ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರವಲ್ಲ, ನೋವು ಎಂದಿದ್ದಾರೆ.

ಸರ್ಕಾರಕ್ಕೆ ಬಿಗ್ ಶಾಕ್
ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ಆರಂಭಿಸಿದ್ದಾರೆ. ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮಂತ್ರಿಗಳು ತಮ್ಮ ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಮೀಟಿಂಗ್ ಆರಂಭಿಸಿದ್ರೆ, ಇತ್ತ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ ಹಾಗೂ ಹೊಸ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಮಂತ್ರಿ ಮಾಡಿ ಎಂದು ಕೇಳಿಲ್ಲ, ಅವರೇ ಹೇಳಿ ಎರಡು ಬಾರಿ ನೋವು
ನಾನು ಯಾರ ಬಳಿಯೂ ಮಂತ್ರಿ ಮಾಡಿ ಎಂದು ಕೇಳಿರಲಿಲ್ಲ. ಹೈಕಮಾಂಡ್ ಭೇಟಿ ಮಾಡಿಲ್ಲ, ಡಿಕೆ ಶಿವಕುಮಾರ್ ಬಳಿ ನಾನು ಮಂತ್ರಿ ಎಂದಿ ಕೇಳಿಲ್ಲ. ಆದರೆ ಇದೀಗ ಎರಡನೇ ಬಾರಿ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಎರಡು ಬಾರಿ ಹೀಗೆ ಬೇರೆ ಖಾತೆ ನೀಡಿದ್ದಾರೆ. ಇದು ನೋವು ತಂದಿದೆ ಎಂದಿದ್ದಾರೆ.
ನಿನ್ನೆ ನಡೆದ ಪ್ರಯತ್ನ, ನೋ ಕಮೆಂಟ್ಸ್ ಎಂದ ರಾಮಲಿಂಗ ರೆಡ್ಡಿ
ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ಕಳುಹಿಸಿದ್ದಾರೆ. ಬೆಂಗಳೂರು ನಗರಾಭಿವೃದ್ದಿ ಖಾತೆ ನೀಡುವುದಾಗಿ ಹೇಳಿ ಬಳಿಕ ಮಾತು ತಪ್ಪಿದಾಗ ನೋವಾಗಿದೆ. ಹೀಗಾಗಿ ಈ ಕುರಿತು ನಡೆಸಿದ ಮಾತುಕತೆಯಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ತೀವ್ರ ನೋವುಂಟಾಗಿರುವುದು ಸ್ಪಷ್ಟವಾಗಿದೆ. ಇದೇ ನೋವು, ಬೇಸರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಏನೆಲ್ಲ ಆಗಿದೆ ಅಂತಾ ಹೇಳೋಕ್ಕೆ ಆಗಲ್ಲ
ಖಾತೆ ಹಂಚಿಕೆ, ಬದಲಾವಣೆ ನಡುವೆ ಏನೆಲ್ಲಾ ಆಗಿದೆ ಎಂದು ಹೇಳಲು ಆಗಲ್ಲ. ಹೈಕಮಾಂಡ್ ಜೊತೆ ಮಾತುಕತೆ, ಮನವೊಲಿಕೆ ಮಾತಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನನ್ನ ರಾಜೀನಾಮೆ ನನ್ನ ಕುಟುಂಬಕ್ಕೆ ಗೊತ್ತಿಲ್ಲ. ಯಾರ ಜೊತೆಗೆ ಚರ್ಚಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಮನೆಗೆ ಬಂದು ಡಿಕೆ ಶಿವಕುಮಾರ್ ಮಾತು ಕೊಟ್ಟಿದ್ದರು.
ಈಗೀನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಸಂಸದ ಸುರೇಶ್ ಅವರು ನಮ್ಮ ಮನೆಗೆ ಬಂದಿದ್ದರು. ಮುಂದೆ ನಾನೇ ಸಿಎಂ ಆಗ್ತೇನೆ ನಿಂಗೆ ಬೆಂಗಳೂರು ನಗರಾಭಿವೃದ್ಧಿ ಕೊಡುತ್ತೇನೆ ಎಂದಿದ್ದರು. ಆದರೆ ಮಾತು ಕೊಟ್ಟು ಪದೇ ಪದೇ ಈ ರೀತಿ ಮಾತು ಬದಲಾಯಿಸಿದಾಗ ಬೇಸರ ಆಗುತ್ತದೆ ಎಂದಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಏನಿದೆ?
ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ.ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

