MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
ECI Internal Rift
Bay of Bengal Cyclone
India's Highest Civilian Award
Today's Horoscope
Satish Jarkiholi ED Probe
YouTuber Madhu Gowda
Karnataka Assembly Drama
Karnataka BJP vs Congress
India Rich List 2026
Indian Education System
Vande Bharat Express Arasikere
  • Home
  • News
  • State
  • ರಾಜ್ಯದ ಜನತೆಗೆ ಬೆಲೆಯೇರಿಕೆ ಬರೆ: ನಂದಿನಿ ಹಾಲಿನ ದರ ಲೀಟರ್‌ಗೆ ₹5 ಏರಿಕೆಗೆ ಸರ್ಕಾರದ ಸಮ್ಮತಿ!

ರಾಜ್ಯದ ಜನತೆಗೆ ಬೆಲೆಯೇರಿಕೆ ಬರೆ: ನಂದಿನಿ ಹಾಲಿನ ದರ ಲೀಟರ್‌ಗೆ ₹5 ಏರಿಕೆಗೆ ಸರ್ಕಾರದ ಸಮ್ಮತಿ!

ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸಲು ಸರ್ಕಾರ ಸಮ್ಮತಿಸಿದೆ. ಹಾಲು ಒಕ್ಕೂಟಗಳ ತೀವ್ರ ಒತ್ತಡ ಹಾಗೂ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಪರಿಷ್ಕೃತ ದರದ ಅಧಿಕೃತ ಆದೇಶ ಹೊರಬೀಳಲಿದೆ.

1 Min read
Author : Sathish Kumar KH
Published : Sep 24 2026, 10:18 AM IST
Share this Photo Gallery
  • FB
  • TW
  • Linkdin
  • Whatsapp
14
Image Credit : ChatGpt

ಬೆಂಗಳೂರು (ಸೆ.24): ಸಾಮಾನ್ಯ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗಳಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅಂತಿಮವಾಗಿ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
Image Credit : Asianet News

ಹಾಲು ಉತ್ಪಾದನಾ ಹಾಗೂ ನಿರ್ವಹಣಾ ವೆಚ್ಚಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘವು ಸರ್ಕಾರಕ್ಕೆ ತೀವ್ರ ಒತ್ತಡ ಹೇರಿತ್ತು. ಆರಂಭದಲ್ಲಿ ಪ್ರತಿ ಲೀಟರ್‌ಗೆ ಬರೋಬ್ಬರಿ 10 ರೂ.ಗಳಷ್ಟು ಏರಿಕೆ ಮಾಡುವಂತೆ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಒಂದು ವೇಳೆ ದರ ಏರಿಕೆ ಮಾಡದಿದ್ದರೆ ‘ವಿಧಾನಸೌಧ ಚಲೋ’ ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದವು.

Related Articles

Related image1
ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ಬೆಣ್ಣೆ, ತುಪ್ಪದ ದರ ದಿಢೀರ್ ಏರಿಕೆ!; ನಾಳೆಯಿಂದಲೇ ಪರಿಷ್ಕೃತ ದರ ಜಾರಿ!
Related image2
ನಂದಿನಿ ಹಾಲಿನ ದಿಢೀರ್ ₹10 ಏರಿಕೆಗೆ ಆಗ್ರಹ! ಸರ್ಕಾರಕ್ಕೆ 3 ದಿನ ಗಡುವು ಕೊಟ್ಟ ಬಮುಲ್ ನಿರ್ದೇಶಕರು!
34
Image Credit : X

ಒಕ್ಕೂಟಗಳ ಈ ಎಚ್ಚರಿಕೆ ಹಾಗೂ ಹಾಲು ಉತ್ಪಾದಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅಂತಿಮವಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡಿದೆ. ಗ್ರಾಹಕರಿಗೆ ವಿಪರೀತ ಆರ್ಥಿಕ ಹೊರೆಯೂ ಆಗಬಾರದು ಹಾಗೂ ರೈತರಿಗೂ ಮತ್ತು ಉತ್ಪಾದಕರಿಗೂ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಹಾಲಿನ ದರವನ್ನು ಲೀಟರ್‌ಗೆ 4 ರಿಂದ 5 ರೂ.ಗಳವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.

44
Image Credit : Asianet News

ಹಾಲು ಉತ್ಪಾದಕ ರೈತರ ಹಿತಾಸಲಿಯನ್ನು ಕಾಪಾಡುವ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದು, ಪರಿಷ್ಕೃತ ದರವು ಶೀಘ್ರದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೆಎಂಎಫ್
ಕರ್ನಾಟಕ ಸುದ್ದಿ
ಹಾಲು
ಬೆಲೆ ಏರಿಕೆ
 

Latest Videos
Recommended Stories
Recommended image1
ಕೇಂದ್ರದ ದುಡ್ಡಿಂದ ಕೈಗೆತ್ತಿಕೊಂಡ ಕಾಮಗಾರಿಯಲ್ಲಿ ಜಾರಕಿಹೊಳಿ ಲಂಚ ಆರೋಪ, ಆ ಹಣ ಬಳಸಿ ವಿದೇಶದಲ್ಲಿ ಆಸ್ತಿ ಖರೀದಿ?
Recommended image2
ರಾಜ್ಯ ಸರ್ಕಾರದ ಆರ್ಥಿಕ ದಿವಾಳಿಗೆ ಬಿಜೆಪಿ ಖಂಡನೆ; ನಿನ್ನೆ ಚೊಂಬು ಚಳುವಳಿ, ಇಂದು ಶವಯಾತ್ರೆ ಪ್ರತಿಭಟನೆ
Recommended image3
Karnataka News Live: ರಾಜ್ಯದ ಜನತೆಗೆ ಬೆಲೆಯೇರಿಕೆ ಬರೆ - ನಂದಿನಿ ಹಾಲಿನ ದರ ಲೀಟರ್‌ಗೆ ₹5 ಏರಿಕೆಗೆ ಸರ್ಕಾರದ ಸಮ್ಮತಿ!
Related Stories
Recommended image1
ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ಬೆಣ್ಣೆ, ತುಪ್ಪದ ದರ ದಿಢೀರ್ ಏರಿಕೆ!; ನಾಳೆಯಿಂದಲೇ ಪರಿಷ್ಕೃತ ದರ ಜಾರಿ!
Recommended image2
ನಂದಿನಿ ಹಾಲಿನ ದಿಢೀರ್ ₹10 ಏರಿಕೆಗೆ ಆಗ್ರಹ! ಸರ್ಕಾರಕ್ಕೆ 3 ದಿನ ಗಡುವು ಕೊಟ್ಟ ಬಮುಲ್ ನಿರ್ದೇಶಕರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved