Photos ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಗ್ರ್ಯಾಂಡ್ ಎಂಟ್ರಿ
ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ(ಜೂನ್.20) ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದರಂತೆ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. ಇಲ್ಲಿವೆ ಚಿತ್ರಗಳು.
ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು IAFನ ವಿಶೇಷ ವಿಮಾನದಲ್ಲಿಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
IAFನ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಬಂದಿಳಿದ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಲ್ಲೇ ಹಾಕಿ ಪುಸ್ತಕ ನೀಡಿ ಸ್ವಾಗತಿ ಕೋರಿದರು.
ಇನ್ನು ನರೇಂದ್ರ ಮೋದಿಅ ವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಸ್ವಾಗತ ಕೋರಿದರು. ಈ ವೇಳೆ ಮೋದಿ ಹಾಗೂ ಯಡಿಯೂರಪ್ಪ ಪರಸ್ಪರ ಕೈ-ಕೈ ಹಿಡಿದು ನಗು ಬೀಡಿದರು.
ಪ್ರಧಾನಿ ನರೇಂದ್ರ ಮೋದಿ ನೋಡಲು ಮೆಖ್ರಿ ಸರ್ಕಲ್ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಾಮಾಯಿಸಿದ್ದು, ಜೈ ಜೈ ಮೋದಿ. ಜೈ ಶ್ರೀರಾಮ್ ಚಂದ್ರ ಕಿ ಜೈ ಅಂತಾ ಕಾರ್ಯಕರ್ತರು ಜೈಕಾರ ಹಾಕಿದರು.
ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.
ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಬಿಜೆಪಿ ಮಹಿಳಾ ಮಣಿಗಳು ಸಹ ಆಗಮಿಸಿದ್ರು. ಅವರೆಲ್ಲರೂ ಕೇಸರಿ ಸೀರೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿದೆ.