MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಜನರೇ ಎಚ್ಚರ; ಹವಾಮಾನ ಇಲಾಖೆ 'ಡೇಂಜರ್' ಅಲರ್ಟ್!

ರಾಜ್ಯದಲ್ಲಿ 60 ಕಿ.ಮೀ ವೇಗದ ಸುಂಟರಗಾಳಿ ಅಬ್ಬರ, ಈ 5 ಜಿಲ್ಲೆಗಳ ಜನರೇ ಎಚ್ಚರ; ಹವಾಮಾನ ಇಲಾಖೆ 'ಡೇಂಜರ್' ಅಲರ್ಟ್!

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ಮೇ 26ರ ಸುಮಾರಿಗೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.

2 Min read
Author : Sathish Kumar KH
Published : May 19 2026, 03:41 PM IST
Share this Photo Gallery
  • FB
  • TW
  • Linkdin
  • Whatsapp
17
ಮೇ 26ರ ಸುಮಾರಿಗೆ ಮುಂಗಾರು ಕೇರಳ ಪ್ರವೇಶ
Image Credit : Asianet News

ಮೇ 26ರ ಸುಮಾರಿಗೆ ಮುಂಗಾರು ಕೇರಳ ಪ್ರವೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ (Pre-monsoon Rain) ಬಿರುಸುಗೊಂಡಿದ್ದು, ಜನತೆಗೆ ತಂಪಾದ ಅನುಭವದ ಜೊತೆಗೆ ಆತಂಕವೂ ಎದುರಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನೈರುತ್ಯ ಮುಂಗಾರು (Southwest Monsoon) ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ 'ಎಲ್ಲೋ ಅಲರ್ಟ್' ಘೋಷಿಸಿದೆ.

Add Asianetnews Kannada as a Preferred SourcegooglePreferred
27
60 ಕಿ.ಮೀ ವೇಗದ ಗಾಳಿ: ಜನರಿಗೆ ಎಚ್ಚರಿಕೆ
Image Credit : Asianet News

60 ಕಿ.ಮೀ ವೇಗದ ಗಾಳಿ: ಜನರಿಗೆ ಎಚ್ಚರಿಕೆ

ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

Related Articles

Related image1
ಅರಬ್ಬೀ ಸಮುದ್ರದಲ್ಲಿ ವೇಗ ಪಡೆದ ಮುಂಗಾರು ಮಾರುತ; ರಾಜ್ಯದ 16 ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುನ್ಸೂಚನೆ!
Related image2
ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!
37
ದಕ್ಷಿಣ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ:
Image Credit : Asianet News

ದಕ್ಷಿಣ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ:

ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rainfall) ಮುನ್ಸೂಚನೆಯಿದೆ. ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

47
ಉತ್ತರ ಒಳನಾಡಿನ ಸ್ಥಿತಿ:
Image Credit : Asianet News

ಉತ್ತರ ಒಳನಾಡಿನ ಸ್ಥಿತಿ:

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.

57
ಕರಾವಳಿಯಲ್ಲಿ ಮಳೆ ಅಬ್ಬರ:
Image Credit : Akshathuchangi

ಕರಾವಳಿಯಲ್ಲಿ ಮಳೆ ಅಬ್ಬರ:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಮೀನುಗಾರರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ತಿಳಿಸಲಾಗಿದೆ.

67
ಬೆಂಗಳೂರು ಹವಾಮಾನ ಹೇಗಿರಲಿದೆ?
Image Credit : Asianet News

ಬೆಂಗಳೂರು ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 21°C ದಾಖಲಾಗುವ ಸಂಭವವಿದೆ.

77
ಮುಂಗಾರು ಪ್ರವೇಶದ ಹಾದಿ:
Image Credit : Asianet News

ಮುಂಗಾರು ಪ್ರವೇಶದ ಹಾದಿ:

ಸದ್ಯ ಮುಂಗಾರು ಮಾರುತಗಳು ಆಗ್ನೇಯ ಅರಬ್ಬೀ ಸಮುದ್ರ, ಅಂಡಮಾನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಆವರಿಸಿವೆ. ಮುಂದಿನ 3-4 ದಿನಗಳಲ್ಲಿ ಇವು ಕೇರಳದ ಕಡೆಗೆ ಮುನ್ನಡೆಯಲು ಪೂರಕವಾದ ವಾತಾವರಣವಿದೆ. ಉತ್ತರ ಪ್ರದೇಶದಿಂದ ಕೇರಳದವರೆಗೆ ಹರಡಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಮಳೆ
ಕರ್ನಾಟಕ ಹವಾಮಾನ
ಹವಾಮಾನ ಮುನ್ಸೂಚನೆ
ಮಳೆ
ಬೆಂಗಳೂರು

Latest Videos
Recommended Stories
Recommended image1
ಗಮನಿಸಿ, ಮೇ 20 ರಿಂದ ಜೂನ್ 2ರವರೆಗೆ ಮಂಗಳೂರಿನಿಂದ ಹೊರಡುವ ಎಲ್ಲಾ ರೈಲುಗಳ ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆ!
Recommended image2
ದುಬಾರೆ ಆನೆ ಶಿಬಿರದಲ್ಲಿ ಜಳಕ ಜಗಳ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಆನೆ ಸಾವು!
Recommended image3
ಸಾರಿಗೆ ನೌಕರರ ಮುಷ್ಕರಕ್ಕೆ ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ
Related Stories
Recommended image1
ಅರಬ್ಬೀ ಸಮುದ್ರದಲ್ಲಿ ವೇಗ ಪಡೆದ ಮುಂಗಾರು ಮಾರುತ; ರಾಜ್ಯದ 16 ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುನ್ಸೂಚನೆ!
Recommended image2
ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved