ರಾಯರ ದರ್ಶನಕ್ಕೆ ಹೊರಟವರ ವಾಹನ ಅಪಘಾತ; ಸ್ಥಳದಲ್ಲಿಯೇ 8 ಭಕ್ತರ ದುರ್ಮರಣ, 13 ಮಂದಿಗೆ ಗಾಯ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಯರ ದರ್ಶನಕ್ಕೆ ಬೊಲೆರೋ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಭೀಕರ ಅಪಘಾತ
ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕ ಚಿಕ್ಕಬಳ್ಳಾಪುರ ಮೂಲದ ಎಂಟು ಭಕ್ತರು ಮೃತರಾಗಿದ್ದಾರೆ. ಅಪಘಾತದ ತೀವ್ರತೆಗೆ ಭಕ್ತರಿದ್ದ ವಾಹನ ನಜ್ಜುಗುಜ್ಜಾಗಿದೆ.
21 ಜನರು ಪ್ರಯಾಣಿಸುತ್ತಿದ್ದ ವಾಹನ
ಚಿಕ್ಕಬಳ್ಳಾಪುರ ಮೂಲದ ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 21 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಎಂಟು ಜನರ ಸಾವು
21 ಜನರು ಪೈಕಿ ಆರು ಭಕ್ತರು ಸ್ಥಳದಲ್ಲಿ ಸಾವನ್ನಪ್ಪಿದ್ರೆ, ಇಬ್ಬರು ಎಮಿಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಕಾರಿಯಾಗದೇ ಉಸಿರು ಚೆಲ್ಲಿದ್ದಾರೆ. ಇನ್ನುಳಿದ 13 ಜನರಿಗೆ ಎಮಿಗನೂರು ಹಾಗೂ ಕರ್ನೂಲ್ ಸರ್ಕಾರಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತಕ್ಕೆ ಕಾರಣ ಏನು?
ಮೃತರ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತಕ್ಕೊಳಗಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿದೆ.
ಸ್ಥಳದ ಪರಿಶೀಲನೆ
ಬೊಲೆರೋ ವಾಹನಕ್ಕೆ ಡಿಕ್ಕಿಯಾದ ಬಳಿಕ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ಸಹ ಪಲ್ಟಿಯಾಗಿದೆ. ಪೊಲೀಸರು ಮೃತರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಅಪರಾಧಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ನಾಳೆಯೇ ಕಳೆದುಕೊಳ್ತಾರಾ? ಜನರ ಪ್ರಶ್ನೆಗೆ ಇಲ್ಲಿದೆ ಉತ್ತರ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

