ಯುರೋಪ್ ಪ್ರವಾಸದ ಫೋಟೋ ಹಂಚಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ: ಇಲ್ಲಿವೆ ಮಸ್ತ್ ಲುಕ್
ಬೆಂಗಳೂರು (ಆ.02): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಳೆದೊಂದು ವಾರದಿಂದ ಯುರೋಪ್ನ ಫಿನ್‌ಲ್ಯಾಂಡ್‌ಗೆ ಪ್ರವಾಸ ಕೈಗೊಂಡಿದ್ದು, ಈಗ ಕುಟುಂಬ ಸಮೇತ ಟ್ರಿಪ್‌ಎಂಜಾಯ್ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯುರೋಪ್‌ನ ಫಿನ್‌ಲ್ಯಾಂಡ್‌ಗೆ ಪ್ರವಾಸ ಬೆಳೆಸಿದ್ದು, ಈಗ ಕುಟುಂಬದ ಫೋಟೋ ಹಂಚಿಕೊಂಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರವಾಸದ ಅವಧಿಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಫಾಲ್ಸ್‌ಗೆ ಭೇಟಿ ನೀಡಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಫಿನ್‌ಲ್ಯಾಂಡ್ ಪ್ರವಾಸದಲ್ಲಿರುವ ಕುಮಾರಸ್ವಾಮಿ ದಂಪತಿ ತಮ್ಮ ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿಯೊಂದಿಗೆ ಫೊಟೋ ಪೋಸ್ ನೀಡಿದ್ದಾರೆ.
ಕರ್ನಾಟಕ ರಾಜಕೀಯದಲ್ಲಿ ಪೆನ್‌ಡ್ರೈವ್‌ನಲ್ಲಿ ವರ್ಗಾವಣೆ ದಂಧೆ ದಾಖಲೆಗಳಿವೆ ಎಂದು ಬಾಂಬ್ ಸಿಡಿಸಿದ್ದ ಕುಮಾರಸ್ವಾಮಿ, ಈಗ ಪ್ರವಾಸದಲ್ಲಿ ಎಂಜಾಯ್ ಮಾಡುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ ರಾಜಕೀಯ ವೇದಿಕೆಗಳ ಹೊರತಾಗಿ ಒಟ್ಟಾಗಿ ಕಾಣಿಸಿಕೊಂಡ ಅಪರೂಪದ ಫೋಟೋಗಳು ಇಲ್ಲಿವೆ ನೋಡಿ..
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕುರಿತ ಹಲವು ಚರ್ಚೆಗಳು ಮುನ್ನೆಲೆಗೆ ಬಂದಿದ್ದರೂ ಮಾಜಿ ಸಿಎಂ ಕುಮಾರಸ್ವಾಮಿ ಮಗ, ಸೊಸೆಯೊಂದಿಗೆ ಭರ್ಜರಿ ಟ್ರಿಪ್ ಮಾಡುತ್ತಿದ್ದಾರೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕುರಿತ ಹಲವು ಚರ್ಚೆಗಳು ಮುನ್ನೆಲೆಗೆ ಬಂದಿದ್ದರೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪತ್ನಿಯೊಂದಿಗೆ ವಿವಿಧ ಸ್ಥಳಕ್ಕೆ ಭೇಟಿ ನೀಡಿದ್ದಾರೆ.