International Yoga Day 2022: ಜನ ಪ್ರತಿನಿಧಿಗಳು, ವಿದ್ಯಾರ್ಥಿಗಳಿಂದ ಎಲ್ಲೆಡೆ ಯೋಗಾಭ್ಯಾಸ
ಬೆಂಗಳೂರು(ಜೂ.21): ರಾಜ್ಯಾದ್ಯಂತ ಇಂದು 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಚಿವರು, ಜಿಲ್ಲಾಧಿಕಾರಿ, ಎಸ್‌ಪಿ ಸೇರಿದಂತೆ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ಸಮೂಹಿಕವಾಗಿ ಯೋಗಾಸನ ಮಾಡುವ ಮೂಲಕ ಯೋಗದ ಮಹತ್ವವನ್ನ ಸಾರಿದ್ದಾರೆ.
ಸರ್ವಜ್ಞನ ಜನ್ಮಸ್ಥಳ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕೀನ ಬಲೂರಿನ ಬಸವೇಶ್ವರ ದೇವಾಲಯ ಆವರಣದಲ್ಲಿ ಯೋಗಾಸನ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ರೂಪಾಲಿ ನಾಯ್ಕ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ಹಾಲಪ್ಪ ಆಚಾರ ಭಾಗವಹಿಸಿದ್ದರು.
ಸ್ವರ್ಣವಲ್ಲೀ ಸಂಸ್ಥಾನದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ಯೋಗಾಸ ಮಾಡಿದ್ದಾರೆ.
ವಿಜಯಪುರ ಗೋಳಗುಮ್ಮಟ ಆವರಣದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಬೀದರ್ ನಗರದ ಐತಿಹಾಸಿಕ ಕೋಟೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿದರು. ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಾಬು ವಾಲಿ, ಎಸ್ಪಿ ಕಿಶೋರ್ ಬಾಬು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.
ಕೊಪ್ಪಳ ನಗರದ ಗವಿ ಮಠದ ಆವರಣದಲ್ಲಿ ನಡೆದ ಯೋಗ ದಿನಾಚರಣೆ ಕೊಪ್ಪಳದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಯೋಗದಲ್ಲಿ ಭಾಗಿಯಾಗಿದ್ದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನ ಜಿಲ್ಲಾಡಳಿತ ಆಯೋಜನೆ ಮಾಡಿತ್ತು.
8ನೇ ಅಂತಾರಾಷ್ಟ್ರೀಯ ದಿನಾಚರಣೆ ಪ್ರಯುಕ್ತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಸಹ ಯೋಗಾಸನ ಮಾಡುವ ಮೂಲಕ ಯೋಗ ದಿನಾಚರಣೆಯಲ್ಲಿ ಆಚರಿಸಿದ್ದಾರೆ.