MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಹಿಂದಿ ಹೇರಿಕೆ ನಿಲ್ಲಿಸಿ ಅಭಿಯಾನ ಆರಂಭಿಸಿದ ಕನ್ನಡಿಗರು! ಇಲ್ಲಿವೆ ವಿವಿಧ ಪೋಸ್ಟರ್‌ಗಳು

ಹಿಂದಿ ಹೇರಿಕೆ ನಿಲ್ಲಿಸಿ ಅಭಿಯಾನ ಆರಂಭಿಸಿದ ಕನ್ನಡಿಗರು! ಇಲ್ಲಿವೆ ವಿವಿಧ ಪೋಸ್ಟರ್‌ಗಳು

ಬೆಂಗಳೂರು (ಸೆ.14): ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರ್ಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು ಸಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅಭಿಯಾನ ಆರಂಭಿಸಲಾಗಿದೆ. ಇಲ್ಲಿವೆ ನೋಡಿ ಹಲವು ಪೋಸ್ಟರ್‌ಗಳು...ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ#StopHindiImposition #ಹಿಂದಿಹೇರಿಕೆನಿಲ್ಲಿಸಿ— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) September 14, 2023

2 Min read
Sathish Kumar KH
Published : Sep 14 2023, 12:21 PM IST| Updated : Sep 14 2023, 12:53 PM IST
Share this Photo Gallery
  • FB
  • TW
  • Linkdin
  • Whatsapp
110

ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ.

210

ಒಕ್ಕೂಟ ಸರ್ಕಾರ ಇದೇ ರೀತಿ ಹಿಂದಿಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ  ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು. 
 

310

ಭಾರತ ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ  ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು.
 

410

ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ. 

510

ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ.

610

ಹಿಂದಿಹೇರಿಕೆಯ ಕ್ರೂರ ಪರಿಣಾಮಗಳನ್ನು‌ ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು.

710

ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ  ಸಂಚು.

810

ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾಷೆ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ.

910

ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ.

1010

ಬೇರೆ ದೇಶಕ್ಕೆ ಕೆಲಸಕ್ಕೋಗೋರು ಅಲ್ಲಿನ ಭಾಷೆ ಕಲ್ತ್ಕೊಂಡ್ ಹೋಗ್ತಾರೆ. ಹೋಗ್ಲೇಬೇಕು. ಆದ್ರೆ ಭಾರತದಲ್ಲಿ ಇದು ಉಲ್ಟಾ, ನಮ್ಮ ದಕ್ಷಿಣದ ರಾಜ್ಯಗಳಿಗೆ ಕೆಲಸ ಹುಡುಕ್ಕೊಂಡು ಬರೋರು ಕನ್ನಡ ತಮಿಳು ತೆಲುಗು ಮಲೆಯಾಳಿ ಕಲಿತ್ಕೊಂಡು ಬರಲ್ಲಂತೆ ನಾವೇ ಹಿಂದಿ ಕಲೀಬೇಕಂತೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಹಿಂದಿ ಹೇರಿಕೆ
ಕನ್ನಡಿಗ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved