ಇಂದಿನಿಂದ 3 ದಿನ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ; ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಈ ನಡುವೆ, ಹವಾಮಾನ ಇಲಾಖೆಯು ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.

ಮಳೆಯ ಮುನ್ಸೂಚನೆ
ರಾಜ್ಯದೆಲ್ಲೆಡೆ ಮುಂಗಾರು ಮಳೆಯ ತೀವ್ರ ಕೊರತೆಯಿದೆ. ಈ ನಡುವೆ ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯ ‘ಯೆಲ್ಲೋ ಅಲರ್ಟ್’ ಅನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬೆಳಗ್ಗೆ ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ.
ಎರಡು ಜಿಲ್ಲೆಗಳಿಗೆ ಆರೆಂಜ್ ಆಲರ್ಟ್
ಜೂ.23ರಿಂದ ಜೂ.25ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ.27ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಮುಂಗಾರು ದುರ್ಬಲ
ಜೂ.22ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಪ್ರದೇಶಗಳು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಾತ್ರ ಮಳೆಯಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ತಾಪಮಾನ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂ.ಮೀ. ಮಳೆಯಾಗಿದೆ. ಮತ್ತೊಂದೆಡೆ ಮಳೆಗಾಲದಲ್ಲೂ ಕಲಬುರಗಿಯಲ್ಲಿ ಬೇಸಿಗೆ ಕಾಲದಂತೆ ಗರಿಷ್ಠ 39.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮತ್ತೊಂದೆಡೆ ಮಳೆ ಇಲ್ಲದೇ ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

