ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್ ಸಾವು, ಇಬ್ಬರು ಎಸ್‌ಐಗಳಿಗೆ ಗಂಭೀರ ಗಾಯ
ಚಿತ್ರದುರ್ಗದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು ಕುಮಟಾದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಓರ್ವ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ಅಪಘಾತ
ಚಿತ್ರದುರ್ಗದ ಹೆಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಕಾರ್ ಟಾಪ್ ಕಿತ್ತಿದ್ದು, ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಲಾರಿಗೆ ಕಾರ್ ಡಿಕ್ಕಿ
ಮೃತ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್, ಗಾಯಾಳುಗಳು ಎಸ್‌ಐ ಎಂದು ತಿಳಿದು ಬಂದಿದೆ. ಐವರು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಚಾಮರಾಜನಗರದ ಗುಂಡ್ಲುಪೇಟೆ
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು-ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ವೀರನಪುರ ಕಾಲೋನಿಯ ನಿವಾಸಿ ಪ್ರವೀಣ್(24) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ತಾಲೋಕು ಮಾದಾಪಟ್ಟಣದ ಬಳಿ ಅಪಘಾತ ನಡೆದಿದೆ.
ಕಾರು ಮತ್ತು ಟಿಪ್ಪರ್ ಡಿಕ್ಕಿ
ಮತ್ತೊಂದು ಘಟನೆಯಲ್ಲಿ ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದ ಬಳಿ ಅಪಘಾತ ಸಂಭವಿಸಿದೆ. ಅಪಘಾತ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ಗಿಳಿಶಾಸ್ತ್ರ ನಂಬಿ 35 ಲಕ್ಷ ರೂ. ಕಳೆದುಕೊಂಡ ಐಟಿ ಅಧಿಕಾರಿ! ವರ್ಗಾವಣೆಗಾಗಿ ಪಂಗನಾಮ ಹಾಕಿಸಿಕೊಂಡ ಆಫೀಸರ್ ಕಥೆ..
ಕಾರು ಡಿಕ್ಕಿ: ಬೈಕ್ ಸವಾರರಿಗೆ ಗಂಭೀರ ಗಾಯ
ಬೈಕ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹೋದರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬರ್ಗಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಗುರು ಹಾಗೂ ವಿಠಲ ಹರಿಕಾಂತ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳು ಬೆಟ್ಕುಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಬೈಕ್ ಸವಾರರು ಕಿಮಾನಿ ಕಡೆಯಿಂದ ಬೈಕ್‌ನಲ್ಲಿ ಬಂದು ಕುಮಟಾ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ, ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ತೆಲಂಗಾಣ ನೋಂದಣಿ ಹೊಂದಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: Bengaluru: 3000 ಮೆಟ್ರಿಕ್ ಟನ್ ಹಸಿ ಕಸದಿಂದ ಬಯೋಗ್ಯಾಸ್ ಉತ್ಪಾದನೆಗೆ ಕ್ರಮ: ಮಹೇಶ್ವರ್ ರಾವ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ