MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
India Sugar Prices
AKKA Kannada Film Festival
Hubballi Pune AC Sleeper Bus
Government KPS Schools
Tomato & Coriander Price Crash
Central Government Jobs
Minister B Nagendra vs BJP
Karnataka SIR 2026
2027 State Elections India
Mangalore Railway Jurisdiction
  • Home
  • News
  • State
  • Rain: ಮುಂಗಾರು ಎಫೆಕ್ಟ್; ರಾಜ್ಯದ ಕರಾವಳಿಯಲ್ಲಿ ಅಬ್ಬರದ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

Rain: ಮುಂಗಾರು ಎಫೆಕ್ಟ್; ರಾಜ್ಯದ ಕರಾವಳಿಯಲ್ಲಿ ಅಬ್ಬರದ ಮಳೆ; ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, 'ಎಲ್‌ ನೀನೋ' ಪರಿಣಾಮದಿಂದಾಗಿ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಇದು ಕೃಷಿ ಚಟುವಟಿಕೆಗಳ ಮೇಲೆ ಅಲ್ಪ ಪರಿಣಾಮ ಬೀರಬಹುದು.

2 Min read
Author : Kannadaprabha News
Published : Jun 06 2026, 09:07 AM IST
Share this Photo Gallery
  • FB
  • TW
  • Linkdin
  • Whatsapp
16
ಮುಂಗಾರು ಮಳೆ ಆರಂಭ
Image Credit : Kannada Prabha

ಮುಂಗಾರು ಮಳೆ ಆರಂಭ

ರಾಜ್ಯಕ್ಕೆ ಮುಂಗಾರು ಮಳೆಯ ಪ್ರವೇಶವಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಮುಂಗಾರು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ. ಇಡೀ ರಾಜ್ಯಕ್ಕೆ ಜೂ.10ರ ವೇಳೆಗೆ ಮುಂಗಾರು ವ್ಯಾಪಿಸುವ ಸಾಧ್ಯತೆ ಇದೆ. ಗಾಳಿಯ ವೇಗ ಮತ್ತು ದಿಕ್ಕು ಆಧಾರದ ಮೇಲೆ ಒಂದೆರೆಡು ದಿನ ಹೆಚ್ಚು ಕಡಿಮೆಯಾಗಬಹುದು ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಕಾಸರಗೋಡು ವ್ಯಾಪ್ತಿಯಲ್ಲಿ ರೆಡ್ ಅಲರ್ಟ್
Image Credit : Gemini

ಕಾಸರಗೋಡು ವ್ಯಾಪ್ತಿಯಲ್ಲಿ ರೆಡ್ ಅಲರ್ಟ್

ಇನ್ನು ಕೇರಳದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕದ ಗಡಿ ಕಾಸರಗೋಡು ವ್ಯಾಪ್ತಿಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅನಾವಶ್ಯಕವಾಗಿ ಹೊರಗೆ ಬರದಂತೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಇಲ್ಲಿವರೆಗೆ ಯಾವ ಜಿಲ್ಲೆಯಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ. 

Related Articles

Related image1
ಮಗಳ ಜನ್ಮದಿನಕ್ಕೆ ತನ್ನೂರಿನ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ನೆರವು ನೀಡಿದ ಉದ್ಯಮಿ
Related image2
ನೋಟು ರದ್ದತಿ ಬಳಿಕ ವಂಚನೆಯ ₹6 ಕೋಟಿ ನೋಟು ಸುಟ್ಟಿದ್ದ ವ್ಯಕ್ತಿ! ಆರೋಪಿಯಿಂದ ತಪ್ಪೊಪ್ಪಿಗೆ
36
ಇಲ್ಲಿ ವಾಡಿಕೆಗಿಂತ ಕಡಿಮೆ ಮಳೆ
Image Credit : Asianet News

ಇಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇ.10ರಿಂದ 15ರಷ್ಟು ಕಡಿಮೆ ಮಳೆಯಾಗುತ್ತದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಮಳೆಯಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತದೆ. ಮುಂದಿನ ತಿಂಗಳು ‘ಎಲ್‌ ನೀನೋ’ ಪರಿಣಾಮ ತೀವ್ರವಾಗಿರುತ್ತದೆ. ಆದರೆ, ಅದರ ಪರಿಣಾಮ ಜೂನ್‌ ತಿಂಗಳಿನಲ್ಲಿಯೇ ಆರಂಭವಾಗಿದೆ. ಹೀಗಾಗಿ, ಮಳೆ ಕಡಿಮೆಯಾಗುತ್ತದೆ ಎಂದು ಶ್ರೀನಿವಾಸ ರೆಡ್ಡಿ ಹೇಳಿದರು.

46
ಕೃಷಿ ಚಟುವಟಿಕೆ ಮೇಲೆ ಅಲ್ಪ ಪರಿಣಾಮ
Image Credit : Gemini

ಕೃಷಿ ಚಟುವಟಿಕೆ ಮೇಲೆ ಅಲ್ಪ ಪರಿಣಾಮ

ಮುಂಗಾರು ಮಳೆ ಪ್ರವೇಶವಾಗುವ ಹೊತ್ತಿಗೆ ರಾಜ್ಯದ ಹಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಪೂರ್ವ ಮುಂಗಾರು ಮಳೆ ನೋಡಿಕೊಂಡು ಕೃಷಿಕರು ಬಿತ್ತನೆ ಕೆಲಸ ಆರಂಭಿಸಿದ್ದಾರೆ. ಮುಂಗಾರು ಮಳೆ ವಾಡಿಕೆಗಿಂತ ಶೇ.10ರಷ್ಟು ಕಡಿಮೆಯಾದರೂ ಕೃಷಿ ಚಟುವಟಿಕೆಗಳ ಮೇಲೆ ಅಂತಹ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳು ಇಲ್ಲ. ಆದರೂ, ಕೆಲವೆಡೆ ಕೃಷಿ ಚಟುವಟಿಕೆಗೆ ಅಗತ್ಯವಿರುವಷ್ಟು ಮಳೆ ನೀರು ಲಭ್ಯವಾಗದೇ ಇರಬಹುದು ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.

56
ರಾಜ್ಯದ ವಿವಿಧೆಡೆ ಮಳೆ
Image Credit : Asianet News

ರಾಜ್ಯದ ವಿವಿಧೆಡೆ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗರಿಷ್ಠ 9 ಸೆಂ.ಮೀ. ಮಳೆಯಾಗಿದೆ. ಕಾರವಾರ ಮತ್ತು ಮಂಕಿಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕುಮಟಾ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ತಲಾ 5 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತಲಾ 4 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಅಂಡಮಾನ್‌ ಕಡಲಲ್ಲಿ ನೈಸರ್ಗಿಕ ಅನಿಲ ಪತ್ತೆ; 1900 ಮೀಟರ್‌ಗಿಂತಲೂ ಹೆಚ್ಚು ಆಳದಲ್ಲಿರುವ ಬಾವಿ

66
ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಮಳೆ
Image Credit : Asianet News

ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಮಳೆ

ಕೊಡಗು ಜಿಲ್ಲೆಯ ಭಾಗಮಂಡಲ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಉಡುಪಿ ಜಿಲ್ಲೆಯ ಕೋಟಾ, ಕುಂದಾಪುರ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ, ಸುಳ್ಯ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕರ್ನಾಟಕ ಮಳೆ
ಮಾನ್ಸೂನ್
ಮುಂಗಾರು ಮಳೆ

Latest Videos
Recommended Stories
Recommended image1
ಸಿಇಟಿ ತಾತ್ಕಾಲಿಕ ಫಲಿತಾಂಶ ರಾತ್ರಿ ಪ್ರಕಟ, ಸಂಜೆ 4ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
Recommended image2
SIR ಬಳಿಕ ರಾಜ್ಯದ ಕರಡು ಮತದಾರರ ಪಟ್ಟಿ ಇಂದು ಪ್ರಕಟ; ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?
Recommended image3
Karnataka Latest News Live: ಸಿಇಟಿ ತಾತ್ಕಾಲಿಕ ಫಲಿತಾಂಶ ರಾತ್ರಿ ಪ್ರಕಟ, ಸಂಜೆ 4ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
Related Stories
Recommended image1
ಮಗಳ ಜನ್ಮದಿನಕ್ಕೆ ತನ್ನೂರಿನ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ನೆರವು ನೀಡಿದ ಉದ್ಯಮಿ
Recommended image2
ನೋಟು ರದ್ದತಿ ಬಳಿಕ ವಂಚನೆಯ ₹6 ಕೋಟಿ ನೋಟು ಸುಟ್ಟಿದ್ದ ವ್ಯಕ್ತಿ! ಆರೋಪಿಯಿಂದ ತಪ್ಪೊಪ್ಪಿಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved