MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯಾದ್ಯಂತ 5 ದಿನ ಮಳೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯಾದ್ಯಂತ 5 ದಿನ ಮಳೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ, ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ.

2 Min read
Author : Sathish Kumar KH
Published : May 10 2026, 02:33 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Getty

ಬೆಂಗಳೂರು (ಮೇ 10): ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ಮಾಡಿದೆ.

Add Asianetnews Kannada as a Preferred SourcegooglePreferred
26
Image Credit : Getty

ವಾಯುಭಾರ ಕುಸಿತದ ಪ್ರಭಾವ

ಮನ್ನಾರ್ ಕೊಲ್ಲಿ ಮತ್ತು ಶ್ರೀಲಂಕಾವನ್ನು ಒಳಗೊಂಡ ಪ್ರದೇಶದಲ್ಲಿ ಚಂಡಮಾರುತದ ಸುಳಿಗಾಳಿ (Cyclonic Circulation) ಸಕ್ರಿಯವಾಗಿದೆ. ಇದರ ಪ್ರಭಾವದಿಂದ ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಕರ್ನಾಟಕದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹವಾಮಾನ ಬದಲಾಗಲಿದೆ.

Related Articles

Related image1
ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ
Related image2
ರಾಜ್ಯದಲ್ಲಿ ಮಳೆ ಆರ್ಭಟ: ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರಿನಲ್ಲೂ ವರುಣನ ಸಿಂಚನ!
36
Image Credit : ANI

ಜಿಲ್ಲಾವಾರು ಮಳೆ ಮುನ್ಸೂಚನೆ

ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಈ ಕೆಳಗಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ:

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 10 ರಿಂದ 14 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು: ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 14 ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಬಹುದು.

46
Image Credit : X

ದಕ್ಷಿಣ ಒಳನಾಡು: ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೇ 10 ರಿಂದ 14 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಮೇ 14 ರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆಯ ಸಿಂಚನವಾಗುವ ಸಾಧ್ಯತೆಯಿದೆ.

56
Image Credit : Meta AI

ತಾಪಮಾನ ಮತ್ತು ಎಚ್ಚರಿಕೆ

ಮುಂದಿನ 5 ದಿನಗಳವರೆಗೆ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಕರಾವಳಿ ಭಾಗದಲ್ಲಿ ತಾಪಮಾನವು ವಾಡಿಕೆಗಿಂತ ಸ್ವಲ್ಪ ಹೆಚ್ಚಿದ್ದರೆ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಮೇ 14 ರವರೆಗೆ ಗುಡುಗು ಮತ್ತು ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

66
Image Credit : ANI

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡದಿಂದ ಕೂಡ ಇರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ ತಾಪಮಾನ 22°C ದಾಖಲಾಗುವ ಸಾಧ್ಯತೆಯಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಹವಾಮಾನ
ಕರ್ನಾಟಕ ಮಳೆ
ಮಳೆ
ಹವಾಮಾನ ಮುನ್ಸೂಚನೆ

Latest Videos
Recommended Stories
Recommended image1
ಬಿಟ್ ಕಾಯಿನ್: ಇಷ್ಟೆಲ್ಲಾ ಆದ್ರೂ ಬುದ್ಧಿ ಕಲಿಯದ ಶ್ರೀಕಿ, ಇಡಿ ಬಂಧನದ ಹಿಂದಿನ ದಿನ ಅಮೆರಿಕ ಕಂಪನಿಯ ಸರ್ವರ್ ಹ್ಯಾಕ್
Recommended image2
Art of Living: ಬಂಜರು ಭೂಮಿಯಲ್ಲಿ ಅರಳಿದ ಆರ್ಟ್ ಆಫ್ ಲಿವಿಂಗ್!
Recommended image3
ಬೆಂಗಳೂರಿನ ನೆಲದಲ್ಲಿಂದು ಕೇಸರಿ ಸೂರ್ಯ ಉದಯ, ಎಚ್‌ಎಎಲ್‌ನಲ್ಲಿ ಪ್ರಧಾನಿ ಮೋದಿ ಅಬ್ಬರ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ!
Related Stories
Recommended image1
ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ
Recommended image2
ರಾಜ್ಯದಲ್ಲಿ ಮಳೆ ಆರ್ಭಟ: ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಮುನ್ನೆಚ್ಚರಿಕೆ, ಬೆಂಗಳೂರಿನಲ್ಲೂ ವರುಣನ ಸಿಂಚನ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved