ಗೃಹಲಕ್ಷ್ಮಿಯರ ಮನೆಮುಂದೆ ಅರಳಿದ 'ನಾ ಯಜಮಾನಿ' ರಂಗೋಲಿ: ನಾಳೆ ಮಹಿಳೆಯರ ಖಾತೆಗೆ 2000 ರೂ. ವರ್ಗ
ಬೆಂಗಳೂರು (ಆ.29): ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದ್ದು, ರಾಜ್ಯದ ಎಲ್ಲ ಮಹಿಳೆಯರು ತಮ್ಮ ಮನೆಯ ಮುಂದೆ 'ನಾ ಯಜಮಾನಿ' ಎಂದು ರಂಗೋಲಿ ಬಿಡಿಸಿ ಯೋಜನೆಯನ್ನು ಮನೆಗೆ ಬರಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಮನವಿ ಮಾಡಿದ್ದರು. ಇದರ ಬೆನ್ನಲ್ಲಿಯೇ ರಾಜ್ಯಾದ್ಯಂತ ಗ್ರಾಮೀಣ ಭಾಗಗಳಲ್ಲಿ ನಾ ಯಜಮಾನಿ, ನಾನೇ ಯಜಮಾನಿ ಎಂಬ ರಂಗೋಲಿ ಚಿತ್ರಗಳು ಕಂಡುಬರುತ್ತಿವೆ.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ಸಿಗಲಿದ್ದು, ರಾಜ್ಯದ ಎಲ್ಲ ಮಹಿಳೆಯರು ತಮ್ಮ ಮನೆಯ ಮುಂದೆ 'ನಾ ಯಜಮಾನಿ' ಎಂದು ರಂಗೋಲಿ ಬಿಡಿಸಿ ಯೋಜನೆಯನ್ನು ಮನೆಗೆ ಬರಮಾಡಿಕೊಳ್ಳುತ್ತಿದ್ದಾರೆ.
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನದಿಂದಲೇ ಮನೆಗಳ ಮುಂದೆ ನಾನೇ ಯಜಮಾನಿ ಎಂಬ ರಂಗೋಲಿ ಬಿಡಿಸುತ್ತಿರುವ ಚಿತ್ರಗಳು ಕಂಡುಬಂದವು. ಇನ್ನು ಎಲ್ಲರೂ ನಾಳೆ ಬೆಳಗ್ಗೆ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ರಂಗೋಲಿ ಬಿಡಿಸುತ್ತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 1.28 ಕೋಟಿ ಮಹಿಳೆಯರು 2000 ರೂ. ಹಣವನ್ನು ಪಡೆಯಲು ಅರ್ಹ ಫಲಾನುಭವಿಗಳು ಇದ್ದಾರೆ. ಅದರಲ್ಲಿ ಈವರೆಗೆ 1.11 ಕೋಟಿ ಫಲಾನುಭವಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆ (ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂ. ಸಹಾಯಧನ) ನಾಳೆ ಬುಧವಾರ (ಆ.30)ಮೈಸೂರಿನಲ್ಲಿ ಉದ್ಘಾಟನೆ ಆಗಲಿದ್ದು, ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.
ರಾಹುಲ್‌ಗಾಂಧಿಯಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನಗರದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2000 ಸಾವಿರ ರೂ. ಹಣ ಪಡೆಯುವುದರಿಂದ 15 ಲಕ್ಷ ಮಹಿಳೆಯರು ವಂಚಿತರಾಗಲಿದ್ದಾರೆ. ಗೃಹಲಕ್ಷ್ಮಿಗೆ ಅರ್ಜಿ ಹಾಕಿದ 15 ಲಕ್ಷ ಮಹಿಳೆಯರು 2000 ರೂ. ಪಡೆಯಲು ಅರ್ಹರಲ್ಲ: ತಿದ್ದುಪಡಿಗೆ ಇಲ್ಲಿದೆ ಮಾಹಿತಿ