MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • News
  • State
  • Karnataka Rain: ರಾಜ್ಯದಲ್ಲಿ ಜೂ.18ರವರೆಗೆ ಮಳೆ ಮುಂದುವರಿಕೆ, ಬೆಂಗಳೂರಿನಲ್ಲಿ ಮಧ್ಯಾಹ್ನ ನಂತರ ಬಿರುಗಾಳಿ ಮಳೆ!

Karnataka Rain: ರಾಜ್ಯದಲ್ಲಿ ಜೂ.18ರವರೆಗೆ ಮಳೆ ಮುಂದುವರಿಕೆ, ಬೆಂಗಳೂರಿನಲ್ಲಿ ಮಧ್ಯಾಹ್ನ ನಂತರ ಬಿರುಗಾಳಿ ಮಳೆ!

ರಾಜ್ಯಾದ್ಯಂತ ಜೂನ್ 13 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ ನಂತರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 Min read
Author : Gowthami K
Published : Jun 13 2026, 12:03 PM IST
Share this Photo Gallery
  • FB
  • TW
  • Linkdin
  • Whatsapp
15
ಭಾರಿ ಮಳೆಯಾಗುವ ಮುನ್ಸೂಚನೆ
Image Credit : Asianet News

ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಜೂನ್ 4 ರಂದು ಕೇರಳ ಕರಾವಳಿಗೆ ಪ್ರವೇಶ ಪಡೆದಿದ್ದ ನೈಋತ್ಯ ಮುಂಗಾರು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಚುರುಕಾಗಿಲ್ಲ. ರಾಜ್ಯಾದ್ಯಂತ ಸದ್ಯ ಮುಂಗಾರು ದುರ್ಬಲವಾಗಿದ್ದರೂ ಸಹ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಇಂದು (ಜೂನ್ 13, 2026) ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಕರಾವಳಿಗೆ 'ರೆಡ್ ಅಲರ್ಟ್' ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ವಾರ್ನಿಂಗ್
Image Credit : Asianet News

ಕರಾವಳಿಗೆ 'ರೆಡ್ ಅಲರ್ಟ್' ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ವಾರ್ನಿಂಗ್

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಅತ್ಯಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆಯು ಈ ಭಾಗಗಳಲ್ಲಿ 'ರೆಡ್ ಅಲರ್ಟ್' ಹಾಗೂ ಕೆಲವು ಕಡೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗುವ ಭೀತಿ ಇರುವುದರಿಂದ ಸ್ಥಳೀಯ ಆಡಳಿತಗಳು ಜಾಗೃತವಾಗಿವೆ. ಅಲೆಗಳ ಅಬ್ಬರ ತೀವ್ರವಾಗಿರಲಿದ್ದು, ಮೀನುಗಾರರು ಮುಂದಿನ ಕೆಲವು ದಿನಗಳ ಕಾಲ ಯಾವುದೇ ಕಾರಣಕ್ಕೂ ಅರಬ್ಬಿ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

Related Articles

Related image1
Monsoon Movies: ಹೊರಗೆ ಮಳೆ ಬರ್ತಿದ್ಯಾ? ಸಂಗಾತಿ ಜೊತೆ ಈ 5 ಕ್ಲಾಸಿಕ್ ಸಿನಿಮಾ ನೋಡಿ!
Related image2
Bengaluru Rains: ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ
35
ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ಬಳಿಕ ಬಿರುಗಾಳಿ ಮಳೆ
Image Credit : Asianet News

ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ಬಳಿಕ ಬಿರುಗಾಳಿ ಮಳೆ

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಇಂದು ವರುಣನ ಅಬ್ಬರ ಜೋರಾಗಿಯೇ ಇರಲಿದೆ. ದಿನಪೂರ್ತಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಸಂದರ್ಭದಲ್ಲಿ ನಗರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇಂದು ನಗರದ ಗರಿಷ್ಠ ತಾಪಮಾನ 28 ರಿಂದ 30 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 21 ರಿಂದ 22 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ.

45
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಎಲ್ಲ ಜಿಲ್ಲೆಗಳ ಇಂದಿನ ಮುನ್ಸೂಚನೆ ಇಲ್ಲಿದೆ:
Image Credit : Asianet News

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಎಲ್ಲ ಜಿಲ್ಲೆಗಳ ಇಂದಿನ ಮುನ್ಸೂಚನೆ ಇಲ್ಲಿದೆ:

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ನಿನ್ನೆ ಕೇವಲ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ನಿನ್ನೆ ಅತಿಹೆಚ್ಚು ಮಳೆ ಬಿದ್ದಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ (5 ಸೆಂ.ಮೀ.). ಇದನ್ನು ಹೊರತುಪಡಿಸಿದರೆ ಉಡುಪಿ, ಹಾಸನ, ಮಂಗಳೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು ಹಾಗೂ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ. ಆದರೆ, ಇಂದು ಇಡೀ ರಾಜ್ಯಾದ್ಯಂತ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು: ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮಳೆಯಾಗುವ ಸಾಧ್ಯತೆಯಿದೆ.

55
ಜೂನ್ 18ರವರೆಗೆ ಮಳೆ ಮುಂದುವರಿಕೆ: ಮುನ್ನಡೆಯುತ್ತಿರುವ ಮಾನ್ಸೂನ್
Image Credit : Asianet News

ಜೂನ್ 18ರವರೆಗೆ ಮಳೆ ಮುಂದುವರಿಕೆ: ಮುನ್ನಡೆಯುತ್ತಿರುವ ಮಾನ್ಸೂನ್

ರಾಜ್ಯದಲ್ಲಿ ಮುಂಗಾರು ಸದ್ಯಕ್ಕೆ ದುರ್ಬಲವಾಗಿದ್ದರೂ ಸಹ, ಜೂನ್ 18 ರವರೆಗೆ ಮಳೆ ಚಟುವಟಿಕೆಗಳು ಮುಂದುವರಿಯಲಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಜೂನ್ 12 ರಂದು ನೈಋತ್ಯ ಮಾನ್ಸೂನ್ ಈಗಾಗಲೇ ಬಂಗಾಳಕೊಲ್ಲಿಯ ಸಂಪೂರ್ಣ ವಾಯುವ್ಯ ಭಾಗ, ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ ಸೇರಿದಂತೆ ಪಶ್ಚಿಮ ಬಂಗಾಳ, ಬಿಹಾರ್, ಒಡಿಶಾ ಮತ್ತು ಜಾರ್ಖಂಡ್‌ನ ಭಾಗಗಳಿಗೆ ಮುನ್ನಡೆದಿದೆ. ಮುಂದಿನ 2-3 ದಿನಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ಮಹಾರಾಷ್ಟ್ರ, ಕರ್ನಾಟಕದ ಉಳಿದ ಭಾಗಗಳು, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ್ ಹಾಗೂ ಒಡಿಶಾದ ಇನ್ನುಳಿದ ಭಾಗಗಳಿಗೆ ನೈಋತ್ಯ ಮುಂಗಾರು ಸಂಪೂರ್ಣವಾಗಿ ವ್ಯಾಪಿಸಲಿದ್ದು, ತದನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕರ್ನಾಟಕ ಮಳೆ
ಭಾರತೀಯ ಹವಾಮಾನ ಇಲಾಖೆ
ಕರ್ನಾಟಕ ಹವಾಮಾನ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಜೈಲಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್‌ಗೆ ಬಂತು ಮತ್ತೊಂದು ಕೋರ್ಟ್‌ ಸಮನ್ಸ್‌, ನಿಂತಲ್ಲೇ ನಡುಗಿದ ದಾಸ
Recommended image2
ಬಾಲಿವುಡ್‌ ಸಿನಿಮಾವಾದ ಕನ್ನಡಿಗನ ಕಥೆ, ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್, ಕೋಟಿ ಉದ್ಯಮಿಯಾದ ಹಾಸನದ ಯವಕ!
Recommended image3
ಪುಣೆ ರೈಲು ಸಂಚಾರದಲ್ಲಿ ವ್ಯತ್ಯಯ: ಸೆ.19 ರಿಂದ 15 ದಿನ ಬ್ಲಾಕ್, 42 ರೈಲುಗಳು ರದ್ದು, ಕರ್ನಾಟಕದ ಹಲವು ಮಾರ್ಗ ಚೇಂಜ್
Related Stories
Recommended image1
Monsoon Movies: ಹೊರಗೆ ಮಳೆ ಬರ್ತಿದ್ಯಾ? ಸಂಗಾತಿ ಜೊತೆ ಈ 5 ಕ್ಲಾಸಿಕ್ ಸಿನಿಮಾ ನೋಡಿ!
Recommended image2
Bengaluru Rains: ಪದೇ ಪದೇ ಜಾಲವೃತಗೊಳ್ಳುವ 10 ಪ್ರದೇಶಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved