ರಾಮನಗರದಲ್ಲಿ ಕುಖ್ಯಾತ ಅಂತರಾಜ್ಯ ವಾಹನ ಕಳ್ಳರ ಬಂಧನ: 2 ಗೂಡ್ಸ್, 3 ಕಾರು 10 ಬೈಕ್, ವಾಹನಗಳ ಜಪ್ತಿ
ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಇಬ್ಬರು ಕುಖ್ಯಾತ ಅಂತರಾಜ್ಯ ವಾಹನ ಕಳ್ಳರನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 15ಕ್ಕೂ ಹೆಚ್ಚು ಕಳವು ಮಾಡಲಾಗಿದ್ದ ವಾಹನಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.

ರಾಮನಗರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ
ರಾಮನಗರ: ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಅಂತರಾಜ್ಯ ವಾಹನ ಕಳ್ಳರ ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ 15ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಇಬ್ಬರು ಅಂತಾರಾಜ್ಯ ವಾಹನ ಕಳ್ಳರ ಬಂಧನ
27 ವರ್ಷದ ಶಾಹೀದ್ ಹಾಗೂ 40 ವರ್ಷದ ಅಪ್ಸರ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 15ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬರೀ ರಾಮನಗರವೊಂದರಲ್ಲೇ 5ಕ್ಕೂ ಹೆಚ್ಚು ವಾಹನಗಳನ್ನು ಕಳವು ಮಾಡಿದ್ದರು.
ಹಲವು ಜಿಲ್ಲೆ ರಾಜ್ಯಗಳಲ್ಲಿ ವಾಹನ ಕದ್ದಿದ್ದ ಖದೀಮರು
ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಬಳ್ಳಾರಿ, ಹುಬ್ಬಳ್ಳಿ ಮತ್ತು ಮಹಾರಾಷ್ಟ್ರದಲ್ಲೂ ವಾಹನ ಕಳ್ಳತನ ಮಾಡಿದ್ದ ಖದೀಮರನ್ನು ಕೊನೆಗೂ ಹೆಡೆಮುರಿ ಕಟ್ಟುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ವಾಹನ ಸವಾರರು ನಿರಾಳ
13ಕ್ಕೂ ಹೆಚ್ಚು ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕಳ್ಳರನ್ನು ರಾಮನಗರ ಗ್ರಾಮಾಂತರ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಈ ಕಳ್ಳರ ಬಂಧನದಿಂದ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ರಾಮನಗರದಲ್ಲೇ 5ಕ್ಕೂ ಹೆಚ್ಚು ವಾಹನ ಕದ್ದೋಯ್ದಿದ್ದರಿಂದ ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಖದೀಮರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡುತ್ತಿದ್ದಾರೆ : ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಟಿ ಡಿ ರಾಜೇಗೌಡ ಕಣ್ಣೀರು
ಬಂಧಿತರಿಂದ ಹಲವು ವಾಹನಗಳು ಜಪ್ತಿ
ಬಂಧಿತರಿಂದ 2 ಗೂಡ್ಸ್ ವಾಹನ, 3 ಕಾರು, ರಾಯಲ್ ಎನ್‌ಫೀಲ್ಡ್ ಬುಲೆಟ್ ಸೇರಿದಂತೆ 10 ಬೈಕ್ ಹಾಗೂ 4 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳ್ಳತನ ಮಾಡಿದ್ದ ವಾಹನಗಳ ನಂಬರ್ ಪ್ಲೇಟ್ ತೆಗೆದು ನಕಲಿ ನಂಬರ್ ಪ್ಲೇಟ್ ಬಳಸಿ ಮಾರಾಟ ಮಾಡ್ತಿದ್ದರು. ಹೀಗಾಗಿ ಇವರಿಂದ ವಾಹನ ಖರೀದಿಸಿದವರು ಕೂಡ ಸಂಕಷ್ಟಕ್ಕೀಡಾಗುತ್ತಿದ್ದರು.
ಇದನ್ನೂ ಓದಿ: ಬಾರ್‌ಗೆ ಕುಡಿಯಲು ಬಂದ ದಂಪತಿ ಬಳಿ ಗಾಂಜಾ ಕೇಳಿ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

