MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ್‌ಗೆ ಲೋಕಾಯುಕ್ತ ಶಾಕ್: ಕೋಟಿ ಕೋಟಿ ಹಣ, ಬಂಗಾರ, 6 ಮನೆ, 2 ಶಾಲೆ ಪತ್ತೆ!

ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ್‌ಗೆ ಲೋಕಾಯುಕ್ತ ಶಾಕ್: ಕೋಟಿ ಕೋಟಿ ಹಣ, ಬಂಗಾರ, 6 ಮನೆ, 2 ಶಾಲೆ ಪತ್ತೆ!

ಲೋಕಾಯುಕ್ತ ಪೊಲೀಸರು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಪುರುಷೋತ್ತಮ್ ದಾಸ್ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನ 11 ಕಡೆಗಳಲ್ಲಿ ನಡೆದ ಈ ದಾಳಿಯಲ್ಲಿ, ಕೋಟ್ಯಂತರ ಮೌಲ್ಯದ ಆಸ್ತಿ, ಶಾಲೆಗಳು, ಮನೆಗಳು, ನಗದು ಮತ್ತು ಚಿನ್ನಾಭರಣ ಪತ್ತೆಯಾಗಿವೆ.

2 Min read
Author : Sathish Kumar KH
Published : Feb 12 2026, 02:24 PM IST
Share this Photo Gallery
  • FB
  • TW
  • Linkdin
  • Whatsapp
15
ಸಾರ್ವಜನಿಕರ ಸೇವಕನ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!
Image Credit : Asianet News

ಸಾರ್ವಜನಿಕರ ಸೇವಕನ ಮನೆಯಲ್ಲಿ ಕೋಟಿ ಕೋಟಿ ಆಸ್ತಿ!

ಬೆಂಗಳೂರು/ಮೈಸೂರು (ಫೆ.12): ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು, ಗುರುವಾರ ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆಯ (PWD) ಮುಖ್ಯ ಎಂಜಿನಿಯರ್ ಪುರುಷೋತ್ತಮ್ ದಾಸ್ ಅವರಿಗೆ ಸೇರಿದ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ದಾಳಿಯಲ್ಲಿ ಅಧಿಕಾರಿಗಳು ಕಂಡ ದೃಶ್ಯ ಕಂಡು ದಂಗಾಗಿದ್ದಾರೆ. ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಒಟ್ಟು 11 ಕಡೆಗಳಲ್ಲಿ ಪರಿಶೀಲನೆ ನಡೆಯುತ್ತಿದೆ.

25
11 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ
Image Credit : Asianet News

11 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ

ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನ 6 ಕಡೆ ಮತ್ತು ಮೈಸೂರಿನ 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಪುರುಷೋತ್ತಮ್ ಅವರ ನಾಲ್ಕು ಅಂತಸ್ತಿನ ಭವ್ಯ ಬಂಗಲೆಗೆ ನುಗ್ಗಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ಸಮಯದಲ್ಲಿ ಪುರುಷೋತ್ತಮ್ ಮನೆಯಲ್ಲೇ ಇದ್ದು, ಅಧಿಕಾರಿಗಳ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆಯೂ ದಾಳಿ ಮುಂದುವರಿದಿದೆ.

Related Articles

Related image1
ಭ್ರಷ್ಟರ ಬೇಟೆ: ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಎಂಜಿನಿಯರ್ ಹಾಗೂ ಅಕೌಂಟೆಂಟ್!
Related image2
Breaking News: ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಬೇಟೆ; BESCOM AEE ಸೇರಿ ಅಧಿಕಾರಿಗಳಿಗೆ ಶಾಕ್!
35
ಮೈಸೂರಿನಲ್ಲಿ ಎರಡು ಶಾಲೆ, ಹಲವು ಮನೆಗಳು ಪತ್ತೆ
Image Credit : Asianet News

ಮೈಸೂರಿನಲ್ಲಿ ಎರಡು ಶಾಲೆ, ಹಲವು ಮನೆಗಳು ಪತ್ತೆ

ಈ ದಾಳಿಯ ಅತ್ಯಂತ ಆಘಾತಕಾರಿ ಅಂಶವೆಂದರೆ ಪುರುಷೋತ್ತಮ್ ಅವರು ಮೈಸೂರಿನಲ್ಲಿ ಎರಡು ಶಾಲೆಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಸುಮಾರು ಐದಾರು ಸ್ವಂತ ಮನೆಗಳನ್ನು ನಿರ್ಮಿಸಿರುವುದು ಪತ್ತೆಯಾಗಿದೆ. "ಇದು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಮೈಸೂರಿನಲ್ಲಿ 5 ಕಡೆ ಮತ್ತು ಬೆಂಗಳೂರಿನಲ್ಲಿ 6 ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವರ ಹೆಸರಿನಲ್ಲಿ ಎರಡು ಶಾಲೆಗಳು, ಹಲವು ಸೈಟ್ ದಾಖಲೆಗಳು, ಮನೆಗಳು ಇರುವುದು ದೃಢಪಟ್ಟಿದೆ," ಎಂದು ಎಸ್ಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದಾರೆ.

45
ನಗದು ಮತ್ತು ಚಿನ್ನಾಭರಣಗಳ ರಾಶಿ:
Image Credit : Asianet News

ನಗದು ಮತ್ತು ಚಿನ್ನಾಭರಣಗಳ ರಾಶಿ:

ಪರಿಶೀಲನೆ ವೇಳೆ ಪುರುಷೋತ್ತಮ್ ಅವರ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಮತ್ತು ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಸದ್ಯ ಚಿನ್ನದ ಮೌಲ್ಯಮಾಪನ ಮತ್ತು ನಗದು ಎಣಿಕೆ ಕಾರ್ಯ ನಡೆಯುತ್ತಿದೆ. ಆಸ್ತಿ ದಾಖಲೆಗಳನ್ನು ಪರಿಶೀಲಿಸಿದಾಗ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

55
ಪುಸ್ತಕ ಬರೆದಿದ್ದ ಪುರುಷೋತ್ತಮ್:
Image Credit : Asianet News

ಪುಸ್ತಕ ಬರೆದಿದ್ದ ಪುರುಷೋತ್ತಮ್:

ವಿಶೇಷವೆಂದರೆ, ಈ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿರುವ ಪುರುಷೋತ್ತಮ್ ಅವರು 'ಸತ್ಯಕಾಮ ಜಾಬಾಲ' ಎಂಬ ಹೆಸರಿನ ಪುಸ್ತಕವನ್ನೂ ಬರೆದಿದ್ದಾರೆ ಎನ್ನಲಾಗಿದೆ. ಸಾಹಿತ್ಯಿಕ ಅಭಿರುಚಿಯ ನಡುವೆಯೇ ಇಷ್ಟೊಂದು ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿರುವುದು ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಲೋಕಾಯುಕ್ತ ಪೊಲೀಸರು ಸದ್ಯ ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದು, ಸಂಜೆಯ ವೇಳೆಗೆ ಸಂಪೂರ್ಣ ಆಸ್ತಿಯ ಮೌಲ್ಯದ ವಿವರ ಲಭ್ಯವಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಈ ದಾಳಿ ಸದ್ದನ್ನುಂಟು ಮಾಡಿದ್ದು, ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಲೋಕಾಯುಕ್ತ
ಬೆಂಗಳೂರು
ಸರ್ಕಾರಿ ಉದ್ಯೋಗ

Latest Videos
Recommended Stories
Recommended image1
ಒಂದೇ ತಿಂಗಳಲ್ಲಿ ಹಸಿರು ನೆಲ ಬರಡು ಭೂಮಿ ಆಯ್ತು: ಬೆಂಗಳೂರು ಜೆಪಿ ನಗರದ ಫೋಟೋ ವೈರಲ್
Recommended image2
ರಾಜ್ಯಕ್ಕೆ ಬಿಗ್ ಶಾಕ್ ಕೊಟ್ಟ ಕೇಂದ್ರ, ಡಬ್ಬಲ್ ಡೆಕ್ಕರ್ ಫ್ಲೈಓವರ್, ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಬ್ರೇಕ್!
Recommended image3
IPL 2026: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ಆಯೋಜನೆ ಬಗ್ಗೆ ಹೈವೋಲ್ಟೇಜ್ ಸಭೆ! RCB ಫ್ಯಾನ್ಸ್‌ಗೆ ಶುಭ ಸುದ್ದಿನಾ?
Related Stories
Recommended image1
ಭ್ರಷ್ಟರ ಬೇಟೆ: ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಎಂಜಿನಿಯರ್ ಹಾಗೂ ಅಕೌಂಟೆಂಟ್!
Recommended image2
Breaking News: ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಬೇಟೆ; BESCOM AEE ಸೇರಿ ಅಧಿಕಾರಿಗಳಿಗೆ ಶಾಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved