ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಎಲ್ಲೆಲ್ಲಿ ಆಗಲಿದೆ ಮಳೆ? IMDಯಿಂದ ಅಧಿಕೃತ ಮಾಹಿತಿ
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಆಗಮಿಸಲಿದೆ. ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.
14

Image Credit : Gemini AI
ಮುಂಗಾರು
ಇದೇ ತಿಂಗಳು ಮೇ 26ರಂದು ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶವಾಗಲಿದೆ. ಜೂನ್ ಮೊದಲ ವಾರಕ್ಕೆ ಕರ್ನಾಟಕಕ್ಕೆ ಮುಂಗಾರು ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
24
Image Credit : imd
ಕರ್ನಾಟಕದ ಮುಂದಿನ ಹವಾಮಾನ ಬಗ್ಗೆ IMD ಹೇಳಿದ್ದು ಏನು?
- ಮೇ 26ಕ್ಕೆ ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶ ಆಗಲಿದೆ
- ಜೂನ್ ಮೊದಲವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಫಿಕ್ಸ್..
- ಮೇ 25ರವರೆಗೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಭಾರಿ ಮಳೆ
- ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ.
34
Image Credit : X
ಗಾಳಿ ಸಹಿತ ಮಳೆ
- ಕೆಲವೆಡೆ ಗಂಟೆಗೆ 50-60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
- ಕರಾವಳಿಯಲ್ಲಿ ಮುಂದಿನ ಕೆಲ ದಿನ ಸಾಧಾರಣದಿಂದ ಮಧ್ಯಮ ಮಳೆ
- ದಕ್ಷಿಣ-ಪಶ್ಚಿಮ ಮುಂಗಾರು ದೇಶಾದ್ಯಂತ ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆ
44
Image Credit : X
ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ?
- ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ನಿಲ್ಲಬಾರದು.
- ಭಾರಿ ಮಳೆಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.
- ನೀರು ತುಂಬಿರುವ ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ.
- ಮೊಬೈಲ್‌ಗೆ IMD ಹಾಗೂ ಸರ್ಕಾರದ ಹವಾಮಾನ ಎಚ್ಚರಿಕೆ ಸಂದೇಶಗಳನ್ನು ಗಮನಿಸಬೇಕು.
- ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು.
- ರೈತರು ಮಳೆ ಮುನ್ಸೂಚನೆ ನೋಡಿ ಕೃಷಿ ಚಟುವಟಿಕೆ ಯೋಜಿಸಬೇಕು.
- ಮಕ್ಕಳು ಮತ್ತು ವೃದ್ಧರು ಮಳೆಯ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos

