ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
ಮದುವೆ ಮುಗಿಸಿಕೊಂಡು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಮಿನಿ ಬಸ್ ಯಲ್ಲಾಪುರ ಸಮೀಪ ಅಪಘಾತಕ್ಕೀಡಾದ ಘಟನೆ ನಡೆದಿದೆ. ಇನ್ನೇನು ಮನೆ ತಲುಪಿತು ಅನ್ನೋವಷ್ಟರಲ್ಲೇ ಘಟನೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಮದುವೆಗೆ ತೆರಳಿದ್ದ ಬಸ್ ಅಪಘಾತ
ಎಪ್ರಿಲ್ ಮೇ ತಿಂಗಳು ಸಹಜವಾಗಿ ಮದುವೆ ಸೀಸನ್. ಉರಿ ಬಿಸಿಲು ಜೋರಾಗಿದ್ದರೂ ಮದುವೆ ಸಂಭ್ರಮ ಕಳೆಗಟ್ಟಿರುತ್ತದೆ. ಹೀಗೆ ಕುಟುಂಬಸ್ಥರು ಮಿನಿ ಬಸ್ ಮೂಲಕ ಮದುವೆಗೆ ತೆರಳಿದ್ದಾರೆ. ಮದುವೆ ಮುಗಿಸಿಕೊಂಡು ಮರಳಿ ಬರುತ್ತಿದ್ದ ವೇಳೆ ಮಿನಿ ಬಸ್ ಅಪಘಾತಕ್ಕೀಡಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ಮಿನಿ ಬಸ್ ಅಪಘಾತವಾಗಿದೆ. ನಿಯಂತ್ರಣ ತಪ್ಪಿದ ಬಸ್ ಅಪಘಾತಕ್ಕೀಡಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬೆನ್ನಲ್ಲೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಅಪಘಾತದ ಬೆನ್ನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇವಲ 2 ಕಿ.ಮಿ ಸಾಗಿದರೆ ಮನೆ ತಲುಪುತ್ತಿತ್ತು
ಕುಟುಂಬಸ್ಥರು ಮಿನಿ ಬಸ್ ಮೂಲಕ ಅರಬೈಲ್ ನಿಂದ ಬೆಳಗಾವಿಯಲ್ಲಿ ನಡೆದ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿ ಕೊಂಡು ಮರಳಿ ಬರುತ್ತಿದ್ದಾಗ ಬಸ್ ಅಪಘಾತವಾಗಿದೆ. ಇನ್ನು ಕೇವಲ 2 ಕಿಲೋಮೀಟರ್ ಸಾಗಿದರೆ ಕುಟುಂಬಸ್ಥರು ಯಾವುದೇ ಅಪಾಯವಿಲ್ಲದೆ ಮನೆ ಸೇರಿಕೊಳ್ಳುತ್ತಿದ್ದರು.
ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿದ ವಾಹನ
ಯಲ್ಲಾಪುರ ಭಾಗದಲ್ಲಿ ಮಳೆಯಾಗುತ್ತಿದ್ದ ಕಾರಣ ಬಸ್ ನಿಧಾನವಾಗಿ ಸಾಗುತ್ತಿತ್ತು. ಇದರ ನಡುವೆ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿದೆ. ಮುಂಭಾಗದಲ್ಲಿ ಕುಳಿತಿದ್ದ ಹಲವರಿಗೆ ಗಾಯವಾಗಿದೆ. ಇನ್ನು ಮಕ್ಕಳು, ಹೆಣ್ಣುಮಕ್ಕಳೂ ಗಾಯಗೊಂಡಿದ್ದಾರೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ರಾಷ್ಟ್ರೀಯ ಹೆದ್ದಾರಿ 52 ರ ಅರಬೈಲ್ ಘಟ್ಟದತಿರುವಿನಲ್ಲಿ ಅಪಘಾತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಯಾಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

