MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Karnataka drought: ರಾಜ್ಯಕ್ಕೆ 'ಸೂಪರ್ ಎಲ್ ನಿನೋ' ಭೀತಿ! ಸಂಭವನೀಯ ಬರ ಎದುರಿಸಲು ಡಿಸಿಎಂ ಜಿ. ಪರಮೇಶ್ವರ್ ಸೂಚನೆ

Karnataka drought: ರಾಜ್ಯಕ್ಕೆ 'ಸೂಪರ್ ಎಲ್ ನಿನೋ' ಭೀತಿ! ಸಂಭವನೀಯ ಬರ ಎದುರಿಸಲು ಡಿಸಿಎಂ ಜಿ. ಪರಮೇಶ್ವರ್ ಸೂಚನೆ

'ಸೂಪರ್ ಎಲ್ ನಿನೋ' ಪರಿಣಾಮದಿಂದ ರಾಜ್ಯದಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ. ಸಚಿವ ಜಿ. ಪರಮೇಶ್ವರ್ ನೇತೃತ್ವದ ಸಭೆಯಲ್ಲಿ, ಇವುಗಳನ್ನು ನಿರ್ವಹಣೆಗೆ ಮಾಡುವುದಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

2 Min read
Author : Sathish Kumar KH
Published : Jun 25 2026, 05:23 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು/ತುಮಕೂರು (ಜೂ.25): ಜಾಗತಿಕ ಹವಾಮಾನ ಬದಲಾವಣೆ ಹಾಗೂ 'ಸೂಪರ್ ಎಲ್ ನಿನೋ' (Super El Niño) ಪರಿಣಾಮದಿಂದ ರಾಜ್ಯದಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಾಮಯ್ಯ ಸರ್ಕಾರ ಈಗಿನಿಂದಲೇ ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವ ಜಿ. ಪರಮೇಶ್ವರ್ ಅವರು, ಯಾವುದೇ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಸಭೆಯ ಪ್ರಮುಖಾಂಶಗಳು:

ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ ಈ ಸಭೆಯಲ್ಲಿ, ಮಳೆ ಕೊರತೆಯಿಂದ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಲಭ್ಯತೆ ಮತ್ತು ಕೃಷಿ ಚಟುವಟಿಕೆಗಳ ನಿರ್ವಹಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. 'ಸೂಪರ್ ಎಲ್ ನಿನೋ ಪರಿಣಾಮವಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರುವ ಸಾಧ್ಯತೆಯಿದೆ. ಇದನ್ನು ಎದುರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ (Coordination) ಕಾರ್ಯನಿರ್ವಹಿಸಬೇಕು' ಎಂದು ಪರಮೇಶ್ವರ್ ತಿಳಿಸಿದರು.

Related Articles

Related image1
ಬಾಬಾ ವಂಗಾ ಹೇಳಿರೋ ಈ ಭವಿಷ್ಯ ನಿಜವಾದ್ರೆ ಬಂಗಾರಕ್ಕಾಗಿ ಜಗತ್ತಿನಲ್ಲಿ ಶುರುವಾಗುತ್ತೆ ಬರ
Related image2
ಭಾರತಕ್ಕೆ ಮುಂಗಾರು ಆಘಾತ, ಕಳೆದ 11 ವರ್ಷದಲ್ಲೇ ಅತ್ಯಂತ ಕಳಪೆ ಮಾನ್ಸೂನ್ ಜೊತೆಗೆ ಎಲ್ ನಿನೋ
35
Image Credit : Asianet News

ಕುಡಿಯುವ ನೀರಿಗೆ ಮೊದಲ ಆದ್ಯತೆ:

ರಾಜ್ಯದ 122 ತಾಲ್ಲೂಕುಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಪ್ರಸ್ತುತ 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು 789 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, 669 ಹಳ್ಳಿಗಳಿಗೆ ಇವುಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗಾಗಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

45
Image Credit : Asianet News

ಅಧಿಕಾರಿಗಳಿಗೆ ನೀಡಿದ ಪ್ರಮುಖ ಆದೇಶಗಳು:

ಜಿಲ್ಲಾವಾರು ಕಾರ್ಯಯೋಜನೆ: ಕುಡಿಯುವ ನೀರು, ಮೇವು ಮತ್ತು ನೀರಿನ ಸಂರಕ್ಷಣೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳು ತಕ್ಷಣವೇ ಜಿಲ್ಲಾವಾರು ಕಾರ್ಯಯೋಜನೆ ಸಿದ್ಧಪಡಿಸಬೇಕು.

ಜಲಾಶಯಗಳ ನಿಗಾ: ಜಲಾಶಯಗಳ ನೀರಿನ ಮಟ್ಟ ಮತ್ತು ಅಂತರ್ಜಲ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು.

ಅನುಮತಿ ಶೀಘ್ರ: ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ತ್ವರಿತವಾಗಿ ಅನುಮತಿ ನೀಡಬೇಕು.

ಮೇವು ಬ್ಯಾಂಕ್: ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‌ಗಳ ಸ್ಥಾಪನೆ ಮತ್ತು ವಿತರಣೆಗೆ ಗಮನ ಹರಿಸಬೇಕು.

55
Image Credit : Asianet News

ಸಭೆಯಲ್ಲಿ ಹಾಜರಿದ್ದ ಹಿರಿಯ ಅಧಿಕಾರಿಗಳು ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಮುಂಬರುವ ದಿನಗಳಲ್ಲಿ ಬಿಸಿಲಿನ ತಾಪ ಮತ್ತು ನೀರಿನ ಬೇಡಿಕೆ ಹೆಚ್ಚಾಗುವುದರಿಂದ ಆಡಳಿತ ಯಂತ್ರವು ಸದಾ ಜಾಗೃತವಾಗಿರಬೇಕು ಎಂದು ಪರಮೇಶ್ವರ್ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕದ ಜಲಾಶಯಗಳು
ಡಾ. ಜಿ. ಪರಮೇಶ್ವರ್

Latest Videos
Recommended Stories
Recommended image1
Now Playing
ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Recommended image2
ಡಾ.ಬ್ರೋ, ಗ್ಲೋಬಲ್ ಕನ್ನಡಿಗ ಲೆಕ್ಕಕ್ಕಿಲ್ಲ, ಇವರೇ ನೋಡಿ ಅಸಲಿ 'ಟ್ರಾವೆಲ್ ಇನ್ ಫ್ಲೂಯೆನ್ಸರ್'! 245 ದೇಶಗಳ ಪ್ರವಾಸ!
Recommended image3
Govt Jobs: ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 6 ತಿಂಗಳಲ್ಲಿ 72,186 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ!
Related Stories
Recommended image1
ಬಾಬಾ ವಂಗಾ ಹೇಳಿರೋ ಈ ಭವಿಷ್ಯ ನಿಜವಾದ್ರೆ ಬಂಗಾರಕ್ಕಾಗಿ ಜಗತ್ತಿನಲ್ಲಿ ಶುರುವಾಗುತ್ತೆ ಬರ
Recommended image2
ಭಾರತಕ್ಕೆ ಮುಂಗಾರು ಆಘಾತ, ಕಳೆದ 11 ವರ್ಷದಲ್ಲೇ ಅತ್ಯಂತ ಕಳಪೆ ಮಾನ್ಸೂನ್ ಜೊತೆಗೆ ಎಲ್ ನಿನೋ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved