ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ
ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಲ್ಲಿ ಮೇ.11ರ ವರೆಗೆ ಭಾರಿ ಮಳೆ, ಇಂದು ಮುಂಜಾನೆಯಿಂದಲೇ ಹಲೆವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಅಲರ್ಟ್ ಮೆಸೇಜ್ ಬಂದಿದೆ.

ಕರ್ನಾಟಕದಲ್ಲಿ ಮಳೆ ಆರಂಭ
ಕರ್ನಾಟಕದ ಬಹುತೇಕ ಜಿಲ್ಲೆಗಳು ಉರಿ ಬಿಸಿಲಿನಿಂದ ತತ್ತರಿಸಿ ಹೋಗಿದೆ. ಇದರ ನಡುವೆ ಅಲ್ಲೊಂದು ಇಲ್ಲೊಂದು ಮಳೆಯಾಗಿದ್ದರು ಭೂಮಿ ತಂಪಾಗಿಲ್ಲ. ಇದೀಗ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸೂಚನೆ ನೀಡಲಾಗಿದೆ.
18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಇಂದು ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಭಾರಿ ಮಳೆ ಸೂಚನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದಿನಿಂದ ಭಾರಿ ಮಳೆಯಾಗಲಿದೆ ಎಂದಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ
ಬೆಳಗಾವಿ, ಬಾಗಲಕೋಟೆ, ರಾಯಚೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಧಾರವಾಡ, ಕೊಪ್ಪಳ, ಹಾವೇರಿ, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಲ್ಲಿ ಭಾರಿ ಮಳೆ ಸೂಚನೆ
ಇಂದಿನಿಂದ ಮೇ 11ರ ವರಗೆ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆದರೆ ಇದು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಯಾವುದೇ ಅಲರ್ಟ್ ಸೂಚನೆ ನೀಡಿಲ್ಲ. ಆದರೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ಬೆಂಗಳೂರಲ್ಲಿ ಅಧಿಕಾರಿಗಳು ಅಲರ್ಟ್
ಇತ್ತೀಚೆಗೆ ಸುರಿದ ಮೊದಲ ಮಳೆಗೆ ಬೆಂಗಳೂರಿನಲ್ಲಿ ಭಾರಿ ಅನಾಹುತ ಸಂಭವಿಸಿತ್ತು. ಬೌರಿಂಗ್ ಆಸ್ಪತ್ರೆ ಬಳಿಕ ಗೋಡೆ ಕುಸಿದು ಹಲವರು ಬಲಿಯಾಗಿದ್ದರು. ಇತ್ತ ವಿದ್ಯುತ್ ಸ್ಪರ್ಶಿಸಿ ಕೆಲವರು ಬಲಿಯಾಗಿದ್ದರು. ಹೀಗಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದ್ದು, ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಬೆಂಗಳೂರಲ್ಲಿ ಅಧಿಕಾರಿಗಳು ಅಲರ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

