SSLC ಟಾಪರ್ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಅಗಿ ಹೊರಹೊಮ್ಮಿದ ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾಗೆ ಕರೆ ಮಾಡಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಭ ಹಾರೈಸಿದರು.

ನಿನ್ನ ಸಾಧನೆ ಸರ್ಕಾರಿ ಶಾಲೆಗಳ ಗೌರವ ಹೆಚ್ಚಿಸಿದೆ ಮತ್ತು ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಸುಧಾರಣೆ ಮಾಡುವ ನಮ್ಮ ಜವಾಬ್ದಾರಿ ಇನ್ನಷ್ಟು ಹೆಚ್ಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ ಅತಿ ಹೆಚ್ಚು ಅಂಕ ಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆ ಸಚಿವನಾಗಿ ನಿನ್ನ ಸಾಧನೆಗೆ ಅಭಿನಂದನೆ ಹಾಗೂ ಧನ್ಯವಾದ ತಿಳಿಸುತ್ತೇನೆ ಎಂದರು. ಶಿಕ್ಷಣ ಸಚಿವರು ಕರೆ ಮಾಡಿ ಶುಭ ಹಾರೈಸಿದ್ದಕ್ಕೆ ವಿದ್ಯಾರ್ಥಿನಿಯೂ ಸಹ ಸಂತೋಷ ವ್ಯಕ್ತಪಡಿಸಿದಳು.
ಸರ್ಕಾರಿ ಶಾಲೆಯಲ್ಲಿ ಓದುವವರು ಬಗ್ಗೆ ಒಂದು ರೀತಿ ಕೀಳರಿಮೆ ಇತ್ತು. ಸರ್ಕಾರಿ ಶಾಲೆ ಮಕ್ಕಳು ದಡ್ಡರು ಎಂಬ ನಕಾರಾತ್ಮಕ ಭಾವನೆ ಇತ್ತು. ಇದೀಗ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ರಾಜ್ಯಕ್ಕೆ ಟಾಪರ್ ಆಗಿರುವುದು ಸರ್ಕಾರಿ ಶಾಲಾ ಮಕ್ಕಳಿಗೆ ಹೊಸ ಭರವಸೆ, ಹುಮ್ಮಸ್ಸು ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ