MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!

ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!

ಕರ್ನಾಟಕಕ್ಕೆ ಆಲಮಟ್ಟಿ-ಯಾದಗಿರಿ ಮತ್ತು ಚನ್ನಗಿರಿ-ಭದ್ರಾವತಿ ನಡುವೆ ಎರಡು ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಯೋಜನೆಗಳು ರಾಜ್ಯದ ರೈಲು ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ ಪ್ರಾದೇಶಿಕ ವ್ಯಾಪಾರ ಮತ್ತು ಆರ್ಥಿಕ ಚಲನಶೀಲತೆಗೆ ಅನುಕೂಲವಾಗಲಿದೆ.

2 Min read
Sathish Kumar KH
Published : May 16 2025, 01:58 PM IST
Share this Photo Gallery
  • FB
  • TW
  • Linkdin
  • Whatsapp
15

ಬೆಂಗಳೂರು (ಮೇ 16): ಕರ್ನಾಟಕ ರಾಜ್ಯಕ್ಕೆ ಮತ್ತೆ ಎರಡು ಹೊಸ ರೈಲು ಯಫಜನೆಗಳನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಲಮಟ್ಟಿ-ಯಾದಗಿರಿ ಹಾಗೂ ಚನ್ನಗಿರಿ-ಭದ್ರಾವತಿ ನಡುವೆ ಎಡರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ ಮಾಡುವುದಕ್ಕೆ ಆದೇಶವನ್ನು ಹೊರಡಿಸಿದೆ. ಈ ಮೂಲಕ ಉಕ್ಕಿನ ನಗರಿ ಭದ್ರಾವತಿಯ ವೈಭವ ಮತ್ತೆ ಮರುಕಳಿಸುವಂತಾದರೆ, ಭಾರತದ ಅತ್ಯಂತ ಬಡಜಿಲ್ಲೆಗಳಲ್ಲಿ ಒಂದಾದ ಯಾದಗಿರಿಗೆ ಆರ್ಥಿಕ ಪುಷ್ಠೀಕರಣ ನೀಡಲು ಕೂಡ ನೆರವಾಗಲಿದೆ.

25

ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ರೈಲು ಮೂಲಸೌಕರ್ಯವನ್ನು ಬಲಪಡಿಸುವ ಅಗವಾಗಿ, ನೈಋತ್ಯ ರೈಲ್ವೆ (SWR) ವಲಯದ ಅಡಿಯಲ್ಲಿ ಎರಡು ಪ್ರಮುಖ ಹೊಸ ರೈಲ್ವೆ ಮಾರ್ಗಗಳಿಗೆ ಅಂತಿಮ ಸ್ಥಳ ಸಮೀಕ್ಷೆಗಳನ್ನು (FLS) ರೈಲ್ವೆ ಮಂಡಳಿ ಅನುಮೋದಿಸಿದೆ. ಮೊದಲ ಪ್ರಸ್ತಾವಿತ ಮಾರ್ಗವು ಆಲಮಟ್ಟಿ ಮತ್ತು ಯಾದಗಿರಿ ನಡುವೆ 162 ಕಿ.ಮೀ. ಉದ್ದವಿದ್ದು, ₹4.05 ಕೋಟಿ ವೆಚ್ಚದ ಸಮೀಕ್ಷೆಯನ್ನು ಅನುಮೋದಿಸಲಾಗಿದೆ. ಎರಡನೇ ಸಮೀಕ್ಷೆಯು ₹1.825 ಕೋಟಿ ವೆಚ್ಚದಲ್ಲಿದ್ದು, ಚನ್ನಗಿರಿ ಮೂಲಕ ಭದ್ರಾವತಿ ಮತ್ತು ಚಿಕ್ಕಜಾಜೂರು ನಡುವಿನ 73 ಕಿ.ಮೀ. ಉದ್ದವನ್ನು ಒಳಗೊಂಡಿದೆ.

ಇನ್ನು ಈ ಸಮೀಕ್ಷೆಗಳ ಒಟ್ಟಾರೆ ಅಂದಾಜು ವೆಚ್ಚ ₹5,875 ಕೋಟಿ ಆಗಿದೆ. ಇದು ರಾಜ್ಯದಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ರೈಲ್ವೆ ಯೋಜನೆಗಳಲ್ಲಿ ಒಂದಾಗಿದೆ. ಜೊತೆಗೆ ರೈಲು ಸಾರಿಗೆ ಸಂಪರ್ಕದ ಅಭಿವೃದ್ಧಿಯಲ್ಲಿ ಈ ಯೋಜನೆ ಮೊದಲ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೇಳಲಾಗುತ್ತಿದೆ.

Related Articles

Related image1
ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು, ಬೆಂಗಳೂರಿನಿಂದ ಯಾವ ಜಿಲ್ಲೆಗೆ ಸೇವೆ?
Related image2
Now Playing
ಗದಗ-ವಾಡಿ ರೈಲ್ವೆ ಯೋಜನೆಗೆ ಚಾಲನೆ
35

ಆಲಮಟ್ಟಿ-ಯಾದಗಿರಿ ಮಾರ್ಗವು ಉತ್ತರ ಕರ್ನಾಟಕ ಮತ್ತು ಪ್ರಮುಖ ಆರ್ಥಿಕ ಕಾರಿಡಾರ್‌ಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವುದರಿಂದ ಇದು ಮಹತ್ವವನ್ನು ಪಡೆದುಕೊಂಡಿದೆ. ಇಲ್ಲಿ ಅಣೆಕಟ್ಟು ಮತ್ತು ಜಲವಿದ್ಯುತ್ ಉತ್ಪಾದನೆಗೆ ಹೆಸರುವಾಸಿಯಾದ ಆಲಮಟ್ಟಿ, ಈ ಪ್ರದೇಶದ ಕೃಷಿ ಮತ್ತು ಇಂಧನ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಯಾದಗಿರಿ ಹೈದರಾಬಾದ್-ಮುಂಬೈ ರೈಲು ಕಾರಿಡಾರ್‌ನಲ್ಲಿ ನಿರ್ಣಾಯಕ ಜಂಕ್ಷನ್ ಆಗಿ ಕಾರ್ಯನಿರ್ವಹಿಸಲಿದೆ. ಈ ಎರಡು ನಿಲ್ದಾಣಗಳ ನಡುವಿನ ರೈಲು ಸಂಪರ್ಕವು ಪ್ರಾದೇಶಿಕ ವ್ಯಾಪಾರ ಆರ್ಥಿಕ ಚಲನಶೀಲತೆಗೆ ಅನುಕೂಲ ಆಗಲಿದೆ.

45

ಮತ್ತೊಂದು ಹೊಸ ಮಾರ್ಗವಾದ ಭದ್ರಾವತಿ-ಚಿಕ್ಕಜಾಜೂರು ಮಾರ್ಗವು ಮಧ್ಯ ಕರ್ನಾಟಕದಲ್ಲಿ ರಾಜ್ಯದೊಳಗಿನ ಸಂಪರ್ಕವನ್ನು ಬಲಪಡಿಸುತ್ತದೆ. ಉಕ್ಕು ಮತ್ತು ಕಾಗದದ ಕೈಗಾರಿಕೆಗಳನ್ನು ಹೊಂದಿರುವ ಕೈಗಾರಿಕಾ ಪಟ್ಟಣವಾದ ಭದ್ರಾವತಿ, ಕರ್ನಾಟಕದ ಹಲವಾರು ಭಾಗಗಳನ್ನು ಸಂಪರ್ಕಿಸುವ ಪ್ರಮುಖ ರೈಲ್ವೆ ಜಂಕ್ಷನ್ ಚಿಕ್ಕಜಾಜೂರಿ‌ಗೆ ನೇರ ಸಂಪರ್ಕ ಹೊಂದುವುದರಿಂದ ಹಲವು ಪ್ರಯೋಜನ ಪಡೆಯುತ್ತದೆ. ಈ ಮಾರ್ಗವು ಸರಕು ಸಾಗಣೆ, ಕೈಗಾರಿಕಾ ಬೆಳವಣಿಗೆ ಮತ್ತು  ಸ್ಥಳೀಯ ಪ್ರಯಾಣಿಕರ ಉತ್ತಮ ಸಾರಿಗೆ ಸಂಪರ್ಕವನ್ನು ಒದಗಿಸುವ ನಿರೀಕ್ಷೆಯಿದೆ.
 

55

ಈ ಹಿಂದೆ ನಗರದಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗೂ ಮೈಸೂರು ಕಾಗದ ಕಾರ್ಖಾನೆಗಳು ಆರಂಭಗೊಂಡ ಸಂದರ್ಭದಲ್ಲಿ ಅಂದಿನ ಮೈಸೂರು ಸಂಸ್ಥಾನ ಎರಡು ಕಾರ್ಖಾನೆಗಳಿಗೆ ಕಬ್ಬಿಣದ ಅದಿರು, ಸುಣ್ಣದ ಕಲ್ಲು, ಕಲ್ಲಿದ್ದಲು, ಬಿದಿರು ಸೇರಿದಂತೆ ಇನ್ನಿತರ ಕಚ್ಛಾ ಸಾಮ್ರಗಿಗಳನ್ನು ಪೂರೈಸಲು ರೈಲ್ವೆ ಸಂಪರ್ಕಗಳನ್ನು ಕಲ್ಪಿಸಿಕೊಟ್ಟಿತ್ತು. ನಂತರದ ದಿನಗಳಲ್ಲಿ ಈ ಸಂಪರ್ಕಗಳು ಕಣ್ಮರೆಯಾಗಿದ್ದು, ಇದರೊಂದಿಗೆ ಎರಡು ಕಾರ್ಖಾನೆಗಳ ಅವನತಿ ಸಹ ಆರಂಭಗೊಂಡಿತು. ಇದೀಗ ನಗರದಲ್ಲಿ ಹೊಸ ಕೈಗಾರಿಕೆಗಳಿಗೆ ಪೂರಕವಾಗುವಂತೆ ಹೊಸ ರೈಲ್ವೆ ಸಂಪರ್ಕಗಳಿಗೆ ಎದುರು ನೋಡುತ್ತಿದ್ದ ಇಲ್ಲಿನ ಕೈಗಾರಿಕೋದ್ಯಮಿಗಳಲ್ಲಿ ಭವಿಷ್ಯದ ಭರವಸೆಗಳನ್ನು ಮೂಡಿಸಿದೆ.

ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗ ಆರಂಭಿಸುವ ಕುರಿತು ಈ ಬಾರಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಸುಮಾರು 1,825 ಕೋಟಿ ರೂ. ವೆಚ್ಚದ 73 ಕಿ.ಮೀ ಉದ್ದದ ರೈಲ್ವೆ ಸಂಪರ್ಕಕ್ಕೆ ಅನುಮೋದನೆ ನೀಡಿತ್ತು. ಇದೀಗ ಕಾಮಗಾರಿ ಆರಂಭಿಸಲು ಅಂತಿಮ ಹಂತದ ಸರ್ವೆ ಕಾರ್ಯ ಕೈಗೊಳ್ಳಲು ಆದೇಶಿಲಾಗಿದೆ. ಮಲೆನಾಡು ಭಾಗಕ್ಕೆ ಬಯಲು ಸೀಮೆ ಹಾಗೂ ಅರೆ ಮಲೆನಾಡು ಭಾಗಗಳ ಸಂಪರ್ಕ ಕಲ್ಪಿಸಲು ಪ್ರಸ್ತುತ ಯಾವುದೇ ರೈಲ್ವೆ ಮಾರ್ಗವಿಲ್ಲ. ಈ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಹೊಸ ರೈಲ್ವೆ ಮಾರ್ಗ ಅನ್ವೇಷಣೆ ಕೈಗೊಂಡು ಸಂಪರ್ಕ ಕಲ್ಪಿಸುವಂತೆ ಹಲವು ಬಾರಿ ರೈಲ್ವೆ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. ಇದರ ಪರಿಣಾಮ ಹೊಸ ರೈಲ್ವೆ ಮಾರ್ಗ ಆರಂಭಗೊಳ್ಳುತ್ತಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಶಿವಮೊಗ್ಗ
ಭಾರತೀಯ ರೈಲ್ವೆ
ಯಾದಗಿರಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved