ಹಬ್ಬದ ಪ್ರಯಾಣಕ್ಕೆ ಮೈಸೂರು-ಬೆಂಗಳೂರು-ರಾಮೇಶ್ವರಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು
Indian Railways: ದಸರಾ, ದೀಪಾವಳಿ ಮತ್ತು ಛತ್ ಹಬ್ಬಗಳ ಪ್ರಯುಕ್ತ ನೈಋತ್ಯ ರೈಲ್ವೆಯು ಮೈಸೂರು ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ. ಈ ರೈಲು ಅಕ್ಟೋಬರ್ 5 ರಿಂದ ನವೆಂಬರ್ 30 ರವರೆಗೆ ಒಟ್ಟು 9 ಟ್ರಿಪ್‌ಗಳಲ್ಲಿ ಸಂಚರಿಸಲಿದೆ.

9 ಪ್ರಯಾಣಗಳ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು
ದಸರಾ, ದೀಪಾವಳಿ ಹಾಗೂ ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಮೈಸೂರು ಮತ್ತು ರಾಮೇಶ್ವರಂ ನಡುವೆ ಪ್ರತಿ ದಿಕ್ಕಿನಲ್ಲಿ ಒಟ್ಟು 9 ಪ್ರಯಾಣಗಳ (ಟ್ರಿಪ್) ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ.
ಅ.5 ರಿಂದ ನ.30 ರವರೆಗೆ
ರೈಲು ಸಂಖ್ಯೆ 06263 ಮೈಸೂರು- ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ಅ.5 ರಿಂದ ನ.30 ರವರೆಗೆ ಪ್ರತಿ ಸೋಮವಾರ 18:35 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ (ಮಂಗಳವಾರ) 11 ಗಂಟೆಗೆ ರಾಮೇಶ್ವರಂ ತಲುಪಲಿದೆ.
ಅ.6 ರಿಂದ ಡಿ.1 ರವರೆಗೆ
ಮರುಮಾರ್ಗದಲ್ಲಿ ರೈಲು ಸಂಖ್ಯೆ 06264 ರಾಮೇಶ್ವರಂ- ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ಅ.6 ರಿಂದ ಡಿ.1 ರವರೆಗೆ ಪ್ರತಿ ಮಂಗಳವಾರ 15:30 ಗಂಟೆಗೆ ರಾಮೇಶ್ವರಂನಿಂದ ಹೊರಟು, ಮರುದಿನ (ಬುಧವಾರ) 7:45 ಗಂಟೆಗೆ ಮೈಸೂರಿಗೆ ಆಗಮಿಸಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್, ಮಧುರೈ, ಮಾನಾಮಧುರೈ, ಪರಮಕ್ಕುಡಿ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಕೋಚ್ ಮಾಹಿತಿ
ಈ ವಿಶೇಷ ರೈಲು 21 ಬೋಗಿಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ 2 ಎಸಿ- 2 ಟೈರ್, 5 ಎಸಿ- 3 ಟೈರ್, 8 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ, 1 ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್ ಹಾಗೂ 1 ದ್ವಿತೀಯ ದರ್ಜೆ ಲಗೇಜ್ ಮತ್ತು ದಿವ್ಯಾಂಗಜನ ಬೋಗಿಗಳು ಸೇರಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

