ಚಿತ್ರಗಳು: ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ, ಮೊದಲ ದಿನದ ಹೈಲೇಟ್ಸ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು.
ಎರಡು ದಿನಗಳ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು.
ಪತ್ರಕರ್ತರ ರಾಜ್ಯ ಸಮ್ಮೇಳನ ಮೆರವಣಿಗೆ ಪುರಭವನದವರೆಗೆ ನಡೆಯಿತು. ಚೆಂಡೆ, ವಾದ್ಯ ಘೋಷದೊಂದಿಗೆ ನಡೆದ ಮೆರವಣಿಗೆಯಲ್ಲಿ ಶನಿವಾರದ ಎಲ್ಲ ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳ ಲೋಗೋಗಳನ್ನು ಹೊತ್ತ ಪಲ್ಲಕಿ ಗಮನ ಸೆಳೆಯಿತು.
ಕಡಲ ನಗರಿ ಮಂಗಳೂರಿನಲ್ಲಿ ನಡೆದ ಪತ್ರಕರ್ತರ 35ನೇ ಸಮ್ಮೇಳನದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಮಾದರಿ ಪತ್ರಕರ್ತರ ಸಂಘ ಎಂದು ಗುರುತಿಸಿ ಪ್ರಶಸ್ತಿಯನ್ನು ರಾಜ್ಯ ಸಂಘದ ವತಿಯಿಂದ ನೀಡಲಾಯಿತು.
ತಮ್ಮ ವರದಿಯ ಮೂಲಕ ಹಾಜಬ್ಬ ಅವರನ್ನು ಪರಿಚಯಿಸಿದ ಗುರುವಪ್ಪ ಎನ್.ಟಿ.ಬಾಳೆಪುಣಿ, ಯೋಗೀಶ್ ಹೊಳ್ಳ, ಗುರುರಾಜ ಪಣಿಯಾಡಿ, ಚಿದಂಬರ ಬೈಕಂಪಾಡಿ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.
ಪತ್ರಕರ್ತರ 35ನೇ ಸಮ್ಮೇಳನದ ಮೆರವಣಿಗೆ
ಪತ್ರಕರ್ತರು ಸಹಿತ ಖ್ಯಾತ ವ್ಯಂಗ್ಯ ಚಿತ್ರಕಾರರು ಬರೆದ ವ್ಯಂಗ್ಯ ಚಿತ್ರಗಳು ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದವು.
ಪತ್ರಕರ್ತರ 35ನೇ ಸಮ್ಮೇಳನದಲ್ಲಿ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಮಾತನಾಡುತ್ತಿರುವುದು.