MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಜ.27ಕ್ಕೆ ಶಕ್ತಿ ಸೌಧದಲ್ಲಿ 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ! ಇಲ್ಲಿದೆ ಸಂಪೂರ್ಣ ವಿವರ

ಜ.27ಕ್ಕೆ ಶಕ್ತಿ ಸೌಧದಲ್ಲಿ 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ! ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ.  

3 Min read
Ravi Janekal
Published : Jan 24 2025, 08:37 PM IST| Updated : Jan 24 2025, 08:49 PM IST
Share this Photo Gallery
  • FB
  • TW
  • Linkdin
  • Whatsapp
14
ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. 

ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಮೇಲಿನ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಭಾರತೀಯ ಪುರಾತನ ವಿಶ್ವವಿದ್ಯಾಲಯ ನಾಲಂದಾದಲ್ಲಿ ಕಳೆದು ಹೋದ ಕಾಲ

24
ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ' ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. 

ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಮಾಧ್ಯಮದ ಮೂಲಕ ಮನವಿ ಮಾಡಿದರು.

34
ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಸಾರಿಗೆ ಬಸ್ ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ: 
ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನು ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌

ಹೊಯ್ಸಳ ಶೈಲೀಯ ಪೀಠ ನಿರ್ಮಾಣ:
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

44
ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಕನ್ನಡಾಂಬೆ ಭುವನೇಶ್ವರಿ ಪ್ರತಿಮೆ ಅನಾವರಣ

ಪಶ್ಚಿಮ ದಿಕ್ಕು: (ಕೆಂಗೇರಿ ಉಪನಗರ ): ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ  ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ,  ಮಾಸ್ತಿ ವೆಂಕಟೇಶ ಅಯ್ಯಾಂಗಾರ್‌,  ವಿ‌.ಕೃ. ಗೋಕಾಕ್‌, ಡಾ. ಯು. ಆರ್.‌ ಅನಂತ ಮೂರ್ತಿ, ಡಾ. ಗಿರೀಶ್‌ ಕಾರ್ನಾಡ್‌, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್.‌ ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿದೆ. 

ಉತ್ತರ ದಿಕ್ಕು : (ಹೆಬ್ಬಾಳ) ಈ ದಿಕ್ಕಿನಿಂದ 
ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ  ಹಲ್ಮಿಡಿ ಶಾಸನದ ಪ್ರತಿರೂಪ ಇರಲಿದೆ. 

ದಕ್ಷಿಣ ದಿಕ್ಕು : (ಬಸವನಗುಡಿ ಬುಲ್ ಟೆಂಪಲ್ ) ಇನ್ನು ದಕ್ಷಿಣ ದಿಕ್ಕಿನಿಂದ  ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್  ಎಫ್  ಕಿಟ್ಟೆಲ್, ಬಿ.ಎಲ್.‌ ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ. ಅಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. 

ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ  ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ ಎಂದು ಸಚಿವರು ವಿವರಿಸಿದರು. 

ಪ್ರತಿಮೆಯ ವೈಶಿಷ್ಟ್ಯ:

 ನೆಲಮಟ್ಟದಿಂದ ಪ್ರತಿಮೆಯ ಎತ್ತರ - 43 ಅಡಿ 6 ಇಂಚು

ಪ್ರತಿಮೆಯ ಲೋಹದ ಒಟ್ಟು ತೂಕ - 31.50 ಟನ್

ಭುವನೇಶ್ವರಿ ಪ್ರತಿಮೆ - 20 ಟನ್

ಕರ್ನಾಟಕ ನಕ್ಷೆ - 11.50 ಟನ್

ಭುವನೇಶ್ವರಿ ಪ್ರತಿಮೆಯ ಒಟ್ಟು  ವಿಸ್ತೀರ್ಣ (ಉದ್ಯಾನವನ ಸೇರಿದಂತೆ) - 4500 ಚ.ಮೀ 

ಕಲ್ಲು ಕಟ್ಟಡದ ಪೀಠದ ವಿವರ - ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ. 

ಕಾಮಗಾರಿಯ ಅಂದಾಜು ವೆಚ್ಚ : 21‌.24 ಕೋಟಿ 

ಕಾಮಗಾರಿ ನಿರ್ವಹಣೆ: ಲೋಕೋಪಯೋಗಿ ಇಲಾಖೆ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಶಿವರಾಜ ತಂಗಡಗಿ
ಸಿದ್ದರಾಮಯ್ಯ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved