ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ಫಿಕ್ಸ್, ಆರ್‌ಸಿಬಿ ನೆನಪಿಟ್ಟುಕೊಂಡು ಎಚ್ಚೆತ್ತ ಅಧಿಕಾರಿ ವರ್ಗ
ರಾಜ್ಯ ರಾಜಕಾರಣದಲ್ಲಿ ಎದ್ದ ಬಿರುಗಾಳಿ ಒಂದು ಹಂತಕ್ಕೆ ತಣ್ಣಗಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರ ಬೆನ್ನಲ್ಲೇ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗಧಿಯಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಕೊನೆಗೂ ಉತ್ತರ ಸಿಗುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ನಾಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಿಗದಿ
ಕರ್ನಾಟಕದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಸ್ಥಳ ನಗಿದಿಯಾಗಿದೆ. ವಿಧಾನಸೌಧದ ಮೆಟ್ಟಿಲು ಮೇಲೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಸ್ಥಳ ನಿಗದಿಯಾಗುತ್ತಿದ್ದಂತೆ ಕಾರ್ಯಕ್ರಮ ಆಯೋಜನೆ ಚಟುವಟಿಕೆ ತೀವ್ರಗೊಂಡಿದೆ.
ಆರ್‌ಸಿಬಿ ದುರಂತದಿಂದ ಎಚ್ಚೆತ್ತ ಅಧಿಕಾರಿ ವರ್ಗ
ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ನಿಗಧಿಯಾಗುತ್ತಿದ್ದಂತೆ ಅಧಿಕಾರಿ ವರ್ಗ ಎಚ್ಚೆತ್ತುಕೊಂಡಿದೆ. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ಸೇರಿ ದುರಂತ ಸಂಭವಿಸಿತ್ತು. ಆರಂಭದಲ್ಲಿ ವಿಧಾನಸೌಧ ಮೆಟ್ಟಿಲು ಮೇಲೆ ಕಾರ್ಯಕ್ರಮ ಬಳಿಕ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ನಡೆದಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಈ ದುರಂತದಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಡಿಸಿಪಿ, ಎಸಿಪಿ ಸೇರಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ವಿಧಾನಸೌಧ ಮೆಟ್ಟಿಲು ಮೇಲೆ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿರುವ ಕಾರಣ ಸ್ಥಳಕ್ಕೆ ಡಿಸಿಪಿ ಎಸಿಪಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಜನರು ಆಗಮನ ನಿರೀಕ್ಷೆ ಇರುವುದರಿಂದ ಯಾವುದೇ ಗೊಂದಲ ಆಗದಂತೆ ಎಚ್ಚರಿಕೆ ವಹಿಸಲು ಪ್ಲಾನ್ ಮಾಡಲಾಗುತ್ತಿದೆ.
ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚೆ
ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಸಿದ್ದರಾಮಯ್ಯ ಆಡಳಿತ ಅಂತ್ಯ
ಕಳೆದ ಕೆಲ ವರ್ಷಗಳಿಂದ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಇದೀಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದೆ. ಸಿದ್ದರಾಮಯ್ಯ ಯುಗ ಅಂತ್ಯವಾಗಿದೆ. ರಾಜ್ಯಸಭೆ ಪ್ರವೇಶ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯ ರಾಜಕಾರಣದಲ್ಲೇ ಇರುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

