ಕೃಷಿ ಸ್ಟಾರ್ಟಪ್‌ಗಳಿಂದ ಯುವಕರಿಗೆ ಹೊಸ ಅವಕಾಶ: ಸಚಿವ ಬಿ.ಸಿ.ಪಾಟೀಲ್‌

First Published 22, Aug 2020, 9:49 AM

ಬೆಂಗಳೂರು(ಆ.22):  ಕೃಷಿ ಕ್ಷೇತ್ರದ ನೂತನ ಆವಿಷ್ಕಾರಗಳು ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದ್ದು, ನವೀನ ಕೃಷಿ ತಂತ್ರಜ್ಞಾನವು ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ‘ಕೃಷಿ ನವೋದ್ಯಮ’ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೃಷಿ ಕ್ಷೇತ್ರಕ್ಕೆ ನವಚೈತನ್ಯ ಒದಗಿಸಲು ಕೃಷಿ ನವೋದ್ಯಮಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ. ರಾಜ್ಯದ ಕೈಗಾರಿಕಾ ನೀತಿಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾರ್ಷಿಕವಾಗಿ 4000 ನವೋದ್ಯಮ ಆರಂಭಿಸಲು ಅನುಕೂಲವಾಗಿದ್ದು, ಇದರಿಂದ 1.70 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ದೇಶದಲ್ಲಿ ಕೃಷಿ ನವೋದ್ಯಮಗಳು ಪ್ರಾರಂಭಿಕ ಹಂತದಲ್ಲಿಯೇ ಹೆಚ್ಚು ಜನರನ್ನು ಆಕರ್ಷಿಸುತ್ತಿವೆ. ಅಂಕಿ ಅಂಶಗಳ ಪ್ರಕಾರ ಪ್ರತಿದಿನ ಎರಡರಿಂದ ಮೂರು ನವೋದ್ಯಮಗಳು ಸ್ಥಾಪನೆಯಾಗುತ್ತಿವೆ. ಆ್ಯಕ್ಸೆಂಚರ್‌ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ನಮ್ಮ ದೇಶದಲ್ಲಿ ನವೋದ್ಯಮಗಳಿಂದ 450 ಕೋಟಿ ಡಾಲರ್‌ (ಸುಮಾರು 34 ಸಾವಿರ ಕೋಟಿ ರು.) ಮಾರುಕಟ್ಟೆಸೃಷ್ಟಿಯಾಗಲಿದೆ. ಇದರಿಂದ ರೈತರು ಬೆಳೆದ ಬೆಳೆ ಮತ್ತು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಲಭಿಸಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಕರ್ನಾಟಕ ಸಿರಿಧಾನ್ಯಗಳ ಹಬ್‌ ಎಂದು ಗುರುತಿಸಿಕೊಂಡಿದ್ದು, ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿರುವ ಸಿರಿಧಾನ್ಯವನ್ನು ಮಧ್ಯಾಹ್ನದ ಬಿಸಿಯೂಟದಲ್ಲಿ ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ಸಿರಿಧಾನ್ಯ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಜೇವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್‌ ಪಾರ್ಕ್ಗಳಿದ್ದು, ಕೇಂದ್ರ ಸರ್ಕಾರದ ‘ಆತ್ಮನಿರ್ಭರ’ ಯೋಜನೆಯಡಿ ಕೆ.ಆರ್‌.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್‌ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ಆದ್ಯತೆ ಸಿಗಲಿದೆ ಎಂದು ಹೇಳಿದರು.

ಕೋವಿಡ್‌-19 ಸಂಕಷ್ಟದ ಅವಧಿಯಲ್ಲಿ ರೈತರು ಬೆಳೆದ ಹಣ್ಣು, ತರಕಾರಿ ಸೇರಿದಂತೆ ಇತರೆ ಫಸಲನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಶೀತಲೀಕರಣ ಕೇಂದ್ರಗಳನ್ನು ಆರಂಭಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಹಕಾರ ಮತ್ತು ಸೂಚನೆಯಂತೆ ರೈತರಿಗೆ ಇನ್ನಷ್ಟುಅನುಕೂಲ ಕಲ್ಪಿಸುವ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್‌ ಖತ್ರಿ, ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

loader