MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಹುಬ್ಬಳ್ಳಿಗೆ 10 ಹೊಸ ಮೆಮು ರೈಲುಗಳಿಗೆ ಜೋಶಿ ಒತ್ತಾಯ; ಭರವಸೆ ಕೊಟ್ಟ ಅಶ್ವಿನಿ ವೈಷ್ಣವ್

ಹುಬ್ಬಳ್ಳಿಗೆ 10 ಹೊಸ ಮೆಮು ರೈಲುಗಳಿಗೆ ಜೋಶಿ ಒತ್ತಾಯ; ಭರವಸೆ ಕೊಟ್ಟ ಅಶ್ವಿನಿ ವೈಷ್ಣವ್

ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ. ಇದಕ್ಕೆ ರೈಲ್ವೆ ಸಚಿವರೂ ಒಪ್ಪಿಗೆಯ ಭರವಸೆ ನೀಡಿದ್ದಾರೆ.

2 Min read
Author : Sathish Kumar KH
Published : Jul 30 2025, 06:59 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ನವದೆಹಲಿ (ಜು.30): ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಪ್ರಲ್ಹಾದ ಜೋಶಿ ಮನವಿ ಮಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Indian Railway

ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದರು. 

ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿ ಆಗಿದ್ದು, ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಿರುತ್ತಾರೆ. ಹಾಗಾಗಿ ಇಲ್ಲಿ ಹೊಸ ಮೆಮು (ಮೇನ್‌ಲೈನ್‌ ಎಲೆಕ್ಟ್ರಿಕ್‌ ಮಲ್ಟಿಪಲ್‌ ಯೂನಿಟ್‌) ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

Related Articles

Related image1
ಜಿಎಸ್‌ಟಿ ನೋಟಿಸ್‌ ಕೊಟ್ಟಿದ್ದು ರಾಜ್ಯ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Related image2
ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ
36
Image Credit : Indian Railway

ಪ್ಯಾಸೆಂಜರ್‌ ರೈಲು ಸಹ ಓಡಿಸಲು ಮನವಿ:

ಹುಬ್ಬಳ್ಳಿ ನಗರಕ್ಕೆ ಶಿಕ್ಷಣ, ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಅಸಂಖ್ಯಾತ ಜನ ಸಂಚರಿಸುತ್ತಾರೆ. ದಿನನಿತ್ಯದ ರೈಲುಗಳು ಭರ್ತಿಯಾಗಿರುತ್ತವೆ. ಹಾಗಾಗಿ ಜನ ಸಂಚಾರ ಅನುಕೂಲಕ್ಕೆ ಮೆಮು ರೈಲುಗಳು ಅಗತ್ಯತೆಯಿದೆ. ಈ ಭಾಗದಲ್ಲಿ ರಸ್ತೆ ಸಾರಿಗೆಗಿಂತ ರೈಲು ಸಂಚಾರ ಅನುಕೂಲಕರವಾಗಿ ಪರಿಣಮಿಸಿದ್ದು, ಕೋವಿಡ್‌ ವೇಳೆ ಸ್ಥಗಿತಗೊಳಿಸಿದ್ದ ಅನೇಕ ಪ್ಯಾಸೆಂಜರ್‌ ರೈಲು ಸಂಚಾರ ಸಹ ಆರಂಭಿಸುವಂತೆ ಸಚಿವ ಜೋಶಿ ಮನವಿ ಮಾಡಿದರು.

46
Image Credit : Indian Railway

ಬೆಂಗಳೂರು ರೈಲು ನಿಲ್ದಾಣ ಬಿಟ್ಟರೆ ಹುಬ್ಬಳ್ಳಿಯೇ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿದ್ದು, ನಿತ್ಯ ಕಡಿಮೆ ಎಂದರೂ 50 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ ತುಂಬಿರುತ್ತದೆ. ನೈರುತ್ಯ ರೈಲ್ವೆ ವಲಯದ ಮುಖ್ಯ ಕಚೇರಿ ಹೊಂದಿರುವ ಹುಬ್ಬಳ್ಳಿ ನಿಲ್ದಾಣ ಭಾರತೀಯ ರೈಲ್ವೆಯಲ್ಲಿ ಮಹತ್ತರವಾಗಿದ್ದು, ಅಂತರಾಷ್ಟ್ರೀಯ ಮಟ್ಟಕ್ಕೆ ಪರಿವರ್ತಿಸುವುದು ಅತ್ಯಗತ್ಯವಾಗಿದೆ ಎಂದು ಅಶ್ವಿನಿ ವೈಷ್ಣವ್‌ ಅವರಿಗೆ ಮನವರಿಕೆ ಮಾಡಿಕೊಟ್ಟರು.

56
Image Credit : Indian Railway

ಮತ್ತೊಂದು ರೈಲ್ವೆ ಬ್ರಿಡ್ಜ್‌ ನಿರ್ಮಾಣಕ್ಕೆ ಬೇಡಿಕೆ:

ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣವಾಗಿ ಪರಿವರ್ತಿಸುವ ಬಗ್ಗೆ ಸಹ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ, ನಗರದ ಗದಗ ರಸ್ತೆ ಮೇಲಿರುವ ಡಬಲ್‌ ಲೈನ್ ರೈಲ್ವೆ ಬ್ರಿಡ್ಜ್‌ನ್ನು 4 ಲೈನ್‌ಗೆ ವಿಸ್ತರಿಸುವ ಸಲುವಾಗಿ ಇನ್ನೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಮುಂದಿಟ್ಟರು ಸಚಿವ ಪ್ರಲ್ಹಾದ ಜೋಶಿ. 

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಹ ಈ ಬಗ್ಗೆ ಗಮನ ಸೆಳೆದರು. ಉತ್ತರ ಕರ್ನಾಟಕದ ರೈಲ್ವೆ ಪ್ರತಿಯೊಂದು ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

66
Image Credit : Indian Railway

ಹುಬ್ಬಳ್ಳಿ ಆಧಾರ್‌ ಸೇವಾ ಕೇಂದ್ರʼ ಸ್ಥಾಪನೆಗೆ ಮನವಿ: 

ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ʼಆಧಾರ್ ಸೇವಾ ಕೇಂದ್ರʼವಾಗಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದರು. ವಾಣಿಜ್ಯ ನಗರಿ ಹುಬ್ಬಳ್ಳಿ ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿದ್ದು, ಇಲ್ಲೀಗ ಆಧಾರ್‌ ಸೇವಾ ಕೇಂದ್ರ ಅತ್ಯಂತ ಅವಶ್ಯಕವಾಗಿದೆ. ದೇಶಾದ್ಯಂತ ಪ್ರತಿ ಜಿಲ್ಲಾವಾರು ಕೇಂದ್ರದ ಜೊತೆಗೆ ಪ್ರಮುಖ ನಗರಗಳಲ್ಲಿ ಸಹ ಈ ಕೇಂದ್ರಗಳನ್ನು ಮುಂದುವರಿಸುವಂತೆ ಕೋರಿದರು. ಜಿಲ್ಲಾ ಕೇಂದ್ರದ ಜತೆ ಹುಬ್ಬಳ್ಳಿ ಮತ್ತಿತರ ಪ್ರಮುಖ ನಗರಗಳಲ್ಲಿ ಆಧಾರ್‌ ಸೇವಾ ಕೇಂದ್ರಗಳನ್ನು ಮುಂದುವರಿಸುವಂತೆ ಟೆಂಡರ್ ಕರೆಯಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಭಾರತೀಯ ರೈಲ್ವೆ
ಪ್ರಲ್ಹಾದ್ ಜೋಶಿ
ವಿ. ಸೋಮಣ್ಣ
ಧಾರವಾಡ
 
3rd ODI • AUS vs ENG 2026
Live
AUSAUS
-
ENGENG
(32.1 ov)195/5
ENG chose to bat.
Schedule ›
2nd TEST • PAK vs SL 2026
Live
PAKPAK
(52.0 ov)164/4
SLSL
98
Day 2 - Session 1
Schedule ›
26th T20 • WBBLT20
HH-WHH-W
Thu, 19 Nov, 2026
PS-WPS-W
10:10 am
Match yet to begin.
Schedule ›
27th T20 • WBBLT20
BH-WBH-W
Thu, 19 Nov, 2026
ST-WST-W
01:40 pm
Match yet to begin.
Schedule ›
2nd ODI • AUS vs ENG 2026
Result
AUSAUS
220
ENGENG
355/6
ENG beat AUS by 135 runs
Schedule ›
5th ODI • NZ vs IND 2026
Result
NZNZ
187
INDIND
209
IND beat NZ by 22 runs
Schedule ›
1st ODI • AUS vs ENG 2026
Result
AUSAUS
132/3
ENGENG
131
AUS won by 7 wickets
Schedule ›
4th ODI • NZ vs IND 2026
Result
NZNZ
333
INDIND
89
NZ beat IND by 244 runs
Schedule ›
3rd ODI • NZ vs IND 2026
abandoned
NZNZ
-
INDIND
-
Match abandoned
Schedule ›
1st TEST • PAK vs SL 2026
Result
PAKPAK
434 & 284/8
SLSL
446
Match drawn
Schedule ›
Latest Videos
Recommended Stories
Recommended image1
₹16000 ಕೋಟಿ ರು. ವೆಚ್ಚದ 2 ಗ್ರಾಮೀಣ ರಸ್ತೆ ಸ್ಕೀಂಗೆ ನಾಡಿದ್ದು ಸಿಎಂ ಡಿಕೆ ಚಾಲನೆ!
Recommended image2
BK Hariprasad: ಪಂಚಾಯ್ತಿ ಸ್ಥಾನವನ್ನೂ ಬಿಟ್ಟುಕೊಡದ ಕಾಲದಲ್ಲಿ ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಮಹಾನ್ ನಾಯಕಿ ಸೋನಿಯಾ ಗಾಂಧಿ:
Recommended image3
Karnataka Latest News Live: ದಕ್ಷಿಣ ಕನ್ನಡ ಪಾಣೆಮಂಗಳೂರು ಬಳಿ ನಡೆದಿದ್ದ ₹8.35 ಲಕ್ಷ ದರೋಡೆ ಪ್ರಕರಣ - ಮೂವರು ಆರೋಪಿಗಳು ಅರೆಸ್ಟ್
Related Stories
Recommended image1
ಜಿಎಸ್‌ಟಿ ನೋಟಿಸ್‌ ಕೊಟ್ಟಿದ್ದು ರಾಜ್ಯ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Recommended image2
ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved