Minister D Sudhakar No More: ಹಿರಿಯೂರಿನ ಧ್ವನಿ ಮೌನ: ಸಚಿವ ಡಿ. ಸುಧಾಕರ್ ಇನ್ನಿಲ್ಲ
ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವರಾಗಿದ್ದ ಡಿ. ಸುಧಾಕರ್ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ತಮ್ಮ ಚಿಕ್ಕಪ್ಪನ ರಾಜಕೀಯ ಮಾರ್ಗದರ್ಶನದಲ್ಲಿ ಸಾರ್ವಜನಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು.

ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವ ಡಿ ಸುಧಾಕರ್ ನಿಧನ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವ ಡಿ ಸುಧಾಕರ್ ಇಂದು ಬೆಳಗಿನ ಜಾವ 3.15ಕ್ಕೆ ನಿಧನರಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಡಿ.ಸುಧಾಕರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸುಧಾಕರ್ ಅವರ ಮೃತದೇಹವನ್ನು ಚಿತ್ರದುರ್ಗಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿದು ಬಂದಿದೆ.

ಹಿರಿಯೂರಿನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆ
ಡಿ ಸುಧಾಕರ್ ಹಿರಿಯೂರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿದ್ದರು. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಡಿ.ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವರೆಗೆ ವಿದ್ಯಾಭ್ಯಾಸ ಮಾಡಿದ್ದರು. ನಂತರ ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದುಕೊಂಡಿದ್ದರು.
2004ರಲ್ಲಿ ಮೊದಲ ಬಾರಿ ಶಾಸಕ
2004ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗೆದ್ದಿದ್ದರು. ನಂತರ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಆಯ್ಕೆಯಾಗಿದ್ದಾರೆ. ಪದವಿ ಶಿಕ್ಷಣ ಬಳಿಕ ಬ್ಯುಸಿನೆಸ್ನಲ್ಲಿ ತೊಡಗಿಕೊಂಡಿದ್ದರು. ಪತ್ನಿ ಹರ್ಷಿಣಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಡಿ.ಸುಧಾಕರ್ ಅಗಲಿದ್ದಾರೆ.
ಚಿಕ್ಕಪ್ಪ ಜಯಣ್ಣ ಶಾಸಕರಾಗಿದ್ದರು
ಡಿ.ಸುಧಾಕರ್ ಅವರ ಚಿಕ್ಕಪ್ಪ ಎನ್. ಜಯಣ್ಣ ಚಳ್ಳಕೆರೆ ಕ್ಷೇತ್ರದಿಂದ ಶಾಕರಾಗಿದ್ದರು. ಚಿಕ್ಕಪ್ಪನ ರಾಜಕೀಯ ಉಸ್ತುವಾರಿ ಡಿ.ಸುಧಾಕರ್ ವಹಿಸಿಕೊಂಡಿದ್ದರು. ಚಿಕ್ಕಪ್ಪನ ಜೊತೆ ಬೆರೆತು ರಾಜಕೀಯಕ್ಕೆ ಸುಧಾಕರ್ ಪಾದರ್ಪಣೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

