ಕೋವಿಡ್ ಆರೈಕೆ ಕೇಂದ್ರಕ್ಕೆ ವಸತಿ ಸಚಿವ ವಿ.ಸೋಮಣ್ಣ ಚಾಲನೆ
ಬೆಂಗಳೂರು(ಜು.29): ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೂರ್ವ ವಲಯ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಸಲಹೆ ನೀಡಿದ್ದಾರೆ.

<p>ಮಂಗಳವಾರ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಅವರು, ಕೊರೋನಾ ಸೋಂಕಿನಿಂದ ಜನರು ಹೆದರಿಕೊಂಡಿದ್ದು ಅವರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಿದೆ ಎಂದು ಹೇಳಿದ ಸಚಿವ ವಿ.ಸೋಮಣ್ಣ </p>
ಮಂಗಳವಾರ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಅವರು, ಕೊರೋನಾ ಸೋಂಕಿನಿಂದ ಜನರು ಹೆದರಿಕೊಂಡಿದ್ದು ಅವರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಿದೆ ಎಂದು ಹೇಳಿದ ಸಚಿವ ವಿ.ಸೋಮಣ್ಣ
<p>ಕೊರೋನಾ ಸೋಂಕು ಹರಡದಂತೆ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸಬೇಕಿದ್ದು, ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಧೈರ್ಯಗೆಡದೆ ಸೋಂಕಿನ ವಿರುದ್ಧ ಹೋರಾಡುವುದರ ಜತೆಗೆ ಈ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ಮಾಡಬೇಕು ಎಂದು ಹೇಳಿದ ಸಚಿವ ಸೋಮಣ್ಣ </p>
ಕೊರೋನಾ ಸೋಂಕು ಹರಡದಂತೆ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸಬೇಕಿದ್ದು, ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಧೈರ್ಯಗೆಡದೆ ಸೋಂಕಿನ ವಿರುದ್ಧ ಹೋರಾಡುವುದರ ಜತೆಗೆ ಈ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ಮಾಡಬೇಕು ಎಂದು ಹೇಳಿದ ಸಚಿವ ಸೋಮಣ್ಣ
<p>ಈ ವೇಳೆ ಶಾಸಕ ಬೈರತಿ ಸುರೇಶ್, ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಇತರರಿದ್ದರು.</p>
ಈ ವೇಳೆ ಶಾಸಕ ಬೈರತಿ ಸುರೇಶ್, ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಇತರರಿದ್ದರು.
<p>ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ 60 ಹಾಸಿಗೆಗಳ ವ್ಯವಸ್ಥೆಯ ಕೋವಿಡ್ ಕೇರ್ ಕೇಂದ್ರ ತೆರೆಯಲಾಗಿದೆ. ಪುರುಷರಿಗಾಗಿ ಬಿ ಬ್ಲಾಕ್‌ನಲ್ಲಿ 30 ಹಾಸಿಗೆ ಮತ್ತು ಮಹಿಳೆಯರು, ವೈದ್ಯರಿಗಾಗಿ 30 ಹಾಸಿಗೆಗಳನ್ನು ಮೀಸಲು ಇಡಲಾಗಿದೆ. ಮಂಗಳವಾರದಿಂದಲೇ ಈ ಕೋವಿಡ್ ಕೇರ್ ಸೆಂಟರ್ ಸೇವೆಗೆ ಲಭ್ಯ</p>
ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ 60 ಹಾಸಿಗೆಗಳ ವ್ಯವಸ್ಥೆಯ ಕೋವಿಡ್ ಕೇರ್ ಕೇಂದ್ರ ತೆರೆಯಲಾಗಿದೆ. ಪುರುಷರಿಗಾಗಿ ಬಿ ಬ್ಲಾಕ್‌ನಲ್ಲಿ 30 ಹಾಸಿಗೆ ಮತ್ತು ಮಹಿಳೆಯರು, ವೈದ್ಯರಿಗಾಗಿ 30 ಹಾಸಿಗೆಗಳನ್ನು ಮೀಸಲು ಇಡಲಾಗಿದೆ. ಮಂಗಳವಾರದಿಂದಲೇ ಈ ಕೋವಿಡ್ ಕೇರ್ ಸೆಂಟರ್ ಸೇವೆಗೆ ಲಭ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ