ಬಾಗಲಕೋಟೆ/ಕಲಬುರಗಿ: ಸಂಭ್ರಮದ ಕನ್ನಡ ರಾಜ್ಯೋತ್ಸವದ ಫೋಟೋಸ್
ಬಾಗಲಕೋಟೆ/ಕಲಬುರಗಿ(ನ.01): ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಭೆಯ ಭಾವಚಿತ್ರಕ್ಕೆ ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ಕಲಬುರಗಿ ನಗರದಲ್ಲಿಯೂ ಕೂಡ ಸರಳವಾಗಿ ರಾಜ್ಯೋತ್ಸವವನ್ನ ಆಚರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಟನಮ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ತಾ.ಪಂ ಅದ್ಯಕ್ಷ ಚನ್ನನಗೌಡ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಳಿಕ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು
ಕಲಬುರಗಿಯಲ್ಲಿ ನಗರೇಶ್ವರ ಶಾಲೆ ಅಂಗಳದಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ
ಬಳಿಕ ಧ್ವಜಾರೋಹಣ ನೆರವೇರಿಸಿದ ಬಳಿಕ ಸಮಾರಂಭವನ್ನ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು