ಹೇಗಿದೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯ? ಹೆಲ್ತ್ ಬುಲೆಟಿನ್ ಬಿಡುಗಡೆ
HD Devegowoda: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನುರಿತ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರನ್ನು ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಹೇಗಿದೆ ಆರೋಗ್ಯ?
ಸದ್ಯ ಹೆಚ್‌ಡಿ ದೇವೇಗೌಡರ ಆರೋಗ್ಯದ ಮಾಹಿತಿಯನ್ನು ಆಸ್ಪತ್ರೆ ನೀಡಿದೆ. ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ನುರಿತ ವೈದ್ಯರ ತಂಡದಿಂದ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ವೈದ್ಯರ ತಂಡದ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಮೇಲ್ವಿಚಾರಣೆಯನ್ನು ನಡೆಸುತ್ತಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಆರೋಗ್ಯ ವಿಚಾರಿಸಿದ ಪುತ್ರ
ಇನ್ನು ದೇವೇಗೌಡರು ದಾಖಲಾಗುತ್ತಿದ್ದಂತೆ ಪುತ್ರ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಆಸ್ಪತ್ರೆಗೆ ದೌಡಾಯಿಸಿದ್ದರು. ತಂದೆಯ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೇ ಹಿಂದಿರುಗಿದ್ದರು. ನಂತರ ಆಪ್ತರಿಂದ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಂದೇಶ ರವಾನಿಸಿದ್ದರು.
ಜೆಡಿಎಸ್‌ನಿಂದ ಮಾಹಿತಿ
ಜೆಡಿಎಸ್ ಘಟಕ ಎಕ್ಸ್ ಖಾತೆ ಮೂಲಕ ಹೆಚ್‌ಡಿ ದೇವೇಗೌಡರ ಆರೋಗ್ಯದ ಮಾಹಿತಿಯನ್ನು ನೀಡಿತ್ತು. ಕಾರ್ಯಕರ್ತರು ಆತಂಕಕ್ಕೆ ಒಳಗಾಗೋದು ಬೇಡ. ಚಿಕಿತ್ಸೆಗೆ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಲಾಗಿತ್ತು.
ಇದನ್ನೂ ಓದಿ: Bihar Assembly Poll: ಜಂಪಿಂಗ್ ಸ್ಟಾರ್, ಭಂಟನ ಬಂಡಾಯ: ಬಿಹಾರದಲ್ಲಿ ಪ್ರಧಾನಿ ಮೋದಿಗೆ ಢವ ಢವ!
ರಾಜಕಾರಣದಲ್ಲಿ ಸಕ್ರಿಯರು
92 ವರ್ಷದ ಹೆಚ್‌ಡಿ ದೇವೇಗೌಡರು ಇಂದಿಗೂ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ವ್ಹೀಲ್ ಚೇರ್‌ನಲ್ಲಿಯೇ ಕುಳಿತು ಜನರ ಸಮಸ್ಯೆಗಳನ್ನು ಆಲಿಸುತ್ತಾರೆ. ಹಾಗೆಯೇ ಇಳಿವಯಸ್ಸಿನಲ್ಲಿಯೂ ಅಧಿವೇಶನಗಳಿಗೆ ಹಾಜರಿಯಾಗುತ್ತಿರುತ್ತಾರೆ.
ಇದನ್ನೂ ಓದಿ: ಬಿಹಾರ ಚುನಾವಣೆ ರಣಕಣ: ಚಿರಾಗ್ ಪಾಸ್ವಾನ್ ಮುಂದಿಟ್ರು ಒಂದು ಬೇಡಿಕೆ!