ವರುಣನ ಆರ್ಭಟಕ್ಕೆ ಕಂಗಾಲಾದ ಕರುನಾಡು: ಎಲ್ಲೆಲ್ಲೂ ನೀರೇ ನೀರು..!
ಬೆಂಗಳೂರು(ಜು.24): ಕೆಳದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಸಾವಿವಾರು ಸಂಖ್ಯೆಯಲ್ಲಿ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲೂ ಭಾರೀ ಮಳೆಯಾಗುತ್ತಿರವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಲಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೀಗಾಗಿ ಬೆಳೆದಿದ್ದ ಬೆಳೆಯೆಲ್ಲಾ ನೀರುಪಾಲಾಗಿದೆ. ಆದರೆ, ಇಂದು(ಶನಿವಾರ) ಬೆಳಿಗ್ಗೆಯಿಂದ ಕೊಂಚ ಮಟ್ಟಿಗೆ ವರುಣ ತಣ್ಣಗಾಗಿದ್ದಾನೆ ಎಂದು ತಿಳಿದು ಬಂದಿದೆ.

ಯಾದಗಿ ಜಿಲ್ಲೆಯಲ್ಲಿರುವ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನಲೆಯಲ್ಲಿ, ಕಲಬುರ್ಗಿ ಯಾದಗಿರಿ ರಾಯಚೂರು ಜಿಲ್ಲೆಗಳ ಸಂಪರ್ಕಿಸುವ, ರಾಜ್ಯ ಹೆದ್ದಾರಿಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ನೀರಿನಲ್ಲಿ ಮುಳುಗಿದೆ.
3.5 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನಲೆಯಲ್ಲಿ, ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸೇತುವೆ ಮೇಲಿನ ರಸ್ತೆ ಸಂಚಾರವನ್ನು ನಿನ್ನೆ(ಶುಕ್ರವಾರ) ಸಂಜೆಯಿಂದಲೇ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕೊಠಡಿ ಕುಸಿದಿದೆ. ಕಳೆದೊಂದು ವಾರದಿಂದ ನೆನೆದಿದ್ದ ಕೊಠಡಿ ಇಂದು ಏಕಾಏಕಿ ಕುಸಿದಿದೆ. ಪಕ್ಕದ ಕೊಠಡಿಯಲ್ಲಿ ಮೂವರು ಮಹಿಳೆಯರಿದ್ದರು. ಸಧ್ಯ ಯಾವುದೇ ಅನಾಹುತ ಸಂಭವಿಸಿಲ್ಲ.
ಭಾರೀ ಮಳೆಯಿಂದಾಗಿ ನೀರಿನಲ್ಲಿ ನಿಂತ ಬೆಳೆ
ಕೊಚ್ಚಿ ಹೋದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಳ್ಳಾಪುರ ಸೇತುವೆ
ಹೆಗ್ಗಾರ್, ಕಲ್ಲೇಶ್ವರ, ಕೈಗಡಿ, ಕೊಂಕಿ, ಕನಕನಹಳ್ಳಿಗಳಿಗೆ ಸಂಪರ್ಕ ಕಡಿತ
ಇಂದು ಬೆಳಗ್ಗೆಯಿಂದಲೂ ಸ್ವಲ್ಪ ವಿರಾಮ ನೀಡಿದ ಮಳೆ, ನದಿಗಳ ಪ್ರವಾಹ ಸ್ಥಿತಿ ಸ್ವಲ್ಪ ಇಳಿಕೆ
ಮಳೆ ನೀರಿನಲ್ಲಿ ಅರ್ಧಭಾಗ ಮುಳುಗಿರುವ ದೇವಸ್ಥಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ