ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ 40-50km ವೇಗದ ಗಾಳಿ ಜೊತೆ ಮಳೆ ಎಚ್ಚರಿಕೆ
ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರಿಸುತ್ತಿದ್ದು, ಹಲವೆಡೆ ಮಳೆಯಾಗಿದೆ. ಇದರಿಂದ ರೈತರಿಗೆ ಮಾವು ಬೆಳೆ ನಾಶವಾಗುವ ಆತಂಕ ಎದುರಾಗಿದೆ.

ಕಳೆದ ಎರಡು ವಾರಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಪೂರ್ವ ಮುಂಗಾರು ಅಬ್ಬರಿಸುತ್ತಿದೆ. ಬೇಸಿಗೆ ಆರಂಭವಾಯ್ತು ಎಂದು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದ ಜನತೆಗೆ ವರುಣ ತಂಪರೆದಿದ್ದಾನೆ. ರಾಜ್ಯದ ಹಲವೆಡೆ ಮಳೆಯಾಗುತ್ತಿರುವ ವರದಿಗಳು ಪ್ರಕಟವಾಗುತ್ತಿವೆ.
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆಯಾಗುತ್ತಿದೆ.
ಇತ್ತ ಉತ್ತರ ಒಳನಾಡಿನ ಭಾಗದ ಕಲಬುರಗಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಹಾವೇರಿ, ವಿಜಯಪುರ ಭಾಗದಲ್ಲಿ ಕಳೆದ 15 ದಿನಗಳಿಂದ ಮಳೆಯಾಗುತ್ತಿದೆ. ಗಾಳಿ ಜೊತೆ ಬರುತ್ತಿರುವ ಮಳೆ ಮಾವು ಬೆಳೆಗೆ ಹಾನಿಯನ್ನುಂಟು ಮಾಡುತ್ತಿದೆ. ಮತ್ತೆ ಮಳೆ ಹೆಚ್ಚಾದ್ರೆ ಬೆಳೆ ನಾಶವಾಗುವ ಆತಂಕದಲ್ಲಿ ರೈತರಿದ್ದಾರೆ.
ಮುಂದಿನ 48 ಗಂಟೆ ಈ ಭಾಗದಲ್ಲಿ ಮಳೆ
ಮುಂದಿನ 2 ದಿನ ಅಂದ್ರೆ 48 ಗಂಟೆ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗದಲ್ಲಿ ಪೂರ್ವ ಮುಂಗಾರು ಚುರುಕು ಪಡೆದುಕೊಳ್ಳುವ ಸಾಧ್ಯತೆಗಳಿವೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಭಾಗದಲ್ಲಿಯೂ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಶುಷ್ಕ ವಾತಾವರಣ ಇರಲಿದೆ.
ನಾಲ್ಕು ದಿನದ ಹಿಂದೆ ಮಳೆಯಾಗಿರುವ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ 35 ರಿಂದ 32 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಸದ್ಯ ರಾಜಧಾನಿಯಲ್ಲಿ ಯಾವುದೇ ಮಳೆ ಸಾಧ್ಯತೆ ತುಂಬಾ ಕಡಿಮೆಯಾಗಿದೆ. ಸುಮಾರು ನಾಲ್ಖೈದು ಗಂಟೆ ಸುರಿದ ಮಳೆ ಬೆಂಗಳೂರಿಗರ ಜನಜೀವನ ಅಸ್ತವ್ಯಸ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ