ವೀಕೆಂಡ್‌ ಕರ್ಫ್ಯೂ: ವೈರಸ್‌ಗೆ ಡೋಂಟ್‌ ಕೇರ್‌, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ..!

First Published Apr 25, 2021, 11:27 AM IST

ಬೆಂಗಳೂರು(ಏ.25):  ಕೊರೋನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ ನೈಟ್‌ ಹಾಗೂ ವೀಕೆಂಡ್‌ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರಿಗೆ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿದೆ. ವೀಕೆಂಡ್‌ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ಅಗತ್ಯ ವಸ್ತುಗಳನ್ನ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇಂದು(ಭಾನುವಾರ) ಬೆಳಿಗ್ಗೆ ಅಗತ್ಯ ವಸ್ತುಗಳನ್ನ ಖರೀದಿಸಲು ಜನರು ಮಾರುಕಟ್ಟೆಯಲ್ಲಿ ಮುಗಿಬಿದ್ದಿದ್ದಾರೆ.