ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗೆ ಭಾರೀ ಮಳೆಯ ಮುನ್ಸೂಚನೆ
Heavy Rain Alert: ಮುಂದಿನ ಮೂರು ಗಂಟೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಹಳದಿ ಮತ್ತು ಕಿತ್ತಳೆ ಅಲರ್ಟ್ ಘೋಷಿಸಲಾಗಿದೆ. ಮೇ 24ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
15

ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
25
ಮೇ 24ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಮೇ22 ರಂದು ಕರ್ನಾಟಕ ಕರಾವಳಿ ಬಳಿ ವಾಯು ಭಾರ ಕುಸಿತ ಸಾಧ್ಯತೆಗಳಿವೆ. ಒಳನಾಡು ಪ್ರದೇಶದಲ್ಲಿ ಟ್ರಫ್ ಆಕ್ಟಿವ್ ಹಿನ್ನೆಲೆ, ಬೆಂಗಳೂರಿನಲ್ಲಿ 23 ನೇ ತಾರೀಖುನವರೆಗೆ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ
35
ರಾಜಧಾನಿ ಬೆಂಗಳೂರಿಗೆ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಗುಡುಗು ಮಿಂಚು ಸಹಿತ ಜೋರು ಮಳೆಯ ಸಾಧ್ಯತೆಗಳಿವೆ. ರಾಜ್ಯದ್ಯಾಂತ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
45
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
55
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos