ಎಸ್ಟಿ ಮೀಸಲಾತಿಗಾಗಿ ಮೊಳಗಿದ ರಣಕಹಳೆ, ಬೆಂಗಳೂರಿನತ್ತ ಕುರುಬರ ದಂಡು
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹೋರಾಟಕ್ಕಾಗಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದೆ. ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಕನಕದಾಸರ ಮೂರ್ತಿಗೆ ಪೂಜೆ ಸಲ್ಲಿಸಿ ಪಾದಯಾತ್ರೆ ಚಾಲನೆ ಕೊಟ್ಟಿದ್ದು, ಕುರುಬರ ದಂಡು ಬೆಂಗಳೂರಿನತ್ತ ಹೆಜ್ಜೆ ಹಾಕಿತು...

ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹೋರಾಟದ ಪಾದಯಾತ್ರೆ ಆರಂಭವಾಗಿದೆ.

ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಕನಕದಾಸರ ಮೂರ್ತಿಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

ಯಾತ್ರೆಯಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಚಿವ ಕೆ.ಎಸ್. ಈಶ್ವರಪ್ಪ, ಕೆ.ಇ. ಕಾಂತೇಶ್, ಎಂ. ಶ್ರೀಕಾಂತ್ ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದಾರೆ.

ಯುವಕರೊಂದಿಗೆ ಹೆಜ್ಜೆ ಹಾಕಿದ ಕುರುಬ ಎಸ್‌ಟಿ ಹೋರಾಟ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಕೆ.ಎಸ್.ವಿರುಪಾಕ್ಷಪ್ಪ

ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕಾಗಿನೆಲೆಯಿಂದ ಆರಂಭಿಸಿ ಬೆಂಗಳೂರಿನವರೆಗೆ ಜ. 15ರಿಂದ ಫೆ.7ರವರೆಗೆ ಬರೋಬ್ಬರಿ 340 ಕಿ.ಮೀ. ಈ ಪಾದಯಾತ್ರೆ ನಡೆಯಲಿದೆ.

ರಸ್ತೆಯುದ್ದಕ್ಕೂ ಭಾರತದ ತ್ರಿವರ್ಣ, ಕರ್ನಾಟಕದ ಧ್ವಜ ಹಿಡಿದು ಬೆಂಗಳೂರಿನತ್ತ ಹೆಜ್ಜೆ ಹಾಕಿದ ಕುರುಬರ ಪಡೆ

ಪ್ರತಿದಿನ ಬೆಳಿಗ್ಗೆ 5.30ರಿಂದ ಹೊರಡುವ ಪಾದಯಾತ್ರೆಯು 10 ಕಿ.ಮೀ. ಸಂಚರಿಸಿ ಮುಂದಿನ ವಾಸ್ತವ್ಯ ಕೇಂದ್ರ ಸೇರಲಿದೆ. ಅಲ್ಲಿ ಗುರುಗಳ ಪೂಜೆ, ಪುನಸ್ಕಾರ, ಪ್ರಸಾದ ಆದ ಮೇಲೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತ್ತೆ 10 ಕಿ.ಮೀ. ಪಾದಯಾತ್ರೆ ಸಾಗಿ ರಾತ್ರಿ ವಾಸ್ತವ್ಯ ಮಾಡಲಿದ್ದು, ಫೆ.7ರಂದು ಕುರುಬರ ದಂಡು ರಾಜಧಾನಿ ಬೆಂಗಳೂರಿಗೆ ತಲುಪಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ