MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • KSR Bengaluru ರೈಲ್ವೆ ನಿಲ್ದಾಣ ಅಭಿವೃದ್ಧಿ ಯೋಜನೆ, ಬರೋಬ್ಬರಿ ₹1370 ಕೋಟಿ ವೆಚ್ಚದಲ್ಲಿ ನಿಲ್ದಾಣ ವಿಶ್ವದರ್ಜೆಗೆ!

KSR Bengaluru ರೈಲ್ವೆ ನಿಲ್ದಾಣ ಅಭಿವೃದ್ಧಿ ಯೋಜನೆ, ಬರೋಬ್ಬರಿ ₹1370 ಕೋಟಿ ವೆಚ್ಚದಲ್ಲಿ ನಿಲ್ದಾಣ ವಿಶ್ವದರ್ಜೆಗೆ!

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನ ಕೆಎಸ್‌ಆರ್‌, ಕಂಟೋನ್ಮೆಂಟ್, ಮತ್ತು ಯಶವಂತಪುರ ರೈಲು ನಿಲ್ದಾಣಗಳನ್ನು ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ, ಮಲ್ಲೇಶ್ವರದಲ್ಲಿ ನೂತನ ಪಾದಚಾರಿ ಸುರಂಗ ಮಾರ್ಗಕ್ಕೂ ಶಂಕುಸ್ಥಾಪನೆ ನೆರವೇರಿಸಲಾಗಿದೆ.

2 Min read
Author : Gowthami K
Published : Jul 07 2026, 03:30 PM IST
Share this Photo Gallery
  • FB
  • TW
  • Linkdin
  • Whatsapp
16
 ₹1370 ಕೋಟಿ ವೆಚ್ಚದಲ್ಲಿ ಕೆಎಸ್‌ಆರ್‌ ಅಭಿವೃದ್ಧಿ
Image Credit : Asianet News

₹1370 ಕೋಟಿ ವೆಚ್ಚದಲ್ಲಿ ಕೆಎಸ್‌ಆರ್‌ ಅಭಿವೃದ್ಧಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣವನ್ನು ವಿಶ್ವದರ್ಜೆಯ ನಿಲ್ದಾಣವಾಗಿ 1,370 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
485 ಕೋಟಿ ರು. ವೆಚ್ಚದಲ್ಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ
Image Credit : Asianet News

485 ಕೋಟಿ ರು. ವೆಚ್ಚದಲ್ಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ

ಸೋಮವಾರ ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದಲ್ಲಿ 5.5 ಕೋಟಿ ರು. ವೆಚ್ಚದಲ್ಲಿ ನೂತನ ಪಾದಚಾರಿ ಸುರಂಗ ಮಾರ್ಗ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರೈಲ್ವೆ ನಿಲ್ದಾಣವನ್ನು ಪಿಪಿಪಿ ಮಾದರಿ ಅಥವಾ ಸಂಪೂರ್ಣ ಕೇಂದ್ರ ಸರ್ಕಾರದಿಂದಲೇ ನಿರ್ಮಿಸುವ ಕುರಿತು ಚರ್ಚೆ ನಡೆದಿದೆ. ಇನ್ನು 485 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

Related Articles

Related image1
Train Timing: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಅಲರ್ಟ್: ಕೆಲವು ರೈಲು ರದ್ದು, ಇನ್ನು ಕೆಲವಕ್ಕೆ ಹೊಸ ಮಾರ್ಗ!
Related image2
ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್‌ ರೈಲು ಆರಂಭಿಸಲು ಸ್ಪಂದನೆ
36
ಯಶವಂತಪುರ ರೈಲ್ವೆ ನಿಲ್ದಾಣವನ್ನು 1,400 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ
Image Credit : Asianet News

ಯಶವಂತಪುರ ರೈಲ್ವೆ ನಿಲ್ದಾಣವನ್ನು 1,400 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ

ಬೆಂಗಳೂರು ಉಪ ನಗರ ರೈಲು ಯೋಜನೆಗೆ ಒತ್ತು ನೀಡಲಾಗುತ್ತಿದೆ. ನಗರದಿಂದ ರಾಮನಗರ, ತುಮಕೂರು, ಕೆಜಿಎಫ್ ಮುಂತಾದ ಬೆಂಗಳೂರು ಸುತ್ತಲಿನ ನಗರಗಳನ್ನು ಸಂಪರ್ಕಿಸಲು ಇರುವ ಎರಡು ಹಳಿ ಮಾರ್ಗಗಳನ್ನು 4 ಹಳ್ಳಿಗಳಿಗೆ ವಿಸ್ತರಿಸುವ ಉದ್ದೇಶವಿದೆ. ಯಶವಂತಪುರ ರೈಲ್ವೆ ನಿಲ್ದಾಣವನ್ನು 1,400 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಯಲಹಂಕದಲ್ಲಿ 5,700 ಕೋಟಿ ರು. ವೆಚ್ಚದಲ್ಲಿ ಮೆಗಾ ಲಾಜಿಸ್ಟಿಕ್ಸ್ ಟರ್ಮಿನಲ್ ನಿರ್ಮಾಣ ಯೋಜನೆ ರೂಪಿಸಲಾಗುತ್ತಿದೆ. ರಾಜ್ಯದಲ್ಲಿ 146 ರೈಲ್ವೆ ಅಂಡರ್‌ಪಾಸ್, ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯದಲ್ಲಿ ಒಟ್ಟಾರೆ 52,000 ಕೋಟಿ ರು. ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿ. ಸೋಮಣ್ಣ ತಿಳಿಸಿದರು.

46
6 ತಿಂಗಳಲ್ಲಿ ಕಾಮಗಾರಿ ಮುಗಿಸುವ ಭರವಸೆ
Image Credit : Asianet News

6 ತಿಂಗಳಲ್ಲಿ ಕಾಮಗಾರಿ ಮುಗಿಸುವ ಭರವಸೆ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬೆಂಗಳೂರು ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಹಕಾರ ಅಗತ್ಯವಿದೆ. ನಗರದ ಸಮಸ್ಯೆಗಳು ಏನು ಎಂಬುದು ಸೋಮಣ್ಣ ಅವರಿಗೆ ತಿಳಿದಿದೆ. ಅವುಗಳನ್ನು ಪರಿಹರಿಸಲು, ಪ್ರಗತಿಗಾಗಿ ಕೈಜೋಡಿಸಬೇಕೆಂದು ಕೋರಿದರು. ಶಾಸಕ ದಿನೇಶ ಗುಂಡೂರಾವ್ ಮಾತನಾಡಿ, ಇಲ್ಲಿ ಸುರಂಗ ಪಾದಚಾರಿ ಮಾರ್ಗ ನಿರ್ಮಿಸಬೇಕು ಎನ್ನುವುದು ದಶಕಗಳ ಬೇಡಿಕೆ ಕೊನೆಗೂ ಈಡೇರುತ್ತಿದೆ. ಇದರಿಂದ ಶ್ರೀರಾಮಪುರ, ಸ್ವಾತಂತ್ರ್ಯಪಾಳ್ಯ ಮತ್ತು ಸುತ್ತಲಿನ ಜನರಿಗೆ ಅನುಕೂಲವಾಗುತ್ತದೆ. 6 ತಿಂಗಳಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿದ್ದಾರೆ. ಅದರಂತೆ ಕಾಮಗಾರಿ ಮುಗಿಸಿದರೆ ಬಹಳ ಸಂತೋಷ ಎಂದರು. ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯ ಇದ್ದರು.

56
ಪರಸ್ಪರ ಹೊಗಳಿಕೊಂಡ ಸಚಿವರು
Image Credit : Asianet News

ಪರಸ್ಪರ ಹೊಗಳಿಕೊಂಡ ಸಚಿವರು

ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಪರಸ್ಪರರನ್ನು ಹೊಗಳಿಕೊಂಡರು. ಭಾಷಣದ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಕೃಷ್ಣ ಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಹೊಗಳಿದರು. ದಾವಣಗೆರೆ-ತುಮಕೂರು ರೈಲು ಮಾರ್ಗಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಬಹಳ ನೆರವಾಗಿದ್ದಾರೆ. ಆಸ್ತಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಇ-ಖಾತಾ ಜಾರಿ ಮೂಲಕ ದೇಶದಲ್ಲೇ ಉತ್ತಮ ಕೆಲಸ ಮಾಡಿದ್ದಾರೆ. ಇನ್ನು ದಿನೇಶ್ ಗುಂಡೂರಾವ್ ಅವರು ಸಚಿವರಾಗುವ ಅರ್ಹತೆ ಹೊಂದಿದ್ದಾರೆ. ಮುಂದಿನ ಹಂತದಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಹಾರೈಸಿದರು. 

66
ಉತ್ಸಾಹದಿಂದ ಕೆಲಸ ಮಾಡುವ ಮಂತ್ರಿ ಎಂದರೆ ಅದು ಸೋಮಣ್ಣ
Image Credit : Asianet News

ಉತ್ಸಾಹದಿಂದ ಕೆಲಸ ಮಾಡುವ ಮಂತ್ರಿ ಎಂದರೆ ಅದು ಸೋಮಣ್ಣ

ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಸೋಮಣ್ಣ ಅವರು ಅತ್ಯಂತ ಸಕ್ರಿಯ ಸಚಿವ. ಪಾದರಸದಂತೆ ಕೆಲಸ ಮಾಡುತ್ತಾರೆ. ತುಮಕೂರು-ದಾವಣಗೆರೆ ಮಾರ್ಗಕ್ಕಾಗಿ ಬಹಳ ಶ್ರಮಿಸಿದ್ದಾರೆ. ಭೂಮಿ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲು ನನ್ನಲ್ಲಿ ಸಾಕಷ್ಟು ಬಾರಿ ಚರ್ಚಿಸಿದ್ದಾರೆ ಎಂದರು. ದಿನೇಶ್ ಗುಂಡೂರಾವ್ ಮಾತನಾಡಿ, ಅತ್ಯಂತ ಛಲದಿಂದ, ಉತ್ಸಾಹದಿಂದ ಕೆಲಸ ಮಾಡುವ ಮಂತ್ರಿ ಎಂದರೆ ಅದು ಸೋಮಣ್ಣ. ಅವರು ಎಂದರೆ ನಮಗೆ ಬಹಳ ಸಂತೊಷ ಎಂದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಭಾರತೀಯ ರೈಲ್ವೆ
ರೈಲು
ಕರ್ನಾಟಕ ಸುದ್ದಿ
ವಿ. ಸೋಮಣ್ಣ

Latest Videos
Recommended Stories
Recommended image1
Now Playing
ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Recommended image2
ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದು ಸಹಿಸಲ್ಲ: ಹೈಕೋರ್ಟ್‌ ಎಚ್ಚರಿಕೆ! ಏನಿದು ಪ್ರಕರಣ?
Recommended image3
ಮನೇಲಿ ನಾಯಿ ಸಾಕಿದ್ದೀರಾ ಎಚ್ಚರ! ಈ ತಪ್ಪು ಮಾಡಿದ್ರೆ ಕಾನೂನು ಸಂಕಷ್ಟ ಗ್ಯಾರಂಟಿ, ಹೈಕೋರ್ಟ್ ಏನು ಹೇಳಿದ ಗೊತ್ತಾ?
Related Stories
Recommended image1
Train Timing: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಅಲರ್ಟ್: ಕೆಲವು ರೈಲು ರದ್ದು, ಇನ್ನು ಕೆಲವಕ್ಕೆ ಹೊಸ ಮಾರ್ಗ!
Recommended image2
ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್‌ ರೈಲು ಆರಂಭಿಸಲು ಸ್ಪಂದನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved