ಪ್ರತಿಷ್ಠಿತ ದುಬೈ ಎಕ್ಸ್‌ಪೋದಲ್ಲಿ ರಾಜ್ಯ ಕರಕುಶಲ ಅಭಿವೃದ್ಧಿ ನಿಮಗದ ಮಳಿಗೆ..!
ಬೆಂಗಳೂರು(ಅ.18): ರಾಜ್ಯದ ಕರಕುಶಲ ನಿಗಮದ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಕರ್ನಾಟಕ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ದುಬೈ ಎಕ್ಸ್‌ಫೋ’ದಲ್ಲಿ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಮಳಿಗೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಡಾ. ಬೇಳೂರು ರಾಘವೇಂದ್ರ ಶೆಟ್ಟಿ
ರಾಜ್ಯದ ಕರಕುಶಲ ಉತ್ಪನ್ನಗಳಿಗೆ ಅಂತಾರಾಷ್ಟ್ರ ಮಟ್ಟದಲ್ಲಿ ಉತ್ತಮ ಬೇಡಿಕೆಯಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಎಕ್ಸ್‌ಫೋಗಳನ್ನು ಮಳಿಗೆಗಳನ್ನು ತೆರೆದು ಪ್ರಚಾರ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ವಿಶ್ವದ ವಿವಿಧ ದೇಶಗಳಲ್ಲಿ ಮಳಿಗೆಗಳನ್ನು ತೆರೆಯುವ ಚಿಂತನೆಯಿದೆ ಎಂದು ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಅವರು ಹೇಳಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೃಹತ್ ಕೈಗಾರಿಕಾ ಸಚಿವರು, ಎನ್‌ಆರ್‌ಐ ಫೌಂಡೇಷನ್‌ನ ಅಧ್ಯಕ್ಷ ದುಬೈ ಪ್ರವೀಣ್ ಶೆಟ್ಟಿ, ದುಬೈನಲ್ಲಿರುವ ಭಾರತೀಯ ಕೌನ್ಸಿಲ್ ಜನರಲ್ ಡಾ.ಅಮ್ ದೀಪ್ ಪುರಿ, ಎನ್‌ಆರ್‌ಐನ ಮಾಜಿ ಉಪಾಧ್ಯಕ್ಷೆ ಆರತಿ ಕೃಷ್ಣ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ