ಬೆಂಗಳೂರು ಗಲಭೆ: ಅನಿವಾರ್ಯವಾಗಿ ಕಿಡಿಗೇಡಿಗಳಿಗೆ ಗುಂಡು, ಸಚಿವ ಬೊಮ್ಮಾಯಿ

First Published 13, Aug 2020, 7:16 AM

ಬೆಂಗಳೂರು(ಆ.13): ಪರಿಸ್ಥಿತಿ ನಿಯಂತ್ರಿಸಲು ಹಲವು ರೀತಿಯಲ್ಲಿ ಯತ್ನಿಸಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕಿಡಿಗೇಡಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

<p>ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ&nbsp;</p>

ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ 

<p>ಗಲಭೆ ನಡೆದ ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೊಂದಿಗೆ ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.</p>

ಗಲಭೆ ನಡೆದ ಡಿ.ಜೆ.ಹಳ್ಳಿ ಪೊಲೀಸ್‌ ಠಾಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೊಂದಿಗೆ ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.

<p>ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.&nbsp;</p>

ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. 

<p>ಈ ವೇಳೆಯೂ ದುಷ್ಕರ್ಮಿಗಳು ಚದುರದಿದ್ದಾಗ ಅನಿವಾರ್ಯವಾಗಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಮೂವರು ಅಸುನೀಗಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.</p>

ಈ ವೇಳೆಯೂ ದುಷ್ಕರ್ಮಿಗಳು ಚದುರದಿದ್ದಾಗ ಅನಿವಾರ್ಯವಾಗಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಮೂವರು ಅಸುನೀಗಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

loader