತ್ತು ಕೇರಳದಲ್ಲಿ ಬಿಸಿ ಹಾಗೂ ಆದ್ರತೆಯ ವಾತಾವರಣ ಮುಂದುವರಿಯಲಿದೆ ಎಂದು ವರದಿ ತಿಳಿಸಿದೆ.

1 Min read
Author : Kannadaprabha News
Published : Mar 23 2026, 07:00 AM IST
Share this Photo Gallery
  • FB
  • TW
  • Linkdin
  • Whatsapp
15
 ಗುಡುಗು, ಆಲಿಕಲ್ಲು ಸಹಿತ ಮಳೆ
Image Credit : AI Meta

ಗುಡುಗು, ಆಲಿಕಲ್ಲು ಸಹಿತ ಮಳೆ

ನವದೆಹಲಿ: ದೇಶದಲ್ಲಿ ಬೇಸಿಗೆ ನಿಧಾನಕ್ಕೆ ಕಾಲಿಟ್ಟಿರುವ ನಡುವೆ ಹಲವು ರಾಜ್ಯಗಳಲ್ಲಿ ಮಾ.24ರ ತನಕ ಗುಡುಗು, ಆಲಿಕಲ್ಲು ಸಹಿತ ಮಹಿಳೆ ಸಂಭವಿಸಬಹುದು. ಜತೆಗೆ ಪ್ರಬಲ ಬಿರುಗಾಳಿಯೂ ಬೀಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

25
 70-80 ಕಿ.ಮೀ ವೇಗದಲ್ಲಿ ಗಾಳಿ
Image Credit : Getty

70-80 ಕಿ.ಮೀ ವೇಗದಲ್ಲಿ ಗಾಳಿ

ಮಾ.24ರ ತನಕ ಪಶ್ಚಿಮ ಬಂಗಾಳ, ಸಿಕ್ಕಿಂ , ಒಡಿಶಾ ಭಾಗದಲ್ಲಿ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಈ ವೇಳೆ ಗಾಳಿಯ ಅಬ್ಬರವೂ 70-80 ಕಿ.ಮೀ ವೇಗದಲ್ಲಿದ್ದು ಜನರು ಎಚ್ಚರವಾಗಿರುವಂತೆ ಸೂಚನೆ ನೀಡಿದೆ. 

ಇದು ಮಾತ್ರವಲ್ಲದೇ ಈಶಾನ್ಯ, ಉತ್ತರ ಭಾರತದ ಇನ್ನೂ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Related image1
ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್
Related image2
ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
35
ದೆಹಲಿಯಲ್ಲಿ ತಾಪಮಾನ ಇಳಿಕೆ
Image Credit : Getty

ದೆಹಲಿಯಲ್ಲಿ ತಾಪಮಾನ ಇಳಿಕೆ

ಇದರ ನಡುವೆಯೇ ಅತಿಯಾದ ತಾಪಮಾನದಿಂದ ಹೈರಾಣಾಗಿದ್ದ ದೆಹಲಿಯಲ್ಲಿ ಶುಕ್ರವಾರದಿಂದ ಮಳೆಯಾಗುತ್ತಿದ್ದು, ತಾಪಮಾನದಲ್ಲಿಯೂ 2-3 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಇಳಿಕೆ ಕಂಡು ಬಂದಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

45
ಕರ್ನಾಟಕದಲ್ಲಿ ಬಿಸಿ ವಾತಾವರಣ
Image Credit : Asianet News

ಕರ್ನಾಟಕದಲ್ಲಿ ಬಿಸಿ ವಾತಾವರಣ

ದಕ್ಷಿಣ ಭಾರತದ ಹಲವೆಡೆ ಚದುರಿದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರ್ನಾಟಕ, ಗೋವಾ ಮತ್ತು ಕೇರಳದಲ್ಲಿ ಬಿಸಿ ಮತ್ತು ಆದ್ರತೆಯ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Karnataka: ರಾಜ್ಯದಲ್ಲಿ ಬ್ಲ್ಯಾಕ್‌ ಸಂಡೇ : ಪ್ರತ್ಯೇಕ ಅವಘಡಗಳಿಗೆ 10 ಜನರು ಸಾವು

55
ಬೆಂಗಳೂರು ಹವಾಮಾನ
Image Credit : ANI

ಬೆಂಗಳೂರು ಹವಾಮಾನ

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ 21 ಮತ್ತು 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದಲ್ಲಿಯೇ ಇದೇ ರೀತಿಯ ಹವಾಮಾನ ಇರಲಿದ್ದು, ಉತ್ತರ ಕರ್ನಾಟಕ ಭಾಗದ ಕೆಲವೆಡೆ 33 ರಿಂದ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಯುದ್ಧದ ಬಳಿಕ ಮಂಗಳೂರಿಗೆ ಬಂತು ಪ್ರಥಮ ಎಲ್‌ಪಿಜಿ ಹಡಗು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಳೆ
ಕರ್ನಾಟಕ ಮಳೆ
ಬೇಸಿಗೆ
ಹವಾಮಾನ ಮುನ್ಸೂಚನೆ
ಕರ್ನಾಟಕ ಹವಾಮಾನ
Latest Videos
Recommended Stories
Recommended image1
ಜಲ ಸಂಪನ್ಮೂಲ ವಿವಿ ಆಗಲಿದೆಯೇ ವಾಲ್ಮೀ?
Recommended image2
Karnataka: ರಾಜ್ಯದಲ್ಲಿ ಬ್ಲ್ಯಾಕ್‌ ಸಂಡೇ : ಪ್ರತ್ಯೇಕ ಅವಘಡಗಳಿಗೆ 10 ಜನರು ಸಾವು
Recommended image3
ಅಪಘಾತದಲ್ಲಿ ತಪ್ಪಿಲ್ಲದೆ ಸತ್ತರೆ ಪರಿಹಾರಕ್ಕೆ ಅರ್ಹ
Related Stories
Recommended image1
ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್
Recommended image2
ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved