MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕಲ್ಯಾಣ ಕರ್ನಾಟಕದಲ್ಲಿ ಮೋದಿ ಹವಾ: ಸಂಸ್ಕೃತಿ, ಪರಂಪರೆಯೊಂದಿಗೆ ಸಂಯೋಜನೆಗೊಂಡ ಕಾರ್ಯಕ್ರಮದ ನೋಟ ಹೀಗಿದೆ..

ಕಲ್ಯಾಣ ಕರ್ನಾಟಕದಲ್ಲಿ ಮೋದಿ ಹವಾ: ಸಂಸ್ಕೃತಿ, ಪರಂಪರೆಯೊಂದಿಗೆ ಸಂಯೋಜನೆಗೊಂಡ ಕಾರ್ಯಕ್ರಮದ ನೋಟ ಹೀಗಿದೆ..

ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ ಹಾಗೂ ಕಲಬುರಗಿ ಭಾಗಕ್ಕೆ ಇಂದು ಪ್ರಧಾನಿ ಮೋದಿ ಆಗಮಿಸಿದ್ದಾರೆ. ಈ ವೇಳೆ ಕಾರ್ಯಕ್ರಮಗಳಲ್ಲೆಲ್ಲ ಭಾರಿ ಪ್ರಮಾಣದ ಜನಸ್ತೋಮವೂ ಸೇರಿತ್ತು. ಯಾದಗಿರಿ ಜಿಲ್ಲೆಯಲ್ಲಿ ಕಣ್ಣು ಹಾಯಿಸಿದಲ್ಲೆಲ್ಲ ಜನವೋ ಜನ ಎಂದು ಮೋದಿ ತಮ್ಮ ಭಾಷಣದ ವೇಳೆ ಹೇಳಿದರು. ಯಾದಗಿರಿಯ ಕೊಡೆಕಲ್‌ನಲ್ಲಿ ನಡೆದ ಸಮಾವೇಶದಲ್ಲಿ ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 'ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ವಂದನೆಗಳು..' ಎಂದು ಕನ್ನಡದಲ್ಲಿಯೇ ಮೋದಿ ಮಾತು ಆರಂಭಿಸಿದರು. ಈ ವೇಳೆ ಜನಸಾಗರ ಮೋದಿ.. ಮೋದಿ ಎನ್ನುವ ಘೋಷಣೆಗಳ ಮೂಲಕ ಕರತಾಡನ ಮಾಡಿದರು.  

2 Min read
BK Ashwin
Published : Jan 19 2023, 02:44 PM IST
Share this Photo Gallery
  • FB
  • TW
  • Linkdin
  • Whatsapp
17

'ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ವಂದನೆಗಳು..' ಎಂದು ಪ್ರಧಾನಿ ಮೋದಿ ಕನ್ನಡದಲ್ಲಿಯೇ ಮೋದಿ ಮಾತು ಆರಂಭಿಸಿದರು. ಈ ವೇಳೆ, ಜನಸಾಗರ ಮೋದಿ.. ಮೋದಿ ಎನ್ನುವ ಘೋಷಣೆಗಳನ್ನು ಕೂಗಿದರು. ಇನ್ನು, ಈ ಸಮಾವೇಶದಲ್ಲಿ ಕಣ್ಣು ಹಾಯಿಸಿದಲ್ಲೆಲ್ಲಾ ಜನರೇ ಕಾಣುತ್ತಿದ್ದಾರೆ. ಇದು ನನಗೆ ಬಹಳ ಖುಷಿ ನೀಡಿದೆ. ಪೆಂಡಾಲ್‌ ಹೊರಗಡೆಯೂ ಜನ ಬಿಸಿಲಲ್ಲಿ ನಿಂತಿದ್ದಾರೆ. ಅವರನ್ನೂ ನಾನು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.
 

27

ನಿಮ್ಮ ಪ್ರೀತಿ, ಆಶೀರ್ವಾದವೇ ನನ್ನ ಶಕ್ತಿ. ಯಾದಗಿರಿ ಸಮೃದ್ಧ ಇತಿಹಾಸವನ್ನು ಹೊಂದಿದೆ. ಪ್ರತಿ ಕ್ಷೇತ್ರವೂ ಸಂಸ್ಕೃತಿ ಪರಂಪರೆಯೊಂದಿಗೆ ಸಂಯೋಜನೆಗೊಂಡಿದೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೆ, ಸುರಪುರದ ರಾಜಾ ವೆಂಕಟಪ್ಪ ನಾಯಕ್‌ ಅವರನ್ನು ಪ್ರಧಾನಿ ಮೋದಿ ಈ ವೇಳೆ ನೆನಪಿಸಿಕೊಂಡಿದ್ದಾರೆ.  
 

37

ದೇಶದ ಮೊದಲ ಸ್ವಯಂಚಾಲಿತ ನೀರಾವರಿ ತಂತ್ರಜ್ಞಾನ ಇದಾಗಿದ್ದು, ಸ್ಕಾಡಾಗೇಟ್‌ ಅನಾವರಣ ಮಾಡಿದ್ದಾರೆ. 1050 ಕೋಟಿ ವೆಚ್ಚದಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗೆ ಸ್ಕಾಡಾಗೇಟ್‌ ನಿರ್ಮಾಣ ಮಾಡಲಾಗಿದೆ. ಇದೇ ವೇಳೆ ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇಗೂ ಅಡಿಗಲ್ಲು ಹಾಕಿದ್ದಾರೆ. ಇದು ಕಲಬುರಗಿ-ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಂದ ಹಾದು ಹೋಗಲಿದೆ. 6 ಪಥಗಳ ಗ್ರೀನ್‌ ಫೀಲ್ಡ್‌ ಎಕ್ಸ್‌ಪ್ರೆಸ್‌ ವೇ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಸರಿ ಶಾಲು ಹೊದೆಸಿ, ಪೇಟಾ ಹಾಗೂ ಕಾಮಧೇನು ಉಡುಗೊರೆ ನೀಡಿ ಸನ್ಮಾನ ಮಾಡಿದರು. 

47

ಕಾರ್ಯಕ್ರಮಕ್ಕೆ ಲಂಬಾಣಿ ಜನಾಂಗದವರು ಭಾರಿ ಸಂಖ್ಯೆಯಲ್ಲಿ ಆಗಮಿಸಿದ್ದರು. ಕಲಬುರಗಿಯಲ್ಲಿ ಪ್ರಧಾನಿ ಮೋದಿ 50 ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. 

57

ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಮಾಥ್ರವಲ್ಲ, ಸುತ್ತಮುತ್ತಲೂ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅದರಲ್ಲೂ, ಹಲವು ಲಂಬಾಣಿ ಜನಾಂಗದವರು ಈ ಕಾರ್ಯಕ್ರಮದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಹಾಜರಿದ್ದರು. 

67

ಪ್ರಧಾನಿ ಭಾಗವಹಿಸುವಲ್ಲಿ ಜರ್ಮನ್‌ ಶೈಲಿಯ ಹೊಸ ತಂತ್ರಜ್ಞಾನದ ಚಪ್ಪರ, ವೇದಿಕೆ ನಿರ್ಮಿಸಿದ್ದು, ಗಣ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರಿಗೆ ಸೂಕ್ತ ಸೌಲಭ್ಯ ಸುರಕ್ಷೆ, ಊಟ, ಉಪಹಾರ ಪಾರ್ಕಿಂಗ್‌ ಹಾಗೂ ಇನ್ನಿತರ ಮೂಲ ಸೌಕರ್ಯ ವ್ಯವಸ್ಥೆಯನ್ನು ಎಲ್ಲಾ ಇಲಾಖೆಗಳ ಮಧ್ಯೆ ಸಮನ್ವಯ ಮೂಲಕ ಸಿದ್ಧತೆ ನಡೆಸಲಾಗಿದೆ. 

77

ಪ್ರಧಾನಿ ಮೋದಿ ಜನರಿಗೆ ಹಕ್ಕು ಪತ್ರ ವಿತರಿಸಿದಾಗ, ಹಲವು ಯೋಜನೆಗಳಿಗೆ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಘೋಷಿಸಿದ್ದಕ್ಕೆ ಜನತೆ ಹರ್ಷ ವ್ಯಕ್ತಪಡಿಸಿ ಚಪ್ಪಾಳೆ ಹೊಡೆದಿದ್ದಾರೆ. 

About the Author

BA
BK Ashwin
ನರೇಂದ್ರ ಮೋದಿ
ಕಲಬುರಗಿ
ಯಾದಗಿರಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved