MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!

ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!

ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಿಸಲು ನಿರ್ಧರಿಸಿದೆ. ಮೃತಪಟ್ಟವರು, ಆದಾಯ ತೆರಿಗೆ ಪಾವತಿದಾರರು ಮತ್ತು ಒಂದೇ ಮನೆಯಲ್ಲಿ ಇಬ್ಬರು ಲಾಭ ಪಡೆಯುವ ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಿ,  ಅರ್ಹ ಬಡವರಿಗೆ ಮಾತ್ರ ಯೋಜನೆ ತಲುಪಿಸಲು ಮುಂದಾಗಿದೆ.

2 Min read
Author : Sathish Kumar KH
Published : May 25 2026, 07:49 AM IST
Share this Photo Gallery
  • FB
  • TW
  • Linkdin
  • Whatsapp
16
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ
Image Credit : Asianet News

ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ

ಬೆಂಗಳೂರು (ಮೇ 25): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಅತ್ಯಂತ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ನಡೆದ ರಾಜ್ಯ ಸರ್ಕಾರದ ಎಸ್‌ಐಆರ್ (SIR) ವಿಶೇಷ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಅನಗತ್ಯವಾಗಿ ಯೋಜನೆಗಳ ಲಾಭ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Add Asianetnews Kannada as a Preferred SourcegooglePreferred
26
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಮೇಲೆ ಕಣ್ಣು
Image Credit : stockPhoto

ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಮೇಲೆ ಕಣ್ಣು

ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (ಮಹಿಳೆಯರಿಗೆ ಮಾಸಿಕ 2,000 ರೂ.) ಹಾಗೂ ಗೃಹ ಜ್ಯೋತಿ (ಉಚಿತ ವಿದ್ಯುತ್) ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

Related Articles

Related image1
ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಹಾಕಿಸಿದ ಹುಬ್ಬಳ್ಳಿಯ ಈರವ್ವ
Related image2
ಎಸ್‌ಐಆರ್‌ನಿಂದ ಹೆಸ್ರು ಹೋದ್ರೆ ಗೃಹಲಕ್ಷ್ಮಿ, ಪಿಂಚಣಿ ಸೌಲಭ್ಯ ಸಿಗಲ್ಲ: ಡಿಕೆ ಶಿವಕುಮಾರ್
36
ಪರಿಷ್ಕರಣೆಗೆ ಮುಖ್ಯ ಕಾರಣಗಳೇನು?
Image Credit : our own

ಪರಿಷ್ಕರಣೆಗೆ ಮುಖ್ಯ ಕಾರಣಗಳೇನು?

ವಿಶೇಷ ಸಭೆಯಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಗ್ಯಾರಂಟಿ ಹಣ ದುರುಪಯೋಗವಾಗುತ್ತಿರುವುದಕ್ಕೆ ಮೂರು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ:

ಮೃತಪಟ್ಟವರಿಗೂ ಸಂದಾಯವಾಗುತ್ತಿದೆ ಹಣ: ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಕೆಲವು ಮಹಿಳೆಯರು ಮೃತಪಟ್ಟಿದ್ದರೂ, ಅವರ ಬ್ಯಾಂಕ್ ಖಾತೆಗಳಿಗೆ ಇಂದಿಗೂ ನಿಯಮಿತವಾಗಿ ಹಣ ಸಂದಾಯವಾಗುತ್ತಿರುವುದು ಪತ್ತೆಯಾಗಿದೆ.

46
ತೆರಿಗೆದಾರರಿಂದ ಲೂಟಿ
Image Credit : our own

ತೆರಿಗೆದಾರರಿಂದ ಲೂಟಿ

ಆದಾಯ ತೆರಿಗೆ (Income Tax) ಪಾವತಿದಾರರ ಲೂಟಿ: ಸರ್ಕಾರದ ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಕಟ್ಟುವವರು ಗ್ಯಾರಂಟಿ ಯೋಜನೆಗಳಿಗೆ ಅನರ್ಹರು. ಆದರೆ, ಐಟಿ ರಿಟರ್ನ್ಸ್ ಸಲ್ಲಿಸುತ್ತಿರುವ ಲಕ್ಷಾಂತರ ಶ್ರೀಮಂತ ಕುಟುಂಬಗಳೂ ಈ ಯೋಜನೆಯ ಲಾಭ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಒಂದೇ ಮನೆಯಲ್ಲಿ ಇಬ್ಬರಿಗೆ ಲಾಭ: ನಿಯಮದ ಪ್ರಕಾರ ಒಂದು ರೇಷನ್ ಕಾರ್ಡ್ ಅಥವಾ ಒಂದು ಕುಟುಂಬದ ಯಜಮಾನಿಗೆ ಮಾತ್ರ ಗೃಹ ಲಕ್ಷ್ಮಿ ಹಣ ಸಿಗಬೇಕು. ಆದರೆ ತಾಂತ್ರಿಕ ದೋಷಗಳಿಂದಾಗಿ ಒಂದೇ ಮನೆಯಲ್ಲಿ ಇಬ್ಬರು ಮಹಿಳೆಯರು ತಲಾ 2,000 ರೂಪಾಯಿಯಂತೆ ಹಣ ಪಡೆಯುತ್ತಿದ್ದಾರೆ.

56
ಸಿಎಂ-ಡಿಸಿಎಂ ಜಂಟಿ ಚಿಂತನೆ
Image Credit : our own

ಸಿಎಂ-ಡಿಸಿಎಂ ಜಂಟಿ ಚಿಂತನೆ

ಈ ಎಲ್ಲ ಅಕ್ರಮ ಹಾಗೂ ಅನರ್ಹತೆಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಯೋಜನೆಗಳ ಸಮಗ್ರ ಪರಿಷ್ಕರಣೆಗೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 'ಬಡವರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳು ದುರುಪಯೋಗವಾಗಬಾರದು. ಅರ್ಹರಿಗೆ ಮಾತ್ರ ಸರ್ಕಾರದ ಸೌಲಭ್ಯ ಸಿಗಬೇಕು' ಎನ್ನುವುದು ಸರ್ಕಾರದ ಸ್ಪಷ್ಟ ನಿಲುವಾಗಿದೆ.

66
ತಾಂತ್ರಿಕ ಪರಿಶೀಲನೆ ಆರಂಭ
Image Credit : our own

ತಾಂತ್ರಿಕ ಪರಿಶೀಲನೆ ಆರಂಭ

ಹೊಸ ಆದೇಶದ ಅನ್ವಯ, ಶೀಘ್ರದಲ್ಲೇ ತಾಂತ್ರಿಕ ಪರಿಶೀಲನೆ ಆರಂಭವಾಗಲಿದ್ದು, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಐಟಿ ಇಲಾಖೆಯ ದತ್ತಾಂಶಗಳನ್ನು ತಳಕು ಹಾಕಿ ಅನರ್ಹರನ್ನು ಪಟ್ಟಿಯಿಂದ ಶಾಶ್ವತವಾಗಿ ಹೊರದಬ್ಬಲು ಸರ್ಕಾರ ಸಜ್ಜಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕ ಸರ್ಕಾರ
ಸರ್ಕಾರಿ ಯೋಜನೆಗಳು
ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ

Latest Videos
Recommended Stories
Recommended image1
ಮನೆ ಬಳಿ ಕಾರಲ್ಲಿ ಡ್ರಗ್ಸ್‌ ಸಿಕ್ಕರೆ ಮನೆ ಮಾಲೀಕ ಹೊಣೆ ಅಲ್ಲ: ಕರ್ನಾಟಕ ಹೈಕೋರ್ಟ್
Recommended image2
ಜವಾಬ್ದಾರಿ ಸರ್ಕಾರವಾಗಿ ಎಸ್‌ಐಆರ್‌ ಜಾಗೃತಿ ಮೂಡಿಸುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
Recommended image3
Bengaluru ಟೌನ್ ಹಾಲ್‌ ಬಳಿ ಸುಳಿಯದ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು; ಖಾಕಿ ಎಚ್ಚರಿಕೆ
Related Stories
Recommended image1
ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಹಾಕಿಸಿದ ಹುಬ್ಬಳ್ಳಿಯ ಈರವ್ವ
Recommended image2
ಎಸ್‌ಐಆರ್‌ನಿಂದ ಹೆಸ್ರು ಹೋದ್ರೆ ಗೃಹಲಕ್ಷ್ಮಿ, ಪಿಂಚಣಿ ಸೌಲಭ್ಯ ಸಿಗಲ್ಲ: ಡಿಕೆ ಶಿವಕುಮಾರ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved