ಚಿತ್ರಗಳಲ್ಲಿ: 33,000 ಕೋಟಿಗೂ ಹೆಚ್ಚು ಮೊತ್ತದ 19 ಯೋಜನೆಗಳನ್ನ ಉದ್ಘಾಟಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಸೋಮವಾರ) ಬೆಂಗಳೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಇನ್ನು ಬೆಂಗಳೂರು ನಗರದ ಕೊಮ್ಮಘಟ್ಟದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಏಕಕಾಲದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದರು. ಅವುಗಳ ಮಾಹಿತಿ ಚಿತ್ರಗಳಲ್ಲಿ ನೋಡಿ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಸೋಮವಾರ) ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ (BASE)ಯಲ್ಲಿ ರೂ. 201 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಆವರಣವನ್ನು ಉದ್ಘಾಟಿಸಿದರು. ಮತ್ತು ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕ್ಯಾಂಪಸ್‌ಗೆ ರಸ್ತೆಮಾರ್ಗ ಮೂಲಕ ಆಗಮಿಸಿದ ಮೋದಿ ಅವರು ಸೆಂಟರ್ ಫಾರ್ ಬ್ರೈನ್ ರಿಸರ್ಚ್ (CBR) ಮೆದುಳು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದರು, ಇದಕ್ಕಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣ ಅವರು 450 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ ನಂತರ ಪ್ರಧಾನಿಯವರು ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಡಿಪಾಯ ಹಾಕಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ರೂ. 4,736 ಕೋಟಿ ವೆಚ್ಚದ ತಂತ್ರಜ್ಞಾನ ಕೇಂದ್ರಗಳಾಗಿ ಉನ್ನತೀಕರಿಸಿರುವ 150 ಐಟಿಐಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿಗೆ ಹೊಸ ರೈಲು ಸೇವೆಗೆ ವಿಡಿಯೋ ಲಿಂಕ್ ಮೂಲಕ ಹಸಿರು ನಿಶಾನೆಯನ್ನು ತೋರಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗಳು ಮತ್ತು NHAI ಯೋಜನೆಗಳ ಪ್ರದರ್ಶನವನ್ನು ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ- ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಮತ್ತು 100% ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
Modi In bengaluru
ಬೆಂಗಳೂರು ಉಪ ನಗರ ರೈಲು ಯೋಜನೆ, ಬೆಂಗಳೂರು ಕಂಟೋನ್‌ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ, ಬೆಂಗಳೂರಿನ ವರ್ತುಲ ರಸ್ತೆ-2 ಪ್ಯಾಕೇಜ್‌ಗಳು, ನೆಲಮಂಗಲ ತುಮಕೂರು ವಿಭಾಗದ 6-ಲೈನಿಂಗ್, NH-73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ಅಗಲೀಕರಣ, NH-69 ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ, ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. .(ಫೋಟೋ ಕೃಪೆ A Veeramani ಕನ್ನಡಪ್ರಭ)
Modi In bengaluru
64 ನಿಲ್ದಾಣಗಳೊಂದಿಗೆ ಅನುಮೋದಿತ 149.348 ಕಿಮೀ ಉದ್ದದ ಉಪನಗರ ರೈಲು ಯೋಜನೆಯ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು 2020ರ ಅಕ್ಟೋಬರ್ನಲ್ಲಿ ಅಂದಾಜು 15,767 ಕೋಟಿ ರೂ.ಗೆ ಅನುಮೋದನೆ ನೀಡಿತ್ತು. ಯೋಜನೆಯನ್ನು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆ-ರೈಡ್) ಅನುಷ್ಠಾನಗೊಳಿಸುತ್ತಿದ್ದು, ಯೋಜನೆ ಪೂರ್ಣಗೊಳಿಸಲು 2026ರ ಗಡುವು ನೀಡಲಾಗಿದೆ. .(ಫೋಟೋ ಕೃಪೆ A Veeramani ಕನ್ನಡಪ್ರಭ)
ಕರ್ನಾಟಕದಲ್ಲಿ ಪ್ರಧಾನಿ ಅವರು ಇಂದು ರೂ. 33,000 ಕೋಟಿಗೂ ಹೆಚ್ಚು ಮೊತ್ತದ 19 ಯೋಜನೆಗಳ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.(ಫೋಟೋ ಕೃಪೆ A Veeramani ಕನ್ನಡಪ್ರಭ)